HomeLife Styleಮಕ್ಕಳ ಮುಂದೆ ಈ ಮಾತುಗಳನ್ನು ತಪ್ಪಿಸಿ: ಪೋಷಕರಿಗೆ ಮಹತ್ವದ ಸಲಹೆ!

ಮಕ್ಕಳ ಮುಂದೆ ಈ ಮಾತುಗಳನ್ನು ತಪ್ಪಿಸಿ: ಪೋಷಕರಿಗೆ ಮಹತ್ವದ ಸಲಹೆ!

For Dai;y Updates Join Our whatsapp Group

Spread the love

ಮಕ್ಕಳ ಮನಸ್ಸು ರೂಪಿಸುವಲ್ಲಿ ಪೋಷಕರ ಮಾತುಗಳೇ ಪ್ರಮುಖ ಪಾತ್ರ ವಹಿಸುತ್ತವೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಚಿಕ್ಕ ಮಕ್ಕಳ ಮನಸ್ಸು ಬಹಳ ಮೃದುವಾಗಿರುವುದರಿಂದ ಅವರು ಸುತ್ತಮುತ್ತಲಿನ ವಾತಾವರಣ ಹಾಗೂ ಪೋಷಕರ ನಡವಳಿಕೆಯಿಂದಲೇ ಜಗತ್ತನ್ನು ಅರ್ಥಮಾಡಿಕೊಳ್ಳುತ್ತಾರೆ ಎಂದು ಹೇಳಲಾಗುತ್ತಿದೆ.

ಈ ಹಿನ್ನೆಲೆಯಲ್ಲಿ ಪೋಷಕರು ಮಕ್ಕಳ ಮುಂದೆ ಕೆಲವೊಂದು ವಿಚಾರಗಳನ್ನು ಮಾತನಾಡುವುದನ್ನು ತಪ್ಪಿಸಬೇಕು ಎಂದು ಸಲಹೆ ನೀಡಲಾಗಿದೆ. ವಿಶೇಷವಾಗಿ ಸಂಗಾತಿ ಅಥವಾ ಕುಟುಂಬದ ಹಿರಿಯರ ಬಗ್ಗೆ ನಕಾರಾತ್ಮಕ ಮಾತುಗಳು ಮಕ್ಕಳ ಮನಸ್ಸಿನಲ್ಲಿ ಭಯ ಹಾಗೂ ಗೊಂದಲವನ್ನು ಉಂಟುಮಾಡಬಹುದು ಎಂದು ತಜ್ಞರು ಎಚ್ಚರಿಸಿದ್ದಾರೆ.

ಇದೇ ರೀತಿ ಸಂಬಂಧಿಕರು ಹಾಗೂ ಸ್ನೇಹಿತರ ಬಗ್ಗೆ ಚಾಡಿ ಹೇಳುವ ಅಭ್ಯಾಸವೂ ಮಕ್ಕಳಲ್ಲಿ ತಪ್ಪು ಸಂದೇಶವನ್ನು ನೀಡುತ್ತದೆ ಮತ್ತು ಸಂಬಂಧಗಳ ಮೇಲೆ ನಂಬಿಕೆ ಕಡಿಮೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಲಾಗಿದೆ.

ಮಕ್ಕಳ ಮುಂದೆ ಆರ್ಥಿಕ ಸಮಸ್ಯೆಗಳ ಕುರಿತು ನಿರಂತರ ಚರ್ಚೆ ಮಾಡುವುದರಿಂದ ಮಕ್ಕಳಲ್ಲಿ ಅಸುರಕ್ಷಿತ ಭಾವನೆ ಮೂಡಬಹುದು ಹಾಗೂ ಮಾನಸಿಕ ಬೆಳವಣಿಗೆಗೆ ಅಡ್ಡಿಯಾಗಬಹುದು ಎಂದು ಅಭಿಪ್ರಾಯ ವ್ಯಕ್ತವಾಗಿದೆ.

ಅಲ್ಲದೆ, ಮಕ್ಕಳ ನ್ಯೂನತೆಗಳನ್ನು ಇತರರ ಮುಂದೆ ಹೇಳುವುದು ಅವರ ಆತ್ಮವಿಶ್ವಾಸವನ್ನು ಕುಗ್ಗಿಸುತ್ತದೆ ಎಂದು ಎಚ್ಚರಿಸಲಾಗಿದೆ. ಜಗತ್ತು ಮತ್ತು ಭವಿಷ್ಯದ ಬಗ್ಗೆ ಭಯ ಹುಟ್ಟಿಸುವ ರೀತಿಯ ಮಾತುಗಳನ್ನು ಕೂಡ ತಪ್ಪಿಸಬೇಕು ಎಂದು ತಜ್ಞರು ಸಲಹೆ ನೀಡಿದ್ದಾರೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!