ಬೆಳಗಾವಿ: ಕೆಲ ದಿನಗಳ ಹಿಂದಷ್ಟೇ ಕಾನ್ಸ್‌ಟೇಬಲ್ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದ ಯುವತಿಯೊಬ್ಬಳು ತನ್ನ ಜನ್ಮದಿನದಂದೇ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿಯ ಅಜಂ ನಗರದಲ್ಲಿರುವ ಹಾಸ್ಟೆಲ್‌ನಲ್ಲಿ ನಡೆದಿದೆ.
ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯದಲ್ಲಿ ವಾಸವಾಗಿದ್ದ ಈ ಯುವತಿ ಅಲ್ಲಿಯೇ ವ್ಯಾಸಾಂಗ ಮಾಡುತ್ತಿದ್ದಳು ಎಂದು ತಿಳಿದುಬಂದಿದೆ. ಇತ್ತೀಚೆಗೆ ಕುಟುಂಬಸ್ಥರು ಪೊಲೀಸ್ ಪೇದೆಯೊಬ್ಬರ ಜೊತೆ ಆಕೆಯ ಮದುವೆ ನಿಶ್ಚಯ ಮಾಡಿದ್ದರು.
ಎಪಿಎಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಮಾಹಿತಿ ದೊರಕುತ್ತಿದ್ದಂತೆ ಸಿಪಿಐ ಉಸ್ಮಾನ್ ಆವಟಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ಏನು ಎಂಬುದರ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಈ ದುರಂತದಿಂದ ವಸತಿ ನಿಲಯದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ.



