HomeKarnataka Newsಆಷಾಢ ಮಾಸ! ಚಾಮುಂಡಿ ಬೆಟ್ಟಕ್ಕೆ ಹೋಗುವ ಭಕ್ತರ ಗಮನಕ್ಕೆ: ಈ ದಿನಗಳಂದು ಖಾಸಗಿ ವಾಹನಗಳ ಪ್ರವೇಶ...

ಆಷಾಢ ಮಾಸ! ಚಾಮುಂಡಿ ಬೆಟ್ಟಕ್ಕೆ ಹೋಗುವ ಭಕ್ತರ ಗಮನಕ್ಕೆ: ಈ ದಿನಗಳಂದು ಖಾಸಗಿ ವಾಹನಗಳ ಪ್ರವೇಶ ನಿರ್ಬಂಧ

For Dai;y Updates Join Our whatsapp Group

ಮೈಸೂರು: ಮೈಸೂರಿನ ಪ್ರಸಿದ್ಧ ಚಾಮುಂಡಿಬೆಟ್ಟದಲ್ಲಿ ಆಷಾಢ ಮಾಸದ ಶುಕ್ರವಾರ, ಶನಿವಾರ ಮತ್ತು ಭಾನುವಾರಗಳಂದು ಲಕ್ಷಾಂತರ ಭಕ್ತರು ದೇವಿ ಚಾಮುಂಡೇಶ್ವರಿಯ ದರ್ಶನಕ್ಕೆ ಆಗಮಿಸುವ ಹಿನ್ನೆಲೆಯಲ್ಲಿ ವಿಶೇಷ ವ್ಯವಸ್ಥೆ ಮಾಡಲಾಗುತ್ತಿದೆ.

ಈ ವರ್ಷ ಜುಲೈ 17ರಿಂದ ಆಗಸ್ಟ್ 7ರವರೆಗೆ ನಡೆಯುವ ವಿಶೇಷ ಪೂಜಾ ದಿನಗಳಿಗೆ ಭಕ್ತರಿಗೆ ಸುಗಮ ದರ್ಶನ ಕಲ್ಪಿಸಲು ಅಧಿಕಾರಿಗಳು ಸಭೆ ನಡೆಸಿ ಸಿದ್ಧತೆಗಳನ್ನು ಅಂತಿಮಗೊಳಿಸಿದ್ದಾರೆ.

ಸಚಿವ ಯತೀಂದ್ರ ಸಿದ್ದರಾಮಯ್ಯ ಅವರು ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಪಾರ್ಕಿಂಗ್, ದರ್ಶನ ವ್ಯವಸ್ಥೆ ಹಾಗೂ ಮೂಲ ಸೌಕರ್ಯಗಳ ಬಗ್ಗೆ ಚರ್ಚೆ ನಡೆಸಿದರು. ಸಭೆಯಲ್ಲಿ ಜಿಲ್ಲಾಧಿಕಾರಿ ಲಕ್ಷ್ಮಿಕಾಂತ್ ರೆಡ್ಡಿ, ಪೊಲೀಸ್ ಕಮಿಷನರ್ ಸೀಮಾ ಲಾಟ್ಕರ್ ಹಾಗೂ ಇತರ ಅಧಿಕಾರಿಗಳು ಭಾಗವಹಿಸಿದ್ದರು.

ಈ ಕುರಿತು ಮಾತನಾಡಿದ ಸಚಿವರು, ಕಳೆದ ಬಾರಿ ವಿಐಪಿಗಳ ಸಂಚಾರದಿಂದ ಸಾಮಾನ್ಯ ಭಕ್ತರಿಗೆ ತೊಂದರೆ ಆಗಿದ್ದ ಹಿನ್ನೆಲೆಯಲ್ಲಿ ಈ ಬಾರಿ ವ್ಯವಸ್ಥೆ ಸುಧಾರಣೆ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಮುಖ್ಯವಾಗಿ ಆಷಾಢ ಶುಕ್ರವಾರ, ಶನಿವಾರ ಮತ್ತು ಭಾನುವಾರದಂದು ಚಾಮುಂಡಿಬೆಟ್ಟದ ಮೇಲ್ಭಾಗಕ್ಕೆ ಖಾಸಗಿ ವಾಹನಗಳಿಗೆ ಪ್ರವೇಶ ನಿರ್ಬಂಧಿಸಲಾಗುವುದು ಎಂದು ತಿಳಿಸಿದ್ದಾರೆ.

ಭಕ್ತರು ತಮ್ಮ ವಾಹನಗಳನ್ನು ಲಲಿತ ಮಹಲ್ ಬಳಿ ನಿಲ್ಲಿಸಬೇಕಾಗಿದ್ದು, ಅಲ್ಲಿಂದ ಚಾಮುಂಡಿಬೆಟ್ಟಕ್ಕೆ ಕೆಎಸ್‌ಆರ್‌ಟಿಸಿ ಬಸ್‌ಗಳ ಮೂಲಕ ಸಾಗುವ ವ್ಯವಸ್ಥೆ ಮಾಡಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img