HomeIndia News121 ಶಾಸಕರ ಬೆಂಬಲದೊಂದಿಗೆ ಟಿವಿಕೆ ಸರ್ಕಾರಕ್ಕೆ ಗ್ರೀನ್ ಸಿಗ್ನಲ್! ನಾಳೆ ವಿಜಯ್ ಪ್ರಮಾಣವಚನ

121 ಶಾಸಕರ ಬೆಂಬಲದೊಂದಿಗೆ ಟಿವಿಕೆ ಸರ್ಕಾರಕ್ಕೆ ಗ್ರೀನ್ ಸಿಗ್ನಲ್! ನಾಳೆ ವಿಜಯ್ ಪ್ರಮಾಣವಚನ

For Dai;y Updates Join Our whatsapp Group

Spread the love

ಚೆನ್ನೈ: ತಮಿಳುನಾಡಿನಲ್ಲಿ ಹೊಸ ರಾಜಕೀಯ ಅಧ್ಯಾಯಕ್ಕೆ ವೇದಿಕೆ ಸಿದ್ಧವಾಗಿದ್ದು, ಜೋಸೆಫ್ ವಿಜಯ್ ನೇತೃತ್ವದ ಟಿವಿಕೆ ಸರ್ಕಾರ ರಚನೆಗೆ ರಾಜ್ಯಪಾಲರು ಅನುಮತಿ ನೀಡಿದ್ದಾರೆ.

ಬಹುಮತ ಸಾಬೀತುಪಡಿಸಿರುವ ಹಿನ್ನೆಲೆಯಲ್ಲಿ ವಿಜಯ್ ನಾಳೆ ತಮಿಳುನಾಡಿನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಇಂದು ಸಂಜೆ ರಾಜ್ಯಪಾಲ ಆರ್.ವಿ. ಅರ್ಲೇಕರ್ ಅವರನ್ನು ಭೇಟಿಯಾದ ವಿಜಯ್, 121 ಶಾಸಕರ ಬೆಂಬಲ ಪತ್ರದೊಂದಿಗೆ ಸರ್ಕಾರ ರಚನೆಗೆ ಹಕ್ಕು ಮಂಡಿಸಿದರು. ಅಗತ್ಯ ಬಹುಮತವನ್ನು ಸಾಬೀತುಪಡಿಸಿದ ಹಿನ್ನೆಲೆಯಲ್ಲಿ ರಾಜ್ಯಪಾಲರು ಸರ್ಕಾರ ರಚನೆಗೆ ಒಪ್ಪಿಗೆ ಸೂಚಿಸಿದ್ದಾರೆ.

234 ಸದಸ್ಯ ಬಲದ ವಿಧಾನಸಭೆಯಲ್ಲಿ ಬಹುಮತಕ್ಕೆ 118 ಸ್ಥಾನಗಳ ಅವಶ್ಯಕತೆ ಇದ್ದು, ಟಿವಿಕೆ 108 ಸ್ಥಾನಗಳನ್ನು ಗೆದ್ದಿದೆ. ಕಾಂಗ್ರೆಸ್, ವಿಸಿಕೆ, ಸಿಪಿಐ ಹಾಗೂ ಸಿಪಿಐ(ಎಂ) ಪಕ್ಷಗಳ ಬೆಂಬಲದೊಂದಿಗೆ ಒಟ್ಟು ಸಂಖ್ಯೆ 121ಕ್ಕೆ ಏರಿಕೆಯಾಗಿದೆ.

ನಾಳೆ ಬೆಳಗ್ಗೆ 11 ಗಂಟೆಗೆ ಚೆನ್ನೈನ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯಲಿದ್ದು, ರಾಜ್ಯಪಾಲರು ವಿಜಯ್ ಅವರಿಗೆ ಪ್ರತಿಜ್ಞಾ ವಿಧಿ ಬೋಧಿಸಲಿದ್ದಾರೆ. ಕಾರ್ಯಕ್ರಮಕ್ಕಾಗಿ ಈಗಾಗಲೇ ಭಾರೀ ಸಿದ್ಧತೆಗಳು ಆರಂಭಗೊಂಡಿವೆ.

ನಟನಾಗಿ ಜನಪ್ರಿಯತೆ ಗಳಿಸಿದ್ದ ವಿಜಯ್ ಇದೀಗ ರಾಜಕೀಯ ಕ್ಷೇತ್ರದಲ್ಲೂ ಮಹತ್ವದ ಸಾಧನೆ ಮಾಡಿದ್ದು, ಟಿವಿಕೆ ಸರ್ಕಾರದ ನೇತೃತ್ವದಲ್ಲಿ ತಮಿಳುನಾಡಿನಲ್ಲಿ ಹೊಸ ಆಡಳಿತ ಆರಂಭವಾಗಲಿದೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!