HomeKarnataka Newsಹಾವೇರಿ! ಕರ್ತವ್ಯದ ವೇಳೆ ಹುತಾತ್ಮರಾದ ನೌಕಾಪಡೆಯ ಯೋಧ!

ಹಾವೇರಿ! ಕರ್ತವ್ಯದ ವೇಳೆ ಹುತಾತ್ಮರಾದ ನೌಕಾಪಡೆಯ ಯೋಧ!

For Dai;y Updates Join Our whatsapp Group

ಹಾವೇರಿ: ಕರ್ತವ್ಯದ ವೇಳೆ ಭಾರತೀಯ ನೌಕಾಪಡೆಯ ಯೋಧ ಹುತಾತ್ಮರಾದ ಘಟನೆ ಕೇರಳದ ಕೊಚ್ಚಿಯಲ್ಲಿ ನಡೆದಿದೆ.

ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಉಪ್ಪುಣಸಿ ಗ್ರಾಮದ ನಿವಾಸಿ ಯಶೋಧರ ವಡ್ಡರ್ (29) ಭಾರತೀಯ ನೌಕಾಪಡೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ಅವರು ಫೈರಿಂಗ್ ತರಬೇತಿ ವೇಳೆ ಕರ್ತವ್ಯ ನಿರ್ವಹಿಸುತ್ತಿದ್ದಾಗ ಹುತಾತ್ಮರಾಗಿದ್ದಾರೆ ಎಂದು ತಿಳಿದುಬಂದಿದೆ.

ಯಶೋಧರ ವಡ್ಡರ್ ಅವರು 2016ರಲ್ಲಿ ನೌಕಾಪಡೆಗೆ ಸೇರ್ಪಡೆಯಾಗಿ ಕಳೆದ 10 ವರ್ಷಗಳಿಂದ ದೇಶ ಸೇವೆಯಲ್ಲಿ ತೊಡಗಿಸಿಕೊಂಡಿದ್ದರು.

ಹುತಾತ್ಮ ಯೋಧನ ಪಾರ್ಥಿವ ಶರೀರ ಸ್ವಗ್ರಾಮ ಉಪ್ಪುಣಸಿಗೆ ಆಗಮಿಸಿದ್ದು, ಗ್ರಾಮದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಸಲು ಸಿದ್ಧತೆಗಳು ನಡೆಯುತ್ತಿವೆ.

ದೇಶ ಸೇವೆಯಲ್ಲಿ ಪ್ರಾಣ ತ್ಯಾಗ ಮಾಡಿದ ವೀರ ಯೋಧನ ನಿಧನಕ್ಕೆ ಗ್ರಾಮಸ್ಥರು, ಬಂಧು-ಬಳಗ ಹಾಗೂ ವಿವಿಧ ಸಂಘಟನೆಗಳು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img