HomeSports NewsIPL 2026: ವೈಭವ್‌ ಸೂರ್ಯವಂಶಿ ಅಬ್ಬರ: ಲಕ್ನೋ ವಿರುದ್ಧ ರಾಜಸ್ಥಾನ್‌ಗೆ ರೋಚಕ ಜಯ!

IPL 2026: ವೈಭವ್‌ ಸೂರ್ಯವಂಶಿ ಅಬ್ಬರ: ಲಕ್ನೋ ವಿರುದ್ಧ ರಾಜಸ್ಥಾನ್‌ಗೆ ರೋಚಕ ಜಯ!

For Dai;y Updates Join Our whatsapp Group

Spread the love

ಜೈಪುರ: ಯುವ ಆಟಗಾರ ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್ ನೆರವಿನಿಂದ ರಾಜಸ್ಥಾನ್ ರಾಯಲ್ಸ್ ತಂಡ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ 7 ವಿಕೆಟ್‌ಗಳ ಭರ್ಜರಿ ಜಯ ದಾಖಲಿಸಿದೆ.

ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಲಕ್ನೋ ಸೂಪರ್‌ ಜೈಂಟ್ಸ್ ನಿಗದಿತ 20 ಓವರ್‌ಗಳಲ್ಲಿ 5 ವಿಕೆಟ್‌ ನಷ್ಟಕ್ಕೆ 220 ರನ್‌ಗಳ ಭಾರೀ ಮೊತ್ತ ಕಲೆಹಾಕಿತು. ಗುರಿ ಬೆನ್ನಟ್ಟಿದ ರಾಜಸ್ಥಾನ್‌ ರಾಯಲ್ಸ್‌ 19.1 ಓವರ್‌ಗಳಲ್ಲಿ 3 ವಿಕೆಟ್‌ ನಷ್ಟಕ್ಕೆ 225 ರನ್‌ ಗಳಿಸಿ ರೋಚಕ ಗೆಲುವು ಸಾಧಿಸಿತು.

ಈ ಗೆಲುವಿನೊಂದಿಗೆ ರಾಜಸ್ಥಾನ್‌ ಅಂಕಪಟ್ಟಿಯಲ್ಲಿ ನಾಲ್ಕನೇ ಸ್ಥಾನಕ್ಕೇರಿದ್ದು, ಪ್ಲೇಆಫ್‌ ಪ್ರವೇಶಕ್ಕೆ ಮತ್ತೊಂದು ಹೆಜ್ಜೆ ದೂರದಲ್ಲಿದೆ. ಮುಂಬೈ ವಿರುದ್ಧದ ಕೊನೆಯ ಪಂದ್ಯದಲ್ಲಿ ಗೆದ್ದರೆ ಟಾಪ್‌-4 ಸ್ಥಾನ ಖಚಿತವಾಗಲಿದೆ. ಚೇಸಿಂಗ್‌ ಆರಂಭಿಸಿದ ರಾಜಸ್ಥಾನ್‌ಗೆ ಯಶಸ್ವಿ ಜೈಸ್ವಾಲ್ ವೇಗದ ಆರಂಭ ನೀಡಿದರು. 23 ಎಸೆತಗಳಲ್ಲಿ 43 ರನ್‌ ಸಿಡಿಸಿದ ಜೈಸ್ವಾಲ್‌ಗೆ ಸಾಥ್‌ ನೀಡಿದ ವೈಭವ್‌ ಸೂರ್ಯವಂಶಿ ಬೌಲರ್‌ಗಳ ಮೇಲೆ ಅಬ್ಬರಿಸಿದರು.

ವೈಭವ್‌ ಕೇವಲ 38 ಎಸೆತಗಳಲ್ಲಿ 10 ಸಿಕ್ಸ್‌ ಮತ್ತು 7 ಬೌಂಡರಿಗಳೊಂದಿಗೆ 93 ರನ್‌ಗಳ ಸ್ಫೋಟಕ ಇನ್ನಿಂಗ್ಸ್‌ ಆಡಿದರು. ಧ್ರುವ್ ಜುರೆಲ್ ಕೂಡ 38 ಎಸೆತಗಳಲ್ಲಿ 53 ರನ್‌ ಬಾರಿಸಿ ತಂಡದ ಗೆಲುವಿಗೆ ನೆರವಾದರು.

ಲಕ್ನೋ ಪರ ಆಕಾಶ್ ಸಿಂಗ್ ಹಾಗೂ ಮೊಯ್ಸಿನ್ ಖಾನ್ ತಲಾ ಒಂದು ವಿಕೆಟ್‌ ಪಡೆದರು. ಇದಕ್ಕೂ ಮೊದಲು ಬ್ಯಾಟಿಂಗ್‌ ಮಾಡಿದ ಲಕ್ನೋ ತಂಡದ ಪರ ಮಿಚೆಲ್ ಮಾರ್ಷ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದರು. ಆರಂಭದಿಂದಲೇ ಸಿಕ್ಸರ್‌, ಬೌಂಡರಿಗಳ ಮಳೆ ಸುರಿಸಿದ ಮಾರ್ಷ್‌ ಶತಕದ ಸನಿಹದಲ್ಲಿ ಔಟಾದರು.

ಜೋಶ್ ಇಂಗ್ಲೀಸ್ ಜೊತೆಗೂಡಿ ಮಾರ್ಷ್‌ ಕೇವಲ 50 ಎಸೆತಗಳಲ್ಲಿ 109 ರನ್‌ಗಳ ಜೊತೆಯಾಟ ಕಟ್ಟಿದರು. ಮಾರ್ಷ್‌ 57 ಎಸೆತಗಳಲ್ಲಿ 96 ರನ್‌ ಗಳಿಸಿದರೆ, ಜೋಶ್‌ ಇಂಗ್ಲೀಸ್‌ 29 ಎಸೆತಗಳಲ್ಲಿ 60 ರನ್‌ ಚಚ್ಚಿದರು. ನಾಯಕ ರಿಷಬ್ ಪಂತ್ 23 ಎಸೆತಗಳಲ್ಲಿ 35 ರನ್‌ಗಳಿಸಿದರು.

ರಾಜಸ್ಥಾನ್‌ ಪರ ಯಶ್‌ ರಾಜ್‌ 2 ವಿಕೆಟ್‌ ಪಡೆದರೆ, ಜೋಫ್ರಾ ಆರ್ಚರ್ ಒಂದು ವಿಕೆಟ್‌ ಕಬಳಿಸಿದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!