HomeBengaluru NewsBengaluru Metro Update: ಹಸಿರು ಮಾರ್ಗದಲ್ಲಿ ತಾಂತ್ರಿಕ ದೋಷ; 45 ನಿಮಿಷಗಳ ಬಳಿಕ ಮೆಟ್ರೋ ಸಂಚಾರ...

Bengaluru Metro Update: ಹಸಿರು ಮಾರ್ಗದಲ್ಲಿ ತಾಂತ್ರಿಕ ದೋಷ; 45 ನಿಮಿಷಗಳ ಬಳಿಕ ಮೆಟ್ರೋ ಸಂಚಾರ ಪುನರಾರಂಭ

For Dai;y Updates Join Our whatsapp Group

ಬೆಂಗಳೂರು: ಬೆಂಗಳೂರಿನ ನಮ್ಮ ಮೆಟ್ರೋ ಹಸಿರು ಮಾರ್ಗದಲ್ಲಿ ವಿದ್ಯುತ್ ಪೂರೈಕೆಯಲ್ಲಿನ ತಾಂತ್ರಿಕ ದೋಷದಿಂದಾಗಿ ಇಂದು ಬೆಳಗ್ಗೆ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ ಉಂಟಾಗಿತ್ತು.

ಬೆಳಗ್ಗೆ 8 ಗಂಟೆ ಸುಮಾರಿಗೆ ಸಮಸ್ಯೆ ಕಾಣಿಸಿಕೊಂಡಿದ್ದು, ಪ್ರಯಾಣಿಕರು ತೀವ್ರ ತೊಂದರೆ ಅನುಭವಿಸಿದರು.

ವಿದ್ಯುತ್ ಸಮಸ್ಯೆಯಿಂದಾಗಿ ಹಸಿರು ಮಾರ್ಗದ ಸಿಲ್ಕ್ ಇನ್‌ಸ್ಟಿಟ್ಯೂಟ್‌ನಿಂದ ಯಶವಂತಪುರದವರೆಗೆ ಮಾತ್ರ ಶಾರ್ಟ್-ಲೂಪ್ ಸೇವೆಯಲ್ಲಿ ರೈಲು ಸಂಚಾರ ನಡೆಸಲಾಗಿತ್ತು.

ಯಶವಂತಪುರದಿಂದ ಮಾದಾವರ (ನಾಗಸಂದ್ರ ವಿಸ್ತರಿತ ಮಾರ್ಗ) ನಡುವಿನ 10 ನಿಲ್ದಾಣಗಳಲ್ಲಿ ಮೆಟ್ರೋ ಸೇವೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು.

ತಾಂತ್ರಿಕ ದೋಷ ಸರಿಪಡಿಸಲು ಬಿಎಂಆರ್‌ಸಿಎಲ್  ತುರ್ತು ಕ್ರಮ ಕೈಗೊಂಡಿದ್ದು, ಇದೀಗ ಬೆಳಗ್ಗೆ 8.45ರ ವೇಳೆಗೆ ಮೆಟ್ರೋ ಸಂಚಾರ ಮತ್ತೆ ಆರಂಭಗೊಂಡಿದೆ.

ಈ ಕುರಿತು ಬಿಎಂಆರ್‌ಸಿಎಲ್, ತಾಂತ್ರಿಕ ದೋಷವನ್ನು ಸರಿಪಡಿಸಲು ಸಿಬ್ಬಂದಿ ತುರ್ತು ಕಾರ್ಯಾಚರಣೆ ನಡೆಸಿದ್ದು, ಪ್ರಯಾಣಿಕರಿಗೆ ಉಂಟಾದ ಅನಾನುಕೂಲತೆಗೆ ವಿಷಾದ ವ್ಯಕ್ತಪಡಿಸಿದೆ.

ಹಸಿರು ಮಾರ್ಗವು ಒಟ್ಟು 33.46 ಕಿ.ಮೀ ಉದ್ದ ಹೊಂದಿದ್ದು, 32 ನಿಲ್ದಾಣಗಳ ಮೂಲಕ ನಗರದ ಉತ್ತರ ಮತ್ತು ದಕ್ಷಿಣ ಭಾಗಗಳನ್ನು ಸಂಪರ್ಕಿಸುತ್ತದೆ.

ಬೆಳಗಿನ ಪೀಕ್ ಅವರ್‌ನಲ್ಲಿ ಸಮಸ್ಯೆ ಎದುರಾದ ಕಾರಣ ಕಚೇರಿ, ಕಾಲೇಜು ಹಾಗೂ ಆಸ್ಪತ್ರೆಗಳಿಗೆ ತೆರಳುತ್ತಿದ್ದ ಸಾವಿರಾರು ಪ್ರಯಾಣಿಕರು ಯಶವಂತಪುರ ಸೇರಿದಂತೆ ಹಲವು ನಿಲ್ದಾಣಗಳಲ್ಲಿ ಪರದಾಡುವಂತಾಗಿತ್ತು. ಇದೀಗ ಮೆಟ್ರೋ ಸೇವೆ ಸಹಜ ಸ್ಥಿತಿಗೆ ಮರಳಿದೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img