HomeKarnataka Newsಕರ್ನಾಟಕದಲ್ಲಿ ಮತ್ತೆ ವರುಣನ ಅಬ್ಬರ; ಕರಾವಳಿ ಜಿಲ್ಲೆಗಳಿಗೆ ಭಾರೀ ಮಳೆ, ದಕ್ಷಿಣ ಕನ್ನಡಕ್ಕೆ ಆರೆಂಜ್ ಅಲರ್ಟ್

ಕರ್ನಾಟಕದಲ್ಲಿ ಮತ್ತೆ ವರುಣನ ಅಬ್ಬರ; ಕರಾವಳಿ ಜಿಲ್ಲೆಗಳಿಗೆ ಭಾರೀ ಮಳೆ, ದಕ್ಷಿಣ ಕನ್ನಡಕ್ಕೆ ಆರೆಂಜ್ ಅಲರ್ಟ್

For Dai;y Updates Join Our whatsapp Group

ಬೆಂಗಳೂರು: ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆ ಮತ್ತೆ ಚುರುಕುಗೊಳ್ಳುವ ಲಕ್ಷಣಗಳು ಕಂಡುಬಂದಿದ್ದು,

ಭಾರತೀಯ ಹವಾಮಾನ ಇಲಾಖೆ (IMD) ಜುಲೈ 18 ಮತ್ತು 19ರಂದು ಕರಾವಳಿ ಭಾಗದ ಕೆಲವೆಡೆ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದೆ. ಮಳೆಯ ಜೊತೆಗೆ ಗಂಟೆಗೆ 30ರಿಂದ 50 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.

ಹವಾಮಾನ ಇಲಾಖೆ ಮಾಹಿತಿ ಪ್ರಕಾರ, ಕರಾವಳಿ ಹಾಗೂ ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಭೂಕುಸಿತ ಸಂಭವಿಸುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಡಳಿತಗಳಿಗೆ ಸೂಚಿಸಲಾಗಿದೆ. ಈ ಹಿಂದೆ ರಾಜ್ಯದಲ್ಲಿ ವ್ಯಾಪಕ ಮಳೆಯ ಸಾಧ್ಯತೆ ಕಡಿಮೆ ಎಂದು ಅಂದಾಜಿಸಲಾಗಿದ್ದರೂ, ಇದೀಗ ಕರಾವಳಿ ಭಾಗದಲ್ಲಿ ಮಳೆಯ ಚಟುವಟಿಕೆ ಮತ್ತೆ ವೇಗ ಪಡೆದುಕೊಂಡಿದೆ.

ಜುಲೈ 18 ಮತ್ತು 19ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಕೆಲವೆಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪಿಯು ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿದೆ.

ಮಲೆನಾಡಿನ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲೂ ಕೆಲವೆಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಬೆಳಗಾವಿ ಜಿಲ್ಲೆಯಲ್ಲಿಯೂ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ.

ಇದಲ್ಲದೆ ಧಾರವಾಡ, ಗದಗ, ಹಾವೇರಿ, ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಬಾಗಲಕೋಟೆ, ಕೊಪ್ಪಳ ಹಾಗೂ ವಿಜಯಪುರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯೊಂದಿಗೆ ಗಂಟೆಗೆ 40ರಿಂದ 50 ಕಿ.ಮೀ. ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆ ಇದೆ ಎಂದು ಐಎಂಡಿ ತಿಳಿಸಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ರಾಮನಗರ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ, ವಿಜಯನಗರ, ಚಾಮರಾಜನಗರ, ಹಾಸನ ಹಾಗೂ ಕೊಡಗು ಜಿಲ್ಲೆಗಳಲ್ಲೂ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಈ ಭಾಗಗಳಲ್ಲಿಯೂ ಕೆಲವೆಡೆ ಬಿರುಗಾಳಿಯ ವೇಗ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ಮನವಿ ಮಾಡಿದೆ.

ಕರಾವಳಿ ಭಾಗಗಳಲ್ಲಿ ಮಳೆಯ ತೀವ್ರತೆ ಮುಂದುವರಿಯುವ ಸಾಧ್ಯತೆ ಇರುವುದರಿಂದ ನದಿ-ಹಳ್ಳಗಳ ತೀರ ಪ್ರದೇಶದ ನಿವಾಸಿಗಳು, ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಸಂಚರಿಸುವವರು ಹಾಗೂ ಮೀನುಗಾರರು ಸ್ಥಳೀಯ ಆಡಳಿತ ಮತ್ತು ಹವಾಮಾನ ಇಲಾಖೆಯ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img