• About
  • Advertise
  • Privacy & Policy
  • Contact
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
No Result
View All Result
No Result
View All Result
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home Crime News

ಧಾರವಾಡ ಅಪಾರ್ಟ್‌ಮೆಂಟ್‌ನಲ್ಲಿ ವೈದ್ಯನ ಶವ ಪತ್ತೆ; ಮಗನಿಗೂ ಚಾಕು ಇರಿತ! ಪತ್ನಿ ಅರೆಸ್ಟ್

Vijaya Sakshi by Vijaya Sakshi
July 15, 2026
in Crime News
0
ಹಣಕ್ಕಾಗಿ ‘ಅಪಘಾತ’ದ ಸ್ಕೆಚ್: ಬೆಂಗಳೂರಿನಲ್ಲಿ ಒಂಟಿ ಮಹಿಳೆ ಮೇಲೆ ಬೈಕ್ ಹರಿಸಿ ಕೊಲೆ, ರಕ್ಷಕರಂತೆ ನಟಿಸಿದ ಗ್ಯಾಂಗ್ ಅರೆಸ್ಟ್
0
SHARES
0
VIEWS
Share on FacebookShare on Twitter

ಧಾರವಾಡ: ನಗರದ ಕರ್ನಾಟಕ ವಿಶ್ವವಿದ್ಯಾಲಯ ರಸ್ತೆಯ ರನ್ಕಾಸ್ಟೆಲ್ಲೋ ಅಪಾರ್ಟ್‌ಮೆಂಟ್‌ನಲ್ಲಿ ವೈದ್ಯರೊಬ್ಬರನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ನಡೆದಿದೆ.

ಚಿರಾಯು ಆಸ್ಪತ್ರೆಯಲ್ಲಿ ಅನಸ್ತೇಶಿಯಾ ತಜ್ಞರಾಗಿದ್ದ ಡಾ. ಕಿರಣ್ ಹೊನ್ನಣ್ಣನವರ್ ಮೃತಪಟ್ಟವರು. ಘಟನೆಯಲ್ಲಿ ಅವರ 10 ವರ್ಷದ ಮಗನ ಮೇಲೂ ಹಲ್ಲೆ ನಡೆದಿದ್ದು, ಗಾಯಗೊಂಡ ಬಾಲಕನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಮಾಹಿತಿ ತಿಳಿದ ಕೂಡಲೇ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಡಾ. ಕಿರಣ್ ಅವರ ಪತ್ನಿ ಡಾ. ಪ್ರಿಯಾರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಪ್ರಾಥಮಿಕ ತನಿಖೆಯಲ್ಲಿ ಡಾ. ಕಿರಣ್ ಅವರನ್ನು ಪತ್ನಿ ಪ್ರಿಯಾರೇ ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಮಂಗಳವಾರ ರಾತ್ರಿ ಘಟನೆ ನಡೆದಿರುವ ಸಾಧ್ಯತೆ ಇದೆ ಎನ್ನಲಾಗಿದ್ದು, ಪತಿಯ ಮೇಲೆ ಹಲ್ಲೆ ನಡೆಸಿದ ಬಳಿಕ ಮಗನ ಮೇಲೂ ದಾಳಿ ನಡೆದಿರುವ ಅನುಮಾನವಿದೆ.

ಬಳಿಕ ಡಾ. ಪ್ರಿಯಾ ಆತ್ಮಹತ್ಯೆಗೆ ಯತ್ನಿಸಿರುವ ಬಗ್ಗೆಯೂ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

ಈ ಕುರಿತು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಮಾತನಾಡಿ, “ಸಂಬಂಧಿಕರು ಫೋನ್ ಮಾಡಿದಾಗ ಪ್ರಿಯಾ ಅವರು ಪತಿ ವಿಶ್ರಾಂತಿ ಪಡೆಯುತ್ತಿದ್ದಾರೆ ಎಂದು ಹೇಳಿದ್ದಾರೆ. ಆದರೆ ಸಂಜೆವರೆಗೂ ಡಾ. ಕಿರಣ್ ಕರೆ ಸ್ವೀಕರಿಸದ ಹಿನ್ನೆಲೆಯಲ್ಲಿ ಅನುಮಾನಗೊಂಡ ಸಂಬಂಧಿಕರು ಮನೆಗೆ ಬಂದು ನೋಡಿದಾಗ ರಕ್ತದ ಮಡುವಿನಲ್ಲಿ ಬಿದ್ದಿರುವುದು ಕಂಡುಬಂದಿದೆ” ಎಂದು ತಿಳಿಸಿದ್ದಾರೆ.

