HomePolitics Newsರಾಮನಗರ ಕ್ವಾರಿ ದುರಂತ: ಮಾಲೀಕನ ಬಂಧನಕ್ಕೆ ಶಾಸಕ ಎಸ್.ಟಿ. ಸೋಮಶೇಖರ್ ಒತ್ತಾಯ!

ರಾಮನಗರ ಕ್ವಾರಿ ದುರಂತ: ಮಾಲೀಕನ ಬಂಧನಕ್ಕೆ ಶಾಸಕ ಎಸ್.ಟಿ. ಸೋಮಶೇಖರ್ ಒತ್ತಾಯ!

For Dai;y Updates Join Our whatsapp Group

ಬೆಂಗಳೂರು/ರಾಮನಗರ: ಕಲ್ಲು ಕ್ವಾರಿ ದುರಂತದ ಹಿನ್ನೆಲೆಯಲ್ಲಿ ಕ್ರಷರ್ ಮಾಲೀಕನನ್ನು ಕೂಡಲೇ ಬಂಧಿಸಬೇಕು ಎಂದು ಶಾಸಕ ಎಸ್.ಟಿ. ಸೋಮಶೇಖರ್ ಒತ್ತಾಯಿಸಿದ್ದಾರೆ.

ವಿಧಾನಸೌಧದಲ್ಲಿ ಮಾತನಾಡಿದ ಅವರು, ಹಿಂದೆ ಬಂಡೆ ಓನರ್‌ಗಳೊಂದಿಗೆ ಸಭೆ ನಡೆಸಿ ಲೀಗಲ್ ಆಗಿ ಬ್ಲಾಸ್ಟಿಂಗ್ ಮಾಡುವಂತೆ ಸೂಚಿಸಿದ್ದೆ. ಗರ್ಭಿಣಿ ಚಿರತೆ ಸಾವು ಪ್ರಕರಣದಲ್ಲಿಯೂ ತಾವು ಈ ವಿಷಯ ಪ್ರಸ್ತಾಪಿಸಿದ್ದಾಗಿ ಅವರು ಹೇಳಿದ್ದಾರೆ.

ಇತ್ತೀಚಿನ ಕ್ವಾರಿ ದುರಂತದಲ್ಲಿ ಸಾವಿನ ಸಂಖ್ಯೆ ಹೆಚ್ಚುತ್ತಿರುವ ಬಗ್ಗೆ ಆತಂಕ ವ್ಯಕ್ತಪಡಿಸಿರುವ ಅವರು, “ಪ್ರಭಾವಶಾಲಿಗಳು ಇರುವುದರಿಂದ ಪ್ರಕರಣವನ್ನು ಮುಚ್ಚಿಹಾಕುವ ಸಾಧ್ಯತೆ ಇದೆ. ಆದ್ದರಿಂದ ಕಠಿಣ ಕ್ರಮ ಕೈಗೊಳ್ಳಬೇಕು. ಮೃತರ ಕುಟುಂಬಗಳಿಗೆ ನ್ಯಾಯ ದೊರಕಿಸಬೇಕು” ಎಂದು ಆಗ್ರಹಿಸಿದ್ದಾರೆ.

ಕ್ರಷರ್ ಮಾಲೀಕರು ಒಂದು ಕೋಟಿ ರೂಪಾಯಿ ಪರಿಹಾರ ನೀಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಈ ಕ್ವಾರಿ ಅಕ್ರಮವಾಗಿ ನಡೆಯುತ್ತಿದೆ ಎಂದು ಆರೋಪಿಸಿರುವ ಎಸ್.ಟಿ. ಸೋಮಶೇಖರ್, ಗಣಿ ಇಲಾಖೆ, ಅರಣ್ಯ ಇಲಾಖೆ, ಸ್ಥಳೀಯ ಪೊಲೀಸರು ಹಾಗೂ ಮಾಲಿನ್ಯ ನಿಯಂತ್ರಣ ಮಂಡಳಿಯವರ ಪಾತ್ರವೂ ಪರಿಶೀಲನೆಗೆ ಒಳಪಡಬೇಕು ಎಂದು ಹೇಳಿದ್ದಾರೆ. ಇವರ ವಿರುದ್ಧವೂ ಎಫ್‌ಐಆರ್ ದಾಖಲಿಸಬೇಕು ಎಂದು ಅವರು ಕಿಡಿಕಾರಿದ್ದಾರೆ.

ಈ ಕುರಿತು ಸಿಎಂ ಗಮನಕ್ಕೆ ತಂದು ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸುವುದಾಗಿ ಅವರು ತಿಳಿಸಿದ್ದಾರೆ.

 

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img