HomeGadag Newsಕಾನೂನು ಸುವ್ಯವಸ್ಥೆಗೆ ಧಕ್ಕೆ ಆರೋಪ: ಗದಗ ಜಿಲ್ಲೆಯಿಂದ ರೌಡಿಶೀಟರ್ ಪ್ರಕಾಶ್ ಗಡಿಪಾರು!

ಕಾನೂನು ಸುವ್ಯವಸ್ಥೆಗೆ ಧಕ್ಕೆ ಆರೋಪ: ಗದಗ ಜಿಲ್ಲೆಯಿಂದ ರೌಡಿಶೀಟರ್ ಪ್ರಕಾಶ್ ಗಡಿಪಾರು!

For Dai;y Updates Join Our whatsapp Group

ಗದಗ: ಗಲಾಟೆ, ಜೀವ ಬೆದರಿಕೆ, ಜಾತಿ ನಿಂದನೆ, ಸಾರ್ವಜನಿಕ ಆಸ್ತಿಗೆ ಹಾನಿ ಸೇರಿದಂತೆ ಹಲವು ಗಂಭೀರ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಪ್ರಕಾಶ್ ನನ್ನು ಗದಗ ಜಿಲ್ಲೆಯಿಂದ ಗಡಿಪಾರು ಮಾಡಲಾಗಿದೆ.

ಈ ಕುರಿತು ಗದಗ ಎಸ್ಪಿ ರೋಹನ್ ಜಗದೀಶ್ ಪ್ರಕಟಣೆ ನೀಡಿದ್ದು, ಸಾರ್ವಜನಿಕ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟುಮಾಡುವ ಚಟುವಟಿಕೆಗಳಲ್ಲಿ ನಿರಂತರವಾಗಿ ತೊಡಗಿದ್ದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದಿದ್ದಾರೆ.

ಪೊಲೀಸ್ ಇಲಾಖೆಯ ಮಾಹಿತಿಯಂತೆ, ಪ್ರಕಾಶ್ ವಿರುದ್ಧ ಈಗಾಗಲೇ ಹಲವು ಕ್ರಿಮಿನಲ್ ಪ್ರಕರಣಗಳು ದಾಖಲಾಗಿದ್ದು, ಬಂಧನ ಹಾಗೂ ನ್ಯಾಯಾಂಗ ಬಂಧನಕ್ಕೊಳಗಾದ ಬಳಿಕವೂ ಆತನ ವರ್ತನೆಯಲ್ಲಿ ಯಾವುದೇ ಬದಲಾವಣೆ ಕಂಡುಬಂದಿರಲಿಲ್ಲ. ಮತ್ತೆ ಮತ್ತೆ ಸಮಾಜಘಾತಕ ಚಟುವಟಿಕೆಗಳಲ್ಲಿ ತೊಡಗುತ್ತಿದ್ದ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಪೊಲೀಸ್ ಠಾಣೆಯಿಂದ ಗಡಿಪಾರು ಪ್ರಸ್ತಾವನೆ ಸಲ್ಲಿಸಲಾಗಿತ್ತು. ಬಳಿಕ ಸಮಗ್ರ ವಿಚಾರಣೆ ನಡೆಸಿದ ಅಧಿಕಾರಿಗಳು ಗದಗ ಜಿಲ್ಲೆಯಿಂದ ಗಡಿಪಾರು ಮಾಡುವ ಆದೇಶ ಹೊರಡಿಸಿದ್ದಾರೆ.

ಎರಡು ಗಂಭೀರ ಕ್ರಿಮಿನಲ್ ಪ್ರಕರಣಗಳು:

ಪ್ರಕಾಶ್ ವಿರುದ್ಧ 2024ರ ಅಪರಾಧ ಸಂಖ್ಯೆ 76/2024ರಲ್ಲಿ ಗಲಾಟೆ, ಹಲ್ಲೆ, ಜೀವ ಬೆದರಿಕೆ, ಸಾರ್ವಜನಿಕ ಆಸ್ತಿಗೆ ಹಾನಿ, ಜಾತಿ ನಿಂದನೆ ಸೇರಿದಂತೆ ಭಾರತೀಯ ದಂಡ ಸಂಹಿತೆ (IPC) ಹಾಗೂ ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಇದೇ ರೀತಿ ಅಪರಾಧ ಸಂಖ್ಯೆ 147/2024ರಲ್ಲಿ ಭಾರತೀಯ ನ್ಯಾಯ ಸಂಹಿತೆ (BNS) ಹಾಗೂ ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ (ತಿದ್ದುಪಡಿ) ಕಾಯ್ದೆಯಡಿ ಮತ್ತೊಂದು ಗಂಭೀರ ಪ್ರಕರಣ ದಾಖಲಾಗಿದ್ದು, ಈ ಎರಡೂ ಪ್ರಕರಣಗಳು ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿವೆ.

ಐದು ಬಾರಿ ಮುಂಜಾಗ್ರತಾ ಕ್ರಮ:

ಕ್ರಿಮಿನಲ್ ಪ್ರಕರಣಗಳ ಜೊತೆಗೆ ಪ್ರಕಾಶ್ ವಿರುದ್ಧ 2025 ಮತ್ತು 2026ರಲ್ಲಿ ಒಟ್ಟು ಐದು ಮುಂಜಾಗ್ರತಾ (P.R.) ಪ್ರಕರಣಗಳು ದಾಖಲಾಗಿವೆ. 2025ರಲ್ಲಿ ಮೂರು ಹಾಗೂ 2026ರಲ್ಲಿ ಎರಡು ಬಾರಿ ಮುಂಜಾಗ್ರತಾ ಕ್ರಮ ಕೈಗೊಂಡಿದ್ದರೂ ಆತನ ಚಟುವಟಿಕೆಗಳಲ್ಲಿ ಯಾವುದೇ ಬದಲಾವಣೆ ಕಂಡು ಬಂದಿರಲಿಲ್ಲ. ಇದೇ ಕಾರಣದಿಂದ ಅಂತಿಮವಾಗಿ ಗಡಿಪಾರು ಕ್ರಮ ಜಾರಿಗೊಳಿಸಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಕಠಿಣ ಎಚ್ಚರಿಕೆ:

ಗಲಭೆ, ಜೀವ ಬೆದರಿಕೆ, ಸಾರ್ವಜನಿಕ ಆಸ್ತಿಗೆ ಹಾನಿ ಹಾಗೂ ಸಮಾಜಘಾತಕ ಚಟುವಟಿಕೆಗಳಲ್ಲಿ ತೊಡಗುವವರ ವಿರುದ್ಧ ಮುಂದೆಯೂ ಇದೇ ರೀತಿಯ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಗದಗ ಜಿಲ್ಲಾ ಪೊಲೀಸ್ ಇಲಾಖೆ ಎಚ್ಚರಿಕೆ ನೀಡಿದೆ. ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ ಯಾವುದೇ ವ್ಯಕ್ತಿಯನ್ನು ಸಹಿಸುವ ಪ್ರಶ್ನೆಯೇ ಇಲ್ಲ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೋಹನ್ ಜಗದೀಶ್ ಸ್ಪಷ್ಟಪಡಿಸಿದ್ದಾರೆ.

ಪ್ರಕಾಶ್ ವಿರುದ್ಧ ದಾಖಲಾಗಿರುವ ಮುಂಜಾಗ್ರತಾ ಪ್ರಕರಣಗಳು:

P.R. No. 08/2025,
P.R. No. 20/2025,
P.R. No. 54/2025,
P.R. No. 23/2026,
P.R. No. 28/2026

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img