HomePolitics Newsಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಸಿಗುವ ವಿಶ್ವಾಸವಿದೆ: ಸಿಗದಿದ್ದರೂ ಬೇಜಾರಿಲ್ಲ ಎಂದ ಜಮೀರ್ ಅಹ್ಮದ್

ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಸಿಗುವ ವಿಶ್ವಾಸವಿದೆ: ಸಿಗದಿದ್ದರೂ ಬೇಜಾರಿಲ್ಲ ಎಂದ ಜಮೀರ್ ಅಹ್ಮದ್

For Dai;y Updates Join Our whatsapp Group

Spread the love

ಬೆಂಗಳೂರು: ವಿಧಾನಪರಿಷತ್ ಚುನಾವಣೆ ಹಾಗೂ ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತು ರಾಜಕೀಯ ಚಟುವಟಿಕೆಗಳು ಗರಿಗೆದರಿರುವ ನಡುವೆಯೇ ಮಾಜಿ ಸಂಸದ ಡಿ.ಕೆ. ಸುರೇಶ್ ಅವರನ್ನು ಮಾಜಿ ಸಚಿವ ಜಮೀರ್ ಅಹ್ಮದ್ ಭೇಟಿ ಮಾಡಿ ಕೆಲಕಾಲ ಮಾತುಕತೆ ನಡೆಸಿದರು. ಈ ಭೇಟಿ ರಾಜಕೀಯ ವಲಯದಲ್ಲಿ ಕುತೂಹಲಕ್ಕೆ ಕಾರಣವಾಗಿದೆ.

ಭೇಟಿ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಜಮೀರ್ ಅಹ್ಮದ್, ಸಚಿವ ಸಂಪುಟ ವಿಸ್ತರಣೆ ಕುರಿತು ಅಂತಿಮ ತೀರ್ಮಾನವನ್ನು ಪಕ್ಷದ ಹೈಕಮಾಂಡ್ ಕೈಗೊಳ್ಳಲಿದೆ ಎಂದು ಸ್ಪಷ್ಟಪಡಿಸಿದರು.

“ನಮ್ಮದು ಹೈಕಮಾಂಡ್ ಪಕ್ಷ. ಸಚಿವ ಸಂಪುಟ ವಿಸ್ತರಣೆ ಸೇರಿದಂತೆ ಎಲ್ಲ ವಿಚಾರಗಳಲ್ಲೂ ಹೈಕಮಾಂಡ್ ನಿರ್ಧಾರವೇ ಅಂತಿಮ. ಮೊದಲ ಹಂತದಲ್ಲೇ ಸಚಿವ ಸ್ಥಾನ ಸಿಗಬಹುದು ಎಂದು ನಿರೀಕ್ಷಿಸಿದ್ದೆ. ಆದರೆ ಅವಕಾಶ ಸಿಗಲಿಲ್ಲ. ಎರಡನೇ ಹಂತದಲ್ಲಿ ಅವಕಾಶ ದೊರೆಯುವ ವಿಶ್ವಾಸವಿದೆ. ಸಿಗದಿದ್ದರೂ ಯಾವುದೇ ಬೇಸರವಿಲ್ಲ” ಎಂದು ಹೇಳಿದರು.

ಸಚಿವ ಸ್ಥಾನಕ್ಕಾಗಿ ತಾವು ಬಹಿರಂಗವಾಗಿ ಒತ್ತಾಯ ಮಾಡಿಲ್ಲ ಎಂದು ಸ್ಪಷ್ಟಪಡಿಸಿದ ಅವರು, “ನನ್ನ ಅಭಿಮಾನಿಗಳು ಹಾಗೂ ಬೆಂಬಲಿಗರು ತಮ್ಮ ನಾಯಕನಿಗೆ ಸಚಿವ ಸ್ಥಾನ ನೀಡಬೇಕು ಎಂದು ಪ್ರತಿಭಟನೆ ನಡೆಸಿದ್ದಾರೆ. ಅದು ಅವರ ಅಭಿಮಾನದಿಂದ ಮಾಡಿದ ಕಾರ್ಯ” ಎಂದು ತಿಳಿಸಿದರು.

“ಸಚಿವ ಸ್ಥಾನ ಸಿಗದಿರುವುದಕ್ಕೆ ನನಗೆ ಬೇಸರವಿಲ್ಲ. ನನ್ನ ಮುಖದಲ್ಲಿ ಬೇಸರ ಕಾಣಿಸುತ್ತಿದೆಯೇ? ನಾನು ಹೈಕಮಾಂಡ್ ನಾಯಕರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದೇನೆ. ಕೇರಳ ಹಾಗೂ ತೆಲಂಗಾಣ ವಿಧಾನಸಭೆ ಚುನಾವಣೆಗಳಲ್ಲಿ ಪಕ್ಷದ ಪರ ಪ್ರಚಾರ ನಡೆಸಿದ್ದೇನೆ” ಎಂದು ಹೇಳಿದರು.

ವಿಧಾನಪರಿಷತ್ ಚುನಾವಣೆ ಕುರಿತು ಪ್ರತಿಕ್ರಿಯಿಸಿದ ಜಮೀರ್ ಅಹ್ಮದ್, ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಎಲ್ಲ ಶಾಸಕರು ಒಗ್ಗಟ್ಟಿನ ಸಂದೇಶ ನೀಡಿದ್ದಾರೆ ಎಂದರು.

ನಿನ್ನೆ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಸುಮಾರು 140 ಶಾಸಕರು ಭಾಗವಹಿಸಿದ್ದರು. ಎಲ್ಲರೂ ಒಗ್ಗಟ್ಟಾಗಿದ್ದೇವೆ. ಒಬ್ಬ ಅಭ್ಯರ್ಥಿಯ ಗೆಲುವಿಗೆ ಅಗತ್ಯವಿರುವ 28 ಮತಗಳು ದೊರೆತರೂ ಸಾಕು. ನಮ್ಮ ಅಭ್ಯರ್ಥಿಗಳ ಗೆಲುವಿನ ಬಗ್ಗೆ ಯಾವುದೇ ಅನುಮಾನವಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!