HomeCrime Newsಮಹಿಳೆಯರ ಅಶ್ಲೀಲ ವಿಡಿಯೋ ಇಟ್ಟುಕೊಂಡು ಬ್ಲ್ಯಾಕ್ ಮೇಲ್: ಮಕ್ಕಳ ಆಯೋಗ ಸಮಿತಿ ಸದಸ್ಯ ಅರೆಸ್ಟ್!

ಮಹಿಳೆಯರ ಅಶ್ಲೀಲ ವಿಡಿಯೋ ಇಟ್ಟುಕೊಂಡು ಬ್ಲ್ಯಾಕ್ ಮೇಲ್: ಮಕ್ಕಳ ಆಯೋಗ ಸಮಿತಿ ಸದಸ್ಯ ಅರೆಸ್ಟ್!

For Dai;y Updates Join Our whatsapp Group

Spread the love

ಬೆಂಗಳೂರು: ಮಹಿಳೆಯರ ಜೊತೆಗಿನ ಖಾಸಗಿ ವಿಡಿಯೋಗಳನ್ನು ಬಳಸಿಕೊಂಡು ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಆರೋಪಿಯನ್ನು ಆರ್‌ಆರ್ ನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಚಂದ್ರೇಗೌಡ ಎಂದು ಗುರುತಿಸಲಾಗಿದ್ದು, ಆತ ರಾಮನಗರ ಮಕ್ಕಳ ಆಯೋಗ ಸಮಿತಿ ಸದಸ್ಯನಾಗಿದ್ದಾನೆ ಎಂದು ತಿಳಿದುಬಂದಿದೆ.

ಆರೋಪಿ ತಾನು ಪೊಲೀಸ್ ಅಧಿಕಾರಿ, ವರದಿಗಾರ ಹಾಗೂ ವಕೀಲ ಎಂದು ಸುಳ್ಳು ಪರಿಚಯ ನೀಡಿ ಹಲವು ಮಹಿಳೆಯರನ್ನು ನಂಬಿಸಿ ವಂಚನೆ ನಡೆಸುತ್ತಿದ್ದ ಎನ್ನಲಾಗಿದೆ. ಅಲ್ಲದೆ, ಇದೇ ರೀತಿ ಹಲವು ಮಹಿಳೆಯರಿಗೆ ಬೆದರಿಕೆ ಒಡ್ಡಿ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪವೂ ಕೇಳಿಬಂದಿದೆ.

ಗಂಡನಿಂದ ದೂರವಾಗಿದ್ದ ಮಹಿಳೆಯೊಬ್ಬಳನ್ನು ಪರಿಚಯಿಸಿಕೊಂಡಿದ್ದ ಚಂದ್ರೇಗೌಡ, ತಾನು ವಿಚ್ಛೇದನ ಪಡೆದಿದ್ದು ಮದುವೆಯಾಗುವುದಾಗಿ ನಂಬಿಸಿದ್ದಾನೆ. ಬಳಿಕ ಆಕೆಯೊಂದಿಗೆ ಆತ್ಮೀಯತೆ ಬೆಳೆಸಿ ದೈಹಿಕ ಸಂಪರ್ಕ ಹೊಂದಿದ್ದಾನೆ. ಈ ವೇಳೆ ಖಾಸಗಿ ವಿಡಿಯೋ ಚಿತ್ರೀಕರಿಸಿಕೊಂಡು ಅದನ್ನೇ ಆಧಾರವನ್ನಾಗಿ ಮಾಡಿಕೊಂಡು ಬ್ಲ್ಯಾಕ್‌ಮೇಲ್ ಮಾಡಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಇದೇ ಪ್ರಕರಣದಲ್ಲಿ ಮಹಿಳೆಗೆ ಬೆದರಿಕೆ ಹಾಕಿ ಸುಮಾರು 5 ಲಕ್ಷ ರೂಪಾಯಿ ಹಣವನ್ನು ವಸೂಲಿ ಮಾಡಿರುವುದಾಗಿ ಆರೋಪಿಸಲಾಗಿದೆ.

ದೂರು ಆಧರಿಸಿ ಕಾರ್ಯಾಚರಣೆ ನಡೆಸಿದ ಆರ್‌ಆರ್ ನಗರ ಪೊಲೀಸರು ಚಂದ್ರೇಗೌಡನನ್ನು ಬಂಧಿಸಿದ್ದು, ಆತನ ಮೊಬೈಲ್‌ ಪರಿಶೀಲನೆ ವೇಳೆ ಸುಮಾರು 20ಕ್ಕೂ ಹೆಚ್ಚು ಮಹಿಳೆಯರ ಜೊತೆಗಿನ ಖಾಸಗಿ ವಿಡಿಯೋಗಳು ಪತ್ತೆಯಾಗಿವೆ ಎಂದು ತಿಳಿದುಬಂದಿದೆ.

ಚಂದ್ರೇಗೌಡನ ಕೃತ್ಯದಿಂದ ಬೇಸತ್ತ ಮಹಿಳೆ ಬಳಿಕ ಆರ್‌ಆರ್ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಮುಂದುವರಿಸಿದ್ದಾರೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!