ಬೆಂಗಳೂರು: ಬೃಹತ್ ಬೆಂಗಳೂರು ಪ್ರಾಧಿಕಾರ ನಗರದಾದ್ಯಂತ ಫುಟ್‌ಪಾತ್‌ಗಳ ಮೇಲೆ ನಡೆದಿರುವ ಒತ್ತುವರಿ ತೆರವುಗೊಳಿಸುವ ವಿಶೇಷ ಕಾರ್ಯಾಚರಣೆಯನ್ನು ಆರಂಭಿಸಿದೆ.
ಜಯನಗರದ ಅಶೋಕ ಪಿಲ್ಲರ್ ಸಮೀಪದಿಂದ ಬುಧವಾರ ಬೆಳಗ್ಗೆ ಈ ಕಾರ್ಯಾಚರಣೆ ಆರಂಭವಾಗಿದ್ದು, ಬೆಳಗ್ಗೆ 9:30ಕ್ಕೆ ಜೆಸಿಬಿಗಳ ಸಹಾಯದಿಂದ ಸ್ಥಳೀಯ ಅಧಿಕಾರಿಗಳು ಹಾಗೂ ಪೊಲೀಸರ ಬೆಂಗಾವಲಿನಲ್ಲಿ ಕಾರ್ಯಾಚರಣೆ ನಡೆಯಿತು.
ವಾರ್ಡ್ ನಂ.153 ವ್ಯಾಪ್ತಿಯ ಅಶೋಕ ಪಿಲ್ಲರ್‌ನಿಂದ ಮಾಧವನ್ ಪಾರ್ಕ್ ವರೆಗೆ ಅಂಗಡಿಗಳು ಹಾಗೂ ಕಟ್ಟಡ ಕಾಮಗಾರಿಗೆ ಸಂಬಂಧಿಸಿದ ವಸ್ತುಗಳಿಂದ ನಡೆದಿದ್ದ ಒತ್ತುವರಿಗಳನ್ನು ತೆರವುಗೊಳಿಸಲಾಗಿದೆ. ಭವಿಷ್ಯದಲ್ಲಿ ಮತ್ತೆ ಒತ್ತುವರಿ ನಡೆಯದಂತೆ ಕಟ್ಟುನಿಟ್ಟಿನ ನಿಗಾವಹಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.



