HomeBengaluru Newsಬೆಂಗಳೂರಿನಲ್ಲಿ ಗಗನಕ್ಕೇರಿದ ತರಕಾರಿ ದರ: ನೂರರ ಗಡಿ ದಾಟಿದ ಬೀನ್ಸ್, ಬದನೆಕಾಯಿ

ಬೆಂಗಳೂರಿನಲ್ಲಿ ಗಗನಕ್ಕೇರಿದ ತರಕಾರಿ ದರ: ನೂರರ ಗಡಿ ದಾಟಿದ ಬೀನ್ಸ್, ಬದನೆಕಾಯಿ

For Dai;y Updates Join Our whatsapp Group

Spread the love

ಬೆಂಗಳೂರು: ರಾಜ್ಯದಲ್ಲಿ ಮುಂದುವರಿದಿರುವ ಅನಾವೃಷ್ಟಿ ಹಾಗೂ ನೆರೆಯ ರಾಜ್ಯಗಳ ಹವಾಮಾನ ವೈಪರೀತ್ಯದ ಪರಿಣಾಮ ಬೆಂಗಳೂರಿನ ಮಾರುಕಟ್ಟೆಗಳಲ್ಲಿ ತರಕಾರಿ ಮತ್ತು ಸೊಪ್ಪುಗಳ ಬೆಲೆ ಭಾರೀ ಏರಿಕೆ ಕಂಡಿದೆ.

ಕೆಆರ್ ಮಾರುಕಟ್ಟೆ ಸೇರಿದಂತೆ ಪ್ರಮುಖ ಹೋಲ್‌ಸೇಲ್ ಮತ್ತು ಚಿಲ್ಲರೆ ಮಾರುಕಟ್ಟೆಗಳಲ್ಲಿ ಹಲವು ತರಕಾರಿಗಳ ದರ ಶತಕ ದಾಟಿದ್ದು, ಗ್ರಾಹಕರು ಸಂಕಷ್ಟಕ್ಕೆ ಸಿಲುಕಿದ್ದಾರೆ.

ಚಿಲ್ಲರೆ ಮಾರುಕಟ್ಟೆಯಲ್ಲಿ ನುಗ್ಗೆಕಾಯಿ ಕೆಜಿಗೆ ₹200 ರಿಂದ ₹220, ಬೀನ್ಸ್ ₹115 ರಿಂದ ₹140, ಮೆಂತ್ಯ ಸೊಪ್ಪು ₹120 ರಿಂದ ₹130, ಬಿಳಿ ಬದನೆಕಾಯಿ ₹110 ರಿಂದ ₹120, ಬಟಾಣಿ ಮತ್ತು ಹಸಿಮೆಣಸಿನಕಾಯಿ ₹100 ರಿಂದ ₹120 ದರದಲ್ಲಿ ಮಾರಾಟವಾಗುತ್ತಿದೆ. ಕ್ಯಾಪ್ಸಿಕಂ ಹಾಗೂ ಕ್ಯಾರೆಟ್ ಬೆಲೆ ಕೂಡ ₹80 ರಿಂದ ₹100ರ ನಡುವೆ ಇದೆ. ಬೆಳ್ಳುಳ್ಳಿ ದರವು ₹200 ರಿಂದ ₹220ಕ್ಕೆ ಏರಿಕೆಯಾಗಿದೆ.

ಆದರೆ ಗ್ರಾಹಕರಿಗೆ ಕೊಂಚ ಸಮಾಧಾನ ತಂದಿರುವುದು ಟೊಮೆಟೊ ಮತ್ತು ಈರುಳ್ಳಿ ಬೆಲೆ. ಹೋಲ್‌ಸೇಲ್ ಮಾರುಕಟ್ಟೆಯಲ್ಲಿ ಟೊಮೆಟೊ ಕೆಜಿಗೆ ₹10 ರಿಂದ ₹15 ಹಾಗೂ ಚಿಲ್ಲರೆ ಮಾರುಕಟ್ಟೆಯಲ್ಲಿ ₹15 ರಿಂದ ₹20ಕ್ಕೆ ಲಭ್ಯವಿದೆ. ಈರುಳ್ಳಿ ಕೂಡ ಕೆಜಿಗೆ ₹20 ರಿಂದ ₹25 ದರದಲ್ಲಿ ದೊರೆಯುತ್ತಿದೆ.

ಇದರ ನಡುವೆಯೇ ಕೋಳಿ ಮೊಟ್ಟೆಯ ಬೆಲೆಯೂ ಏರಿಕೆಯಾಗಿದ್ದು, ಈ ಹಿಂದೆ ₹6.50 ಇದ್ದ ಒಂದು ಮೊಟ್ಟೆಯ ದರ ಈಗ ₹8ಕ್ಕೆ ತಲುಪಿದೆ.

ದೇಶದ ವಿವಿಧ ಭಾಗಗಳಲ್ಲಿ ಅತಿವೃಷ್ಟಿ ಮತ್ತು ಮಳೆಯ ಕೊರತೆಯಿಂದ ಬೆಳೆ ಹಾನಿಯಾಗಿರುವುದು ಬೆಲೆ ಏರಿಕೆಗೆ ಪ್ರಮುಖ ಕಾರಣವಾಗಿದೆ. ವಿಶೇಷವಾಗಿ ಬಿಳಿ ಬದನೆಕಾಯಿ ದರ ಮೊದಲ ಬಾರಿಗೆ ₹100ರ ಗಡಿ ದಾಟಿರುವುದು ಗ್ರಾಹಕರ ಗಮನ ಸೆಳೆದಿದೆ.

ತರಕಾರಿ ಬೆಲೆ ಏರಿಕೆಯಿಂದ ಗ್ರಾಹಕರು ಕೆಜಿಗಟ್ಟಲೆ ಖರೀದಿಸುವ ಬದಲು ಕಾಲು ಕೆಜಿ ಅಥವಾ ಅರ್ಧ ಕೆಜಿಗೆ ಸೀಮಿತರಾಗಿದ್ದಾರೆ. ಇದರಿಂದ ವ್ಯಾಪಾರವೂ ಕುಂಠಿತಗೊಂಡಿದ್ದು, ಮಾರಾಟದಲ್ಲಿ ಕುಸಿತ ಉಂಟಾಗಿದೆ ಎಂದು ವ್ಯಾಪಾರಿಗಳು ತಿಳಿಸಿದ್ದಾರೆ.

ಒಟ್ಟಾರೆ, ಹವಾಮಾನ ವೈಪರೀತ್ಯದ ಪರಿಣಾಮವಾಗಿ ಬೆಂಗಳೂರಿನ ಜನಸಾಮಾನ್ಯರ ಮಾಸಿಕ ಅಡುಗೆ ವೆಚ್ಚ ಮತ್ತು ಕುಟುಂಬದ ಬಜೆಟ್ ಮೇಲೆ ಹೆಚ್ಚುವರಿ ಹೊರೆ ಬಿದ್ದಿದೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!