HomeEntertainmentಬೆಂಗಳೂರು ಮೂಲದ ಗೌರಿ ಸ್ಪ್ರ್ಯಾಟ್ ಜೊತೆ ದಾಂಪತ್ಯಕ್ಕೆ ಕಾಲಿಟ್ಟ ಆಮಿರ್ ಖಾನ್!

ಬೆಂಗಳೂರು ಮೂಲದ ಗೌರಿ ಸ್ಪ್ರ್ಯಾಟ್ ಜೊತೆ ದಾಂಪತ್ಯಕ್ಕೆ ಕಾಲಿಟ್ಟ ಆಮಿರ್ ಖಾನ್!

For Dai;y Updates Join Our whatsapp Group

ಮುಂಬೈ: ಬಾಲಿವುಡ್‌ನ ‘ಮಿಸ್ಟರ್ ಪರ್ಫೆಕ್ಷನಿಸ್ಟ್’ ಎಂದೇ ಖ್ಯಾತಿ ಪಡೆದಿರುವ ನಟ ಆಮಿರ್ ಖಾನ್ ಹಾಗೂ ಬೆಂಗಳೂರಿನ ಗೌರಿ ಸ್ಪ್ರ್ಯಾಟ್ ಅಧಿಕೃತವಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಸುಮಾರು ಎರಡು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದ ಈ ಜೋಡಿ, ಮುಂಬೈನ ಬಾಂದ್ರಾದಲ್ಲಿರುವ ಆಮಿರ್ ಖಾನ್ ಅವರ ನಿವಾಸದಲ್ಲಿ ಆಪ್ತ ಕುಟುಂಬ ಸದಸ್ಯರು ಮತ್ತು ಸ್ನೇಹಿತರ ಸಮ್ಮುಖದಲ್ಲಿ ಸರಳವಾಗಿ ವಿವಾಹವಾಗಿದ್ದಾರೆ.

ಮದುವೆ ಸಮಾರಂಭದಲ್ಲಿ ಸುಮಾರು 150 ಮಂದಿ ಮಾತ್ರ ಭಾಗವಹಿಸಿದ್ದರು. ವಿದೇಶಗಳಿಂದ ಆಗಮಿಸಿದ್ದ ಸಂಬಂಧಿಕರು, ಆಪ್ತ ಸ್ನೇಹಿತರು ಹಾಗೂ ಸಿನಿಮಾ ಕ್ಷೇತ್ರದ ಆಯ್ದ ಗಣ್ಯರು ಈ ವಿಶೇಷ ಕ್ಷಣಕ್ಕೆ ಸಾಕ್ಷಿಯಾದರು. ಮದುವೆಯ ಬಳಿಕ ಆಮಿರ್ ಖಾನ್ ಮತ್ತು ಗೌರಿ ಸ್ಪ್ರ್ಯಾಟ್ ಅಗತ್ಯ ದಾಖಲೆಗಳಿಗೆ ಸಹಿ ಹಾಕುವ ಮೂಲಕ ತಮ್ಮ ವಿವಾಹವನ್ನು ಕಾನೂನುಬದ್ಧವಾಗಿ ನೋಂದಾಯಿಸಿಕೊಂಡಿದ್ದಾರೆ.

ಆಮಿರ್ ಖಾನ್ ಮತ್ತು ಗೌರಿ ಸ್ಪ್ರ್ಯಾಟ್ ಸುಮಾರು 25 ವರ್ಷಗಳಿಂದ ಪರಸ್ಪರ ಪರಿಚಯ ಹೊಂದಿದ್ದರು. ಆದರೆ ಕಳೆದ ಎರಡು ವರ್ಷಗಳ ಹಿಂದೆ ಅವರ ಸ್ನೇಹ ಪ್ರೀತಿಯಾಗಿ ಮಾರ್ಪಟ್ಟಿತ್ತು. ಕಳೆದ ವರ್ಷ ತಮ್ಮ 60ನೇ ಹುಟ್ಟುಹಬ್ಬದ ಸಂದರ್ಭದಲ್ಲಿ ಆಮಿರ್ ಖಾನ್ ಮೊದಲ ಬಾರಿಗೆ ಗೌರಿಯನ್ನು ಸಾರ್ವಜನಿಕವಾಗಿ ಪರಿಚಯಿಸಿದ್ದರು. ಬಳಿಕ ಜೂನ್ 4ರಂದು ತಮ್ಮ ವಿವಾಹದ ಬಗ್ಗೆ ಅಧಿಕೃತವಾಗಿ ಮಾಹಿತಿ ನೀಡಿದ್ದರು.

ಈ ಮದುವೆಯಲ್ಲಿ ಆಮಿರ್ ಖಾನ್ ಅವರ ಮೂವರು ಮಕ್ಕಳಾದ ಜುನೈದ್, ಇರಾ ಹಾಗೂ ಆಜಾದ್ ಭಾಗವಹಿಸಿದ್ದರು. ಗೌರಿ ಸ್ಪ್ರ್ಯಾಟ್ ಅವರ ಆರು ವರ್ಷದ ಮಗ ಕೂಡ ವಿವಾಹ ಸಮಾರಂಭದಲ್ಲಿ ಉಪಸ್ಥಿತರಿದ್ದನು.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img