ಬೀದರ್: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಕಾರ್ಯದ ವೇಳೆ ಮತ್ತೊಬ್ಬ ಬೂತ್ ಮಟ್ಟದ ಅಧಿಕಾರಿ (BLO) ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಬೀದರ್ ಜಿಲ್ಲೆಯಲ್ಲಿ ನಡೆದಿದೆ.
ಭಾಲ್ಕಿ ತಾಲೂಕಿನ ಮೂಲದ 45 ವರ್ಷದ ಸುನೀಲ್ ಅವರು ಅಮಲಾಪುರ ಗ್ರಾಮದ 33ನೇ ಬೂತ್ನಲ್ಲಿ ಕಳೆದ ಹಲವು ದಿನಗಳಿಂದ ಎಸ್ಐಆರ್ ಸರ್ವೆ ಕಾರ್ಯದಲ್ಲಿ ತೊಡಗಿಕೊಂಡಿದ್ದರು. ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಅವರಿಗೆ ಏಕಾಏಕಿ ತೀವ್ರ ಎದೆನೋವು ಕಾಣಿಸಿಕೊಂಡಿದ್ದು, ಸ್ಥಳದಲ್ಲೇ ಕುಸಿದು ಬಿದ್ದಿದ್ದಾರೆ.
ತಕ್ಷಣ ಸ್ಥಳೀಯರು ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಚಿಕಿತ್ಸೆ ವೇಳೆ ಸ್ಟಂಟ್ ಅಳವಡಿಸುವ ಪ್ರಕ್ರಿಯೆ ನಡೆಯುತ್ತಿದ್ದಾಗ ಚಿಕಿತ್ಸೆ ಫಲಕಾರಿಯಾಗದೆ ಸುನೀಲ್ ಮೃತಪಟ್ಟಿದ್ದಾರೆ.
ಈ ಘಟನೆ ಗಾಂಧಿಗಂಜ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ.



