ಶಿವಮೊಗ್ಗ: ಬೆಂಗಳೂರಿನಿಂದ ತೀರ್ಥಹಳ್ಳಿಗೆ ಸಂಚರಿಸುತ್ತಿದ್ದ ಕೆಎಸ್‌ಆರ್‌ಟಿಸಿ ಐರಾವತ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಅಡಿಕೆ ತೋಟಕ್ಕೆ ನುಗ್ಗಿದ ಘಟನೆ ಮುಡುಬಾ ಸಮೀಪ ನಡೆದಿದೆ.
ಅಪಘಾತದ ಪರಿಣಾಮ ತೋಟದ ಬೇಲಿ ಮತ್ತು ಕೆಲವು ಅಡಿಕೆ ಮರಗಳಿಗೆ ಹಾನಿಯಾಗಿದ್ದು, ಬಸ್‌ಗೆ ಸಣ್ಣ ಪ್ರಮಾಣದ ಹಾನಿಯಾಗಿದೆ. ಆದರೆ ಬಸ್‌ನಲ್ಲಿದ್ದ ಪ್ರಯಾಣಿಕರು ಹಾಗೂ ಸಿಬ್ಬಂದಿ ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದಾರೆ.
ಅಪಘಾತದ ಸುದ್ದಿ ತಿಳಿದ ಕೂಡಲೇ ಸ್ಥಳೀಯ ನಿವಾಸಿಗಳು ಸ್ಥಳಕ್ಕೆ ಧಾವಿಸಿ ಪರಿಸ್ಥಿತಿಯನ್ನು ನಿಭಾಯಿಸಲು ಸಹಕರಿಸಿದ್ದಾರೆ. ಘಟನೆಯಿಂದ ಕೆಲಕಾಲ ಸಂಚಾರದಲ್ಲೂ ವ್ಯತ್ಯಯ ಉಂಟಾಯಿತು.
ಮಾಳೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಅಪಘಾತದ ನಿಖರ ಕಾರಣದ ಬಗ್ಗೆ ತನಿಖೆ ಮುಂದುವರಿದಿದೆ.