“ಬಾಲಕನಿಗೆ ಜೀವ ಇರುವುದನ್ನು ಗಮನಿಸಿ ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಾರ್ಟ್‌ಮೆಂಟ್‌ನಲ್ಲಿ ಭದ್ರತಾ ವ್ಯವಸ್ಥೆ ಇರುವುದರಿಂದ ಹೊರಗಿನಿಂದ ಯಾರಾದರೂ ಬಂದು ಕೃತ್ಯ ಎಸಗಿರುವ ಸಾಧ್ಯತೆ ಕಡಿಮೆ. ಘಟನೆಯ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಪ್ರಿಯಾ ಅವರು ಆಘಾತದ ಸ್ಥಿತಿಯಲ್ಲಿದ್ದು, ಹಲವು ರೀತಿಯ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಎಲ್ಲಾ ಆಯಾಮಗಳಲ್ಲೂ ತನಿಖೆ ನಡೆಸಲಾಗುತ್ತಿದೆ” ಎಂದು ಹೇಳಿದರು.

ಡಾ. ಕಿರಣ್ ಅವರು ಅನಸ್ತೇಶಿಯಾ ತಜ್ಞರಾಗಿದ್ದರೆ, ಅವರ ಪತ್ನಿ ಡಾ. ಪ್ರಿಯಾ ನೇತ್ರ ವೈದ್ಯೆಯಾಗಿದ್ದರು ಎನ್ನಲಾಗಿದೆ.

Tags: DharwadDharwadNewsDoctorMurderkannadanewsKarnatakaVijayasakshivijayasakshinews
Previous Post

ರಂಗಭೂಮಿ ಸಮಾಜಕ್ಕೆ ದಾರಿದೀಪ: ಡಾ. ತೋಂಟದ ಸಿದ್ಧರಾಮ ಮಹಾಸ್ವಾಮಿಗಳು

Next Post

ಜು.18ರಿಂದ ‘ಗಣಿತ ಬಾಲ ಭಾಸ್ಕರ’ ರಸಪ್ರಶ್ನೆ ಸ್ಪರ್ಧೆ

Vijaya Sakshi

Vijaya Sakshi

Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

Next Post
ಜು.18ರಿಂದ ‘ಗಣಿತ ಬಾಲ ಭಾಸ್ಕರ’ ರಸಪ್ರಶ್ನೆ ಸ್ಪರ್ಧೆ

ಜು.18ರಿಂದ 'ಗಣಿತ ಬಾಲ ಭಾಸ್ಕರ' ರಸಪ್ರಶ್ನೆ ಸ್ಪರ್ಧೆ

Leave a Reply Cancel reply

Your email address will not be published. Required fields are marked *

Stay Connected test

  • 24k Followers
  • 99 Subscribers
  • Trending
  • Comments
  • Latest
Gadaga Breaking: 2.80 ಲಕ್ಷದ ಹಣಕ್ಕಾಗಿ ಸ್ನೇಹಿತನ ಹತ್ಯೆ? 11 ದಿನಗಳ ಬಳಿಕ ಬಯಲಾಯ್ತು ಕೊಲೆ ರಹಸ್ಯ!

Gadaga Breaking: 2.80 ಲಕ್ಷದ ಹಣಕ್ಕಾಗಿ ಸ್ನೇಹಿತನ ಹತ್ಯೆ? 11 ದಿನಗಳ ಬಳಿಕ ಬಯಲಾಯ್ತು ಕೊಲೆ ರಹಸ್ಯ!

October 21, 2026
ನಕಲಿ ಔಷಧ ಜಾಲದ ತನಿಖೆ ಮತ್ತಷ್ಟು ಚುರುಕು: ಔಷಧ ಸೇವಿಸಿದ ರೋಗಿಗಳ ಮಾಹಿತಿ ಸಂಗ್ರಹಕ್ಕೆ ಮುಂದಾದ FDA ಅಧಿಕಾರಿಗಳು

ನಕಲಿ ಔಷಧ ಜಾಲದ ತನಿಖೆ ಮತ್ತಷ್ಟು ಚುರುಕು: ಔಷಧ ಸೇವಿಸಿದ ರೋಗಿಗಳ ಮಾಹಿತಿ ಸಂಗ್ರಹಕ್ಕೆ ಮುಂದಾದ FDA ಅಧಿಕಾರಿಗಳು

September 21, 2026

ನೈಜೀರಿಯಾದಲ್ಲಿ ಭೀಕರ ವಾಯು ದುರಂತ: ಜೌಗು ಪ್ರದೇಶಕ್ಕೆ ಅಪ್ಪಳಿಸಿದ ಸೇನಾ ವಿಮಾನ, 32 ಮಂದಿ ಸಾವು

October 6, 2026
ಕೃಷಿ ಹೊಂಡದಲ್ಲಿ ಮಹಿಳೆಯ ಶವ ಪತ್ತೆ ಪ್ರಕರಣಕ್ಕೆ ಟ್ವಿಸ್ಟ್‌: ಎರಡೂವರೆ ತಿಂಗಳ ಬಳಿಕ ಆರೋಪಿ ಅರೆಸ್ಟ್‌

