ಬೆಂಗಳೂರು: ಬಿಜೆಪಿ ಮುಖಂಡ ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ವಿನಯ್ ಕುಲಕರ್ಣಿ ಅವರು ಹೈಕೋರ್ಟ್‌ಗೆ ಮೇಲ್ಮನವಿಯನ್ನು ಸಲ್ಲಿಸಿದ್ದಾರೆ.
ಜನಪ್ರತಿನಿಧಿಗಳ ನ್ಯಾಯಾಲಯ ವಿಧಿಸಿರುವ ಜೀವಾವಧಿ ಶಿಕ್ಷೆ ಹಾಗೂ ಸಕ್ಷಮ ನ್ಯಾಯಾಲಯ ನೀಡಿರುವ ಕನ್ವಿಕ್ಷನ್ ಆದೇಶವನ್ನು ಪ್ರಶ್ನಿಸಿ, ಶಿಕ್ಷೆಗೆ ತಾತ್ಕಾಲಿಕ ತಡೆಯಾಜ್ಞೆ ನೀಡುವಂತೆ ಹಾಗೂ ಜಾಮೀನು ಮಂಜೂರು ಮಾಡುವಂತೆ ಅರ್ಜಿಯಲ್ಲಿ ಮನವಿ ಮಾಡಲಾಗಿದೆ.
ತಮ್ಮ ಶಾಸಕ ಸ್ಥಾನ ಕಳೆದುಕೊಳ್ಳುವ ಸಾಧ್ಯತೆ ಎದುರಿರುವ ಹಿನ್ನೆಲೆಯಲ್ಲಿ, ತಕ್ಷಣ ಶಿಕ್ಷೆಗೆ ತಡೆ ನೀಡುವುದು ಅಗತ್ಯವೆಂದು ಅರ್ಜಿದಾರರು ನ್ಯಾಯಾಲಯದ ಗಮನಕ್ಕೆ ತಂದಿದ್ದಾರೆ. ಈ ಸಂಬಂಧ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆ ಮುಂದಿನ ವಾರ ನಡೆಯುವ ಸಾಧ್ಯತೆ ಇದೆ.



