ಬೆಂಗಳೂರು: ಲಿವಿನ್ ಸಂಬಂಧದಲ್ಲಿದ್ದ ಜೋಡಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಡಿಗೇಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಸಂಜೀವಿನಿ ನಗರದಲ್ಲಿ ನಡೆದಿದೆ.
ಮೇಘಾಲಯ ಮೂಲದ ಅಗತ ಬೈತಿಯಂಗುಂ (34) ಆತ್ಮಹತ್ಯೆಗೆ ಶರಣಾಗಿದ್ದಾರೆ. ಮಾನ್ಯತಾ ಟೆಕ್ ಪಾರ್ಕ್‌ನಲ್ಲಿ ಕೆಲಸ ಮಾಡುತ್ತಿದ್ದ ಅಗತ, ಮಣಿಪುರ ಮೂಲದ ನವಾಜ್ ಶರೀಫ್ (26) ಜೊತೆ ಕಳೆದ ಮೂರು ವರ್ಷಗಳಿಂದ ಒಂದೇ ಮನೆಯಲ್ಲಿ ವಾಸಿಸುತ್ತಿದ್ದರು. ಇಬ್ಬರ ನಡುವೆ 8 ವರ್ಷದ ವಯಸ್ಸಿನ ಅಂತರ ಇದ್ದು, ಇದೇ ಕಾರಣಕ್ಕೆ ಪದೇ ಪದೇ ಗಲಾಟೆಗಳು ನಡೆಯುತ್ತಿದ್ದವು.
ಘಟನೆಯ ದಿನ ರಾತ್ರಿ, ನವಾಜ್ ತನ್ನ ತಾಯಿಯೊಂದಿಗೆ ಫೋನ್‌ನಲ್ಲಿ ಮಾತನಾಡುತ್ತಿದ್ದಾಗ ಅನುಮಾನಗೊಂಡ ಅಗತ ಜಗಳ ಆರಂಭಿಸಿದ್ದಾಳೆ. ವಾಗ್ವಾದ ತೀವ್ರಗೊಂಡ ಬಳಿಕ ನವಾಜ್ ಮನೆಯಿಂದ ಹೊರಗೆ ತೆರಳಿದನು. ಈ ನಡುವೆ ಅಗತ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ನವಾಜ್ ಮನೆಗೆ ಮರಳಿದಾಗ ಘಟನೆ ಬೆಳಕಿಗೆ ಬಂದಿದೆ. ತಕ್ಷಣ ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ಕೊಡಿಗೇಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಮೂರು ವರ್ಷದ ಸಂಬಂಧ ಅನುಮಾನದಿಂದ ದುರಂತ ಅಂತ್ಯ ಕಂಡಿದೆ.



