HomeGadag Newsಬಿರುಗಾಳಿ ಮಳೆಗೆ ಹಾರಿಬಂದ ತಗಡು ಟ್ರಾನ್ಸ್‌ಫಾರ್ಮರ್‌ಗೆ ಅಪ್ಪಳಿಸಿ ಆತಂಕ: ತಪ್ಪಿದ ಭಾರೀ ಅನಾಹುತ

ಬಿರುಗಾಳಿ ಮಳೆಗೆ ಹಾರಿಬಂದ ತಗಡು ಟ್ರಾನ್ಸ್‌ಫಾರ್ಮರ್‌ಗೆ ಅಪ್ಪಳಿಸಿ ಆತಂಕ: ತಪ್ಪಿದ ಭಾರೀ ಅನಾಹುತ

For Dai;y Updates Join Our whatsapp Group

Spread the love

ಗದಗ: ಗಜೇಂದ್ರಗಡ ತಾಲೂಕಿನ ನರೇಗಲ್ಲ ಸಮೀಪದ ಬೂದಿಹಾಳ ಗ್ರಾಮದಲ್ಲಿ ರವಿವಾರ ಸಂಜೆ ಬೀಸಿದ ಬಿರುಗಾಳಿ ಮಳೆಯಿಂದ ಸಂಭವಿಸಬಹುದಾದ ಭಾರೀ ಅನಾಹುತವು ಕೂದಲೆಳೆ ಅಂತರದಲ್ಲಿ ತಪ್ಪಿದ ಘಟನೆ ನಡೆದಿದೆ.

ಸಂಜೆ ಸುಮಾರು 5 ಗಂಟೆಯ ವೇಳೆಗೆ ಗಾಳಿಯ ವೇಗ ತೀವ್ರಗೊಂಡಾಗ, ಒಂದು ತಗಡಿನ ಶೀಟ್ ಹಾರಿಬಂದು ನೇರವಾಗಿ ವಿದ್ಯುತ್ ಪರಿವರ್ತಕ (ಟ್ರಾನ್ಸ್‌ಫಾರ್ಮರ್)ಗೆ ಅಪ್ಪಳಿಸಿತು. ಈ ಘಟನೆಯಿಂದ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು.

ಘಟನೆಯ ವೇಳೆ ಸುತ್ತಮುತ್ತಲಿನ ನಿವಾಸಿಗಳು ಭಯಭೀತರಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ತಕ್ಷಣವೇ ವಿದ್ಯುತ್ ಸಂಪರ್ಕವನ್ನು ಸ್ಥಗಿತಗೊಳಿಸಲಾಗಿದೆ ಎಂದು ತಿಳಿದುಬಂದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಅಥವಾ ಗಂಭೀರ ಹಾನಿ ಸಂಭವಿಸಿಲ್ಲ.

ಘಟನಾ ಸ್ಥಳಕ್ಕೆ ವಿದ್ಯುತ್ ಇಲಾಖೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿ, ಅಗತ್ಯ ಕ್ರಮಗಳನ್ನು ಕೈಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಗ್ರಾಮದಲ್ಲಿ ಕೆಲಕಾಲ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಯಿತು.

ಬಿರುಗಾಳಿ ಸಂದರ್ಭಗಳಲ್ಲಿ ಸಡಿಲವಾಗಿರುವ ತಗಡು, ಶೀಟ್‌ಗಳು ಸೇರಿದಂತೆ ಇತರ ವಸ್ತುಗಳನ್ನು ಸುರಕ್ಷಿತವಾಗಿ ಕಟ್ಟಿಹಾಕುವಂತೆ ಅಧಿಕಾರಿಗಳು ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!