HomeKarnataka Newsಇ.ಡಿ ದಾಳಿ ಹಿನ್ನೆಲೆ: ಕಾಂಗ್ರೆಸ್ ನಾಯಕರನ್ನೇ ಗುರಿಯಾಗಿಸಿ ದಾಳಿ: ಸಿಎಂ ಸಿದ್ದರಾಮಯ್ಯ ಆರೋಪ

ಇ.ಡಿ ದಾಳಿ ಹಿನ್ನೆಲೆ: ಕಾಂಗ್ರೆಸ್ ನಾಯಕರನ್ನೇ ಗುರಿಯಾಗಿಸಿ ದಾಳಿ: ಸಿಎಂ ಸಿದ್ದರಾಮಯ್ಯ ಆರೋಪ

For Dai;y Updates Join Our whatsapp Group

Spread the love

ಚಾಮರಾಜನಗರ: ಕೇಂದ್ರ ಸರ್ಕಾರ ಕಾಂಗ್ರೆಸ್ ನಾಯಕರನ್ನು ಮಾತ್ರ ಗುರಿಯಾಗಿಸಿಕೊಂಡು ತನಿಖಾ ದಾಳಿಗಳನ್ನು ನಡೆಸುತ್ತಿದೆ, ಆದರೆ ಬಿಜೆಪಿ ನಾಯಕರ ಮೇಲೆ ಅಂತಹ ಕ್ರಮಗಳು ಕಾಣುತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.

ಶಾಸಕ ಎನ್.ಎ. ಹ್ಯಾರಿಸ್ ಅವರ ಪುತ್ರ ನಲಪಾಡ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ (ಇ.ಡಿ) ದಾಳಿ ನಡೆಸಿದ ಕುರಿತು ಕೇಳಿದ ಪ್ರಶ್ನೆಗೆ ಅವರು ಈ ರೀತಿಯಾಗಿ ಪ್ರತಿಕ್ರಿಯಿಸಿದರು.

ಗುಂಡ್ಲುಪೇಟೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ, ತಾನು ಮೂಢನಂಬಿಕೆಗಳಲ್ಲಿ ನಂಬಿಕೆ ಇರಿಸಿಕೊಳ್ಳುವುದಿಲ್ಲ. ಚಾಮರಾಜನಗರಕ್ಕೆ ಹಲವು ಬಾರಿ ಭೇಟಿ ನೀಡುತ್ತಿರುವುದೂ ಅದಕ್ಕಾಗಿಯೇ ಎಂದು ಹೇಳಿದರು. “ಇಲ್ಲಿ ಬಂದರೆ ಕುರ್ಚಿ ಗಟ್ಟಿಯಾಗುತ್ತದೆ” ಎಂಬ ಮಾತು ಪ್ರಾಸಂಗಿಕವಾಗಿ ಹೇಳಿದ್ದೆ ಎಂದು ಸ್ಪಷ್ಟಪಡಿಸಿದರು.

ಗ್ಯಾರಂಟಿ ಯೋಜನೆಗಳ ಬಗ್ಗೆ ಮಾತನಾಡಿದ ಅವರು, ಇದನ್ನು ವಿರೋಧಿಸುತ್ತಿದ್ದವರೇ ಈಗ ಅದೇ ಯೋಜನೆಗಳನ್ನು ಘೋಷಿಸುತ್ತಿದ್ದಾರೆ. ಗ್ಯಾರಂಟಿಗಳು ಬಡವರ ಪರ ಕಾರ್ಯಕ್ರಮಗಳು ಎಂಬುದು ಅವರಿಗೆ ಈಗ ಅರ್ಥವಾಗಿದೆ ಎಂದು ಹೇಳಿದರು.

ಮಹಿಳಾ ಮೀಸಲಾತಿ ವಿಚಾರದಲ್ಲಿ ಬಿಜೆಪಿಯ ಆರೋಪಗಳಿಗೆ ತಿರುಗೇಟು ನೀಡಿದ ಸಿಎಂ, “ಬಿಜೆಪಿಯವರೇ ಮಹಿಳಾ ಮೀಸಲಾತಿ ವಿರೋಧಿಗಳು” ಎಂದು ಆರೋಪಿಸಿದರು. ರಾಜೀವ್ ಗಾಂಧಿ ಪ್ರಧಾನಿಯಾಗಿದ್ದ ವೇಳೆ ಸಂವಿಧಾನದ 73 ಮತ್ತು 74ನೇ ತಿದ್ದುಪಡಿಗಳ ಮೂಲಕ ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳಾ ಮೀಸಲಾತಿ ಜಾರಿಗೊಂಡಿತು. ಆದರೆ ಅದನ್ನು ರಾಜ್ಯಸಭೆಯಲ್ಲಿ ವಿರೋಧಿಸಿದವರು ಇದೇ ಬಿಜೆಪಿ ಪಕ್ಷದವರು ಎಂದು ಹೇಳಿದರು.

ಇನ್ನು ಎನ್‌ಡಿಎ ಸರ್ಕಾರ ರಾಜಕೀಯ ಉದ್ದೇಶದಿಂದ ಕ್ಷೇತ್ರ ಮರುವಿಂಗಡಣೆ ಸೇರಿಸಿ ಮೀಸಲಾತಿ ಮಸೂದೆ ಮಂಡಿಸಿದೆ. ನಮ್ಮ ವಿರೋಧ ಕ್ಷೇತ್ರ ಮರುವಿಂಗಡಣೆಗೆ ಮಾತ್ರ, ಮಹಿಳಾ ಮೀಸಲಾತಿಗೆ ಅಲ್ಲ ಎಂದು ಸಿಎಂ ಸ್ಪಷ್ಟಪಡಿಸಿದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!