ಚಿತ್ರದುರ್ಗ: ಫುಟ್‌ಪಾತ್‌ನಲ್ಲಿ ನಿಂತಿದ್ದವರ ಮೇಲೆ ನಿಯಂತ್ರಣ ತಪ್ಪಿದ ಕಾರು ಹರಿದ ಪರಿಣಾಮ ಯುವಕನೊಬ್ಬ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಟಿ. ನುಲೇನೂರು ಬಳಿ ನಡೆದಿದೆ.
ಚಾಲಕನ ನಿಯಂತ್ರಣ ತಪ್ಪಿದ ಕಾರು ಏಕಾಏಕಿ ಫುಟ್‌ಪಾತ್‌ಗೆ ನುಗ್ಗಿದ್ದು, ಅಲ್ಲಿದ್ದವರಿಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಹೊಳಲ್ಕೆರೆ ತಾಲೂಕಿನ ದಗ್ಗೆ ಗ್ರಾಮದ ಪ್ರದೀಪ್ (30) ಎಂಬ ಯುವಕ ಮೃತಪಟ್ಟಿದ್ದಾರೆ.
ಇದೇ ವೇಳೆ ಮತ್ತೋರ್ವ ಮಹಿಳೆಯ ಕಾಲು ಮುರಿದಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಅಪಘಾತದ ಭೀಕರ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಘಟನೆ ಕುರಿತು ಚಿತ್ರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.