ಕೃಷಿ ಹೊಂಡದಲ್ಲಿ ಮಹಿಳೆಯ ಶವ ಪತ್ತೆ ಪ್ರಕರಣಕ್ಕೆ ಟ್ವಿಸ್ಟ್‌: ಎರಡೂವರೆ ತಿಂಗಳ ಬಳಿಕ ಆರೋಪಿ ಅರೆಸ್ಟ್‌

October 21, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0
Gadaga Breaking: 2.80 ಲಕ್ಷದ ಹಣಕ್ಕಾಗಿ ಸ್ನೇಹಿತನ ಹತ್ಯೆ? 11 ದಿನಗಳ ಬಳಿಕ ಬಯಲಾಯ್ತು ಕೊಲೆ ರಹಸ್ಯ!

Gadaga Breaking: 2.80 ಲಕ್ಷದ ಹಣಕ್ಕಾಗಿ ಸ್ನೇಹಿತನ ಹತ್ಯೆ? 11 ದಿನಗಳ ಬಳಿಕ ಬಯಲಾಯ್ತು ಕೊಲೆ ರಹಸ್ಯ!

October 21, 2026
ಕೃಷಿ ಹೊಂಡದಲ್ಲಿ ಮಹಿಳೆಯ ಶವ ಪತ್ತೆ ಪ್ರಕರಣಕ್ಕೆ ಟ್ವಿಸ್ಟ್‌: ಎರಡೂವರೆ ತಿಂಗಳ ಬಳಿಕ ಆರೋಪಿ ಅರೆಸ್ಟ್‌

ಕೃಷಿ ಹೊಂಡದಲ್ಲಿ ಮಹಿಳೆಯ ಶವ ಪತ್ತೆ ಪ್ರಕರಣಕ್ಕೆ ಟ್ವಿಸ್ಟ್‌: ಎರಡೂವರೆ ತಿಂಗಳ ಬಳಿಕ ಆರೋಪಿ ಅರೆಸ್ಟ್‌

October 21, 2026

ಬೀರೂರು ಮೈಲಾರಲಿಂಗೇಶ್ವರ ಸ್ವಾಮಿ ಕಾರ್ಣಿಕೋತ್ಸವ ಸಂಪನ್ನ: ದಶರಥ ಪೂಜಾರ್ ನುಡಿದ ದೈವವಾಣಿ ಏನು?

October 21, 2026

ಬೆಳಗ್ಗೆ ಯಾವ ಸಮಯಕ್ಕೆ ಮನೆ ಗುಡಿಸಿದರೆ ಶುಭ? ತಿಳಿಯಿರಿ ಈ ನಂಬಿಕೆಯ ಹಿಂದಿನ ಕಾರಣ!

October 21, 2026

Recent News

Vijaya Sakshi News

We bring you the best Premium WordPress Themes that perfect for news, magazine, personal blog, etc. Check our landing page for details.

Browse by Category

Recent News

Gadaga Breaking: 2.80 ಲಕ್ಷದ ಹಣಕ್ಕಾಗಿ ಸ್ನೇಹಿತನ ಹತ್ಯೆ? 11 ದಿನಗಳ ಬಳಿಕ ಬಯಲಾಯ್ತು ಕೊಲೆ ರಹಸ್ಯ!

Gadaga Breaking: 2.80 ಲಕ್ಷದ ಹಣಕ್ಕಾಗಿ ಸ್ನೇಹಿತನ ಹತ್ಯೆ? 11 ದಿನಗಳ ಬಳಿಕ ಬಯಲಾಯ್ತು ಕೊಲೆ ರಹಸ್ಯ!

October 21, 2026
ಕೃಷಿ ಹೊಂಡದಲ್ಲಿ ಮಹಿಳೆಯ ಶವ ಪತ್ತೆ ಪ್ರಕರಣಕ್ಕೆ ಟ್ವಿಸ್ಟ್‌: ಎರಡೂವರೆ ತಿಂಗಳ ಬಳಿಕ ಆರೋಪಿ ಅರೆಸ್ಟ್‌

ಕೃಷಿ ಹೊಂಡದಲ್ಲಿ ಮಹಿಳೆಯ ಶವ ಪತ್ತೆ ಪ್ರಕರಣಕ್ಕೆ ಟ್ವಿಸ್ಟ್‌: ಎರಡೂವರೆ ತಿಂಗಳ ಬಳಿಕ ಆರೋಪಿ ಅರೆಸ್ಟ್‌

October 21, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

  • E Paper
  • WhatsApp Group
  • E Paper
  • E Paper
error: Content is protected !!
Join WhatsApp Read E-Paper