HomeGadag Newsಮಣ್ಣಿನ ಆರೋಗ್ಯ ಕಾಪಾಡಿದರೆ ಕೃಷಿ ಉಳಿಯುತ್ತದೆ

ಮಣ್ಣಿನ ಆರೋಗ್ಯ ಕಾಪಾಡಿದರೆ ಕೃಷಿ ಉಳಿಯುತ್ತದೆ

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಗದಗ: ರೈತರ ಕೃಷಿ ಭೂಮಿಯ ಸಂರಕ್ಷಣೆ, ಮಣ್ಣಿನ ಫಲವತ್ತತೆ ಕಾಪಾಡುವಿಕೆ ಹಾಗೂ ಸುಸ್ಥಿರ ಕೃಷಿ ಪದ್ಧತಿಗಳ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ಭಾರತ ಸರ್ಕಾರ, ಕರ್ನಾಟಕ ಸರ್ಕಾರ, ಜಿಲ್ಲಾ ಪಂಚಾಯತ್ ಹಾಗೂ ಕೃಷಿ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡಿರುವ ‘ಖೇತ್ ಬಚಾವೋ ಅಭಿಯಾನ’ಕ್ಕೆ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಅವರು ಮಂಗಳವಾರ ಜಿಲ್ಲಾಡಳಿತ ಭವನದ ಆವರಣದಲ್ಲಿ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು.

ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಬಸವರಾಜ ಬೊಮ್ಮಾಯಿ, ಕೃಷಿ ದೇಶದ ಆರ್ಥಿಕತೆಯ ಬೆನ್ನೆಲುಬಾಗಿದ್ದು, ಕೃಷಿ ಭೂಮಿಯ ಸಂರಕ್ಷಣೆ ಹಾಗೂ ಮಣ್ಣಿನ ಆರೋಗ್ಯ ಕಾಪಾಡುವುದು ಇಂದಿನ ಅಗತ್ಯವಾಗಿದೆ ಎಂದು ಹೇಳಿದರು.

ರೈತರು ವೈಜ್ಞಾನಿಕ ಕೃಷಿ ಪದ್ಧತಿಗಳನ್ನು ಅಳವಡಿಸಿಕೊಳ್ಳಬೇಕು. ಮಣ್ಣಿನ ಪರೀಕ್ಷೆ, ನೀರಿನ ಸಮರ್ಪಕ ಬಳಕೆ ಹಾಗೂ ಸಾವಯವ ಮತ್ತು ನೈಸರ್ಗಿಕ ಕೃಷಿಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಸಲಹೆ ನೀಡಿದರು.

‘ಖೇತ್ ಬಚಾವೋ ಅಭಿಯಾನ’ದ ಮೂಲಕ ರೈತರಿಗೆ ಮಣ್ಣಿನ ಸವಕಳಿ ತಡೆ, ಬೆಳೆ ವೈವಿಧ್ಯತೆ, ನೀರಿನ ಸಂರಕ್ಷಣೆ ಹಾಗೂ ಪರಿಸರ ಸ್ನೇಹಿ ಕೃಷಿ ಪದ್ಧತಿಗಳ ಕುರಿತು ಜಾಗೃತಿ ಮೂಡಿಸಲಾಗುವುದು. ಇದರಿಂದ ಕೃಷಿ ಉತ್ಪಾದಕತೆ ಹೆಚ್ಚಲು ಸಹಕಾರಿಯಾಗಲಿದೆ ಎಂದು ಅಭಿಪ್ರಾಯಪಟ್ಟರು.

ಜಿಲ್ಲಾಡಳಿತ, ಕೃಷಿ ಇಲಾಖೆ ಹಾಗೂ ವಿವಿಧ ಇಲಾಖೆಗಳ ಸಮನ್ವಯದೊಂದಿಗೆ ಅಭಿಯಾನವನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಬೇಕು. ರೈತ ಸಮುದಾಯವೂ ಸಕ್ರಿಯವಾಗಿ ಪಾಲ್ಗೊಂಡು ಇದರ ಉದ್ದೇಶವನ್ನು ಸಾಕಾರಗೊಳಿಸಬೇಕು ಎಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್, ಜಂಟಿ ಕೃಷಿ ನಿರ್ದೇಶಕಿ ಚೇತನಾ ಪಾಟೀಲ, ಕೃಷಿ ಸಹಾಯಕ ನಿರ್ದೇಶಕ ಮಲ್ಲಯ್ಯ ಕೆ., ಜಿಲ್ಲಾ ಪಂಚಾಯತ್ ಅಧಿಕಾರಿಗಳಾದ ಎಂ.ವಿ. ಚಳಗೇರಿ, ಎಸ್.ಎಸ್. ಕಲ್ಮನಿ ಸೇರಿದಂತೆ ಕೃಷಿ ಇಲಾಖೆ ಅಧಿಕಾರಿಗಳು, ಸಿಬ್ಬಂದಿ ಹಾಗೂ ರೈತ ಪ್ರತಿನಿಧಿಗಳು ಉಪಸ್ಥಿತರಿದ್ದರು.

ಅಭಿಯಾನದ ಅಂಗವಾಗಿ ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ ರೈತರ ಸಭೆಗಳು, ಜಾಗೃತಿ ಕಾರ್ಯಕ್ರಮಗಳು ಹಾಗೂ ಕೃಷಿ ತಂತ್ರಜ್ಞಾನ ಮಾಹಿತಿ ಶಿಬಿರಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

 “ಮಣ್ಣಿನ ಫಲವತ್ತತೆ ಉಳಿದರೆ ಮಾತ್ರ ರೈತರ ಬದುಕು ಮತ್ತು ಕೃಷಿಯ ಭವಿಷ್ಯ ಸುರಕ್ಷಿತವಾಗಿರುತ್ತದೆ.” — ಬಸವರಾಜ ಬೊಮ್ಮಾಯಿ

 


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!