HomeKarnataka Newsಭಾರೀ ಮಳೆಗೆ ನರಕದಂತಾದ ಬೆಳಗಾವಿ-ಗೋವಾ ಹೆದ್ದಾರಿ: ಬಸ್ ಸಿಲುಕಿ ಪ್ರಯಾಣಿಕರ ಪರದಾಟ

ಭಾರೀ ಮಳೆಗೆ ನರಕದಂತಾದ ಬೆಳಗಾವಿ-ಗೋವಾ ಹೆದ್ದಾರಿ: ಬಸ್ ಸಿಲುಕಿ ಪ್ರಯಾಣಿಕರ ಪರದಾಟ

For Dai;y Updates Join Our whatsapp Group

ಬೆಳಗಾವಿ: ಸತತ ಮಳೆಯಿಂದಾಗಿ ಬೆಳಗಾವಿ–ಗೋವಾ ಹೆದ್ದಾರಿ ಕೆಸರು ಗದ್ದೆಯಾಗಿ ಮಾರ್ಪಟ್ಟಿದೆ.

ಈ ಹಿನ್ನೆಲೆಯಲ್ಲಿ ಖಾನಾಪುರ ತಾಲೂಕಿನ ವರಕಡ ಗ್ರಾಮದ ಬಳಿ ಕೆಎಸ್‌ಆರ್‌ಟಿಸಿ ಬಸ್ ಕೆಸರಿನಲ್ಲಿ ಸಿಲುಕಿದ ಘಟನೆ ನಡೆದಿದೆ.

ಬೆಳಗಾವಿಯಿಂದ ಗೋವಾ ಕಡೆಗೆ ಹೋಗುತ್ತಿದ್ದ ಬಸ್ ವರಕಡ ಬಳಿ ಬರುತ್ತಿದ್ದಾಗ ರಸ್ತೆಯಲ್ಲಿ ತುಂಬಿಕೊಂಡಿದ್ದ ಕೆಸರಿನಲ್ಲಿ ಚಕ್ರಗಳು ಹೂತುಹೋಗಿವೆ. ಇದರಿಂದ ಬಸ್ ಮುಂದೆ ಹೋಗಲು ಸಾಧ್ಯವಾಗದೆ ನಡುರಸ್ತೆಯಲ್ಲೇ ನಿಂತಿದೆ.

ಚಾಲಕ ಬಸ್ ಹೊರತೆಗೆಯಲು ಪ್ರಯತ್ನಿಸಿದರೂ ಸಾಧ್ಯವಾಗಿಲ್ಲ. ಬಳಿಕ ಪ್ರಯಾಣಿಕರನ್ನು ಸುರಕ್ಷಿತವಾಗಿ ಕೆಳಗಿಳಿಸಲಾಗಿದೆ.

ಬಸ್ ಕೆಸರಿನಲ್ಲಿ ಸಿಲುಕಿದ್ದರಿಂದ ಈ ಮಾರ್ಗದಲ್ಲಿ ಕೆಲಕಾಲ ವಾಹನ ಸಂಚಾರ ಅಸ್ತವ್ಯಸ್ತವಾಗಿತ್ತು. ನಂತರ ಸ್ಥಳೀಯರ ಸಹಾಯದಿಂದ ಸುಮಾರು ಎರಡು ಗಂಟೆಗಳ ಕಾರ್ಯಾಚರಣೆ ನಡೆಸಿ ಬಸ್ ಅನ್ನು ಹೊರತೆಗೆದಿದ್ದಾರೆ.

ಈ ವೇಳೆ ಪ್ರಯಾಣಿಕರು ಮಳೆಯಲ್ಲೇ ರಸ್ತೆಬದಿಯಲ್ಲಿ ನಿಂತು ತೊಂದರೆ ಅನುಭವಿಸಿದ್ದಾರೆ.

ಈ ಹೆದ್ದಾರಿ ಕರ್ನಾಟಕ–ಗೋವಾ ನಡುವಿನ ಪ್ರಮುಖ ರಸ್ತೆ ಆಗಿದ್ದು, ಅದರ ದುಸ್ಥಿತಿಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಕ್ಷಣ ರಸ್ತೆ ದುರಸ್ತಿ ಮಾಡಬೇಕೆಂದು ಅವರು ಆಗ್ರಹಿಸಿದ್ದಾರೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img