ನೆಲಮಂಗಲ: ಮಾದಾವರ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಳೆಯ ನಡುವಿನ ಅಪಘಾತದಲ್ಲಿ ಎಲೆಕ್ಟ್ರಿಕ್ ಬೈಕ್ ಸವಾರ ಲೋಕೇಶ್ (45) ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.
ಮಧ್ಯಾಹ್ನ 2:30ರ ಸುಮಾರಿಗೆ ಬೆಂಗಳೂರಿನ ಕಡೆಗೆ ಸಾಗುತ್ತಿದ್ದ ಲೋಕೇಶ್ ಅವರ ಬೈಕ್, ಮುಂದೆ ಚಲಿಸುತ್ತಿದ್ದ ಕ್ಯಾಂಟರ್ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಮಳೆಯ ಕಾರಣ ರಸ್ತೆ ಜಾರಿದಿದ್ದು, ಕ್ಯಾಂಟರ್ ಚಾಲಕನ ಹಠಾತ್ ಬ್ರೇಕ್ ಹಾಕಿದ ಪರಿಣಾಮ ಹಿಂಬದಿಯಲ್ಲಿ ಬರುತ್ತಿದ್ದ ಬೈಕ್ ನಿಯಂತ್ರಣ ತಪ್ಪಿದೆ ಎಂದು ಪ್ರಾಥಮಿಕ ಮಾಹಿತಿಯಿಂದ ತಿಳಿದುಬಂದಿದೆ.
ಡಿಕ್ಕಿಯ ತೀವ್ರತೆಯಿಂದ ಲೋಕೇಶ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆ ನಂತರ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ.
ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರಿದಿದೆ.
ಮಳೆಯ ಸಂದರ್ಭ ರಸ್ತೆ ಸುರಕ್ಷತೆ ಪಾಲಿಸುವಂತೆ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.



