ಬೆಂಗಳೂರು: ಕೆಆರ್ ಸರ್ಕಲ್ ಬಳಿ ಎರಡು ಬಿಎಂಟಿಸಿ ಬಸ್‌ಗಳ ನಡುವೆ ಭೀಕರ ಅಪಘಾತ ಸಂಭವಿಸಿದೆ.
ಇಂದಿರಾನಗರ ಕಡೆಯಿಂದ ಬಂದ ಎಲೆಕ್ಟ್ರಿಕ್ ಬಸ್ ಮತ್ತೊಂದು ಬಸ್‌ಗೆ ಹಿಂಬದಿಯಿಂದ ಗುದ್ದಿದ ಪರಿಣಾಮ ಎರಡು ಬಸ್‌ಗಳ ಮುಂಭಾಗ ಹಾಗೂ ಹಿಂಭಾಗ ಸಂಪೂರ್ಣವಾಗಿ ಜಖಂ ಆಗಿವೆ.
ಘಟನೆಯ ವೇಳೆ ಬಸ್‌ನ ಮುಂಭಾಗದಲ್ಲಿ ಕೂತಿದ್ದ ಮಹಿಳೆಯ ಕಾಲು ಸಿಕ್ಕಿಕೊಂಡು ಪರದಾಡಿದ ಘಟನೆ ನಡೆದಿದೆ. ತಕ್ಷಣ ಸ್ಥಳೀಯರು ಹಾಗೂ ಸಿಬ್ಬಂದಿ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ.
ಪ್ರಾಥಮಿಕ ಮಾಹಿತಿ ಪ್ರಕಾರ ಮೂವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಗಿದೆ.
ಕೆಆರ್ ಸರ್ಕಲ್ ಪ್ರದೇಶದಲ್ಲಿ ಕೆಲಕಾಲ ಸಂಚಾರ ಅಸ್ತವ್ಯಸ್ತವಾಗಿದ್ದು, ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಸ್ಥಿತಿಯನ್ನು ನಿಯಂತ್ರಿಸಿದ್ದಾರೆ.



