HomeIndia Newsಧರ್ಮಸ್ಥಳ ಸೌಜನ್ಯ ಕೊಲೆ ಪ್ರಕರಣ; ಮರು ತನಿಖೆ ಕುರಿತ ಆದೇಶವನ್ನು ಕಾಯ್ದಿರಿಸಿದ ಸುಪ್ರೀಂ ಕೋರ್ಟ್

ಧರ್ಮಸ್ಥಳ ಸೌಜನ್ಯ ಕೊಲೆ ಪ್ರಕರಣ; ಮರು ತನಿಖೆ ಕುರಿತ ಆದೇಶವನ್ನು ಕಾಯ್ದಿರಿಸಿದ ಸುಪ್ರೀಂ ಕೋರ್ಟ್

For Dai;y Updates Join Our whatsapp Group

ನವದೆಹಲಿ: ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರು ತನಿಖೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ತನ್ನ ಆದೇಶವನ್ನು ಕಾಯ್ದಿರಿಸಿದೆ. ಪ್ರಕರಣದ ವಿಚಾರಣೆ ವೇಳೆ ತನಿಖೆಯ ಗುಣಮಟ್ಟದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ನ್ಯಾಯಪೀಠ, ಸಿಬಿಐ ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡಿತು.

ಸೌಜನ್ಯ ಅವರ ತಾಯಿ ಕುಸುಮಾವತಿ ಗೌಡ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಸಂಜಯ್ ಕುಮಾರ್ ನೇತೃತ್ವದ ದ್ವಿಸದಸ್ಯ ಪೀಠ ನಡೆಸಿತು. ವಿಚಾರಣೆ ವೇಳೆ, “ತನಿಖಾಧಿಕಾರಿ ಘಟನಾ ಸ್ಥಳಕ್ಕೆ ಏಕೆ ಭೇಟಿ ನೀಡಲಿಲ್ಲ? 14 ವರ್ಷಗಳಾದರೂ ಸಮರ್ಪಕ ತನಿಖೆ ನಡೆದಿಲ್ಲ” ಎಂದು ಸಿಬಿಐಗೆ ನ್ಯಾಯಪೀಠ ಪ್ರಶ್ನೆ ಮಾಡಿತು.

ಪ್ರಕರಣದಲ್ಲಿರುವ ಸಾಕ್ಷ್ಯಗಳನ್ನು ಸುರಕ್ಷಿತವಾಗಿ ಸಂರಕ್ಷಿಸುವಂತೆ ಸೂಚಿಸಿದ ನ್ಯಾಯಪೀಠ, ಅಂತಿಮ ಆದೇಶದ ಬಳಿಕ ಮಧ್ಯಂತರ ತನಿಖಾ ವರದಿಯನ್ನೂ ಕೇಳಲಾಗುವುದು ಎಂದು ತಿಳಿಸಿತು. ಪ್ರಕರಣದ ಮರು ತನಿಖೆಗೆ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸುವ ಕುರಿತು ನ್ಯಾಯಾಲಯವೇ ಸೂಕ್ತ ನಿರ್ಧಾರ ಕೈಗೊಳ್ಳಲಿದೆ ಎಂದು ಹೇಳಿತು.

ಸೌಜನ್ಯ ಅವರ ತಾಯಿ, ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ಸ್ವತಂತ್ರ ತನಿಖೆ ನಡೆಸುವಂತೆ ಮನವಿ ಸಲ್ಲಿಸಿದ್ದಾರೆ. ಈ ವೇಳೆ ರಾಜ್ಯ ಸರ್ಕಾರ, ಎಸ್‌ಐಟಿ ರಚನೆಯಾದರೆ ತನಿಖೆಗೆ ಸಂಪೂರ್ಣ ಸಹಕಾರ ನೀಡಲು ಸಿದ್ಧವಿರುವುದಾಗಿ ನ್ಯಾಯಾಲಯಕ್ಕೆ ತಿಳಿಸಿದೆ.

ಮರು ತನಿಖೆಗೆ ತಾತ್ವಿಕ ಒಪ್ಪಿಗೆ ಸೂಚಿಸಿರುವ ಸುಪ್ರೀಂ ಕೋರ್ಟ್, ಯಾವ ರೀತಿಯ ತನಿಖೆ ನಡೆಸಬೇಕು ಹಾಗೂ ಅದನ್ನು ಯಾವ ಸಂಸ್ಥೆ ಕೈಗೊಳ್ಳಬೇಕು ಎಂಬ ಕುರಿತು ತನ್ನ ಅಂತಿಮ ಆದೇಶವನ್ನು ಕಾಯ್ದಿರಿಸಿದೆ. ತೀರ್ಪಿನಲ್ಲಿ ತನಿಖೆಯ ಸ್ವರೂಪ ಹಾಗೂ ಮುಂದಿನ ಕ್ರಮಗಳ ಕುರಿತು ವಿಸ್ತೃತ ನಿರ್ದೇಶನ ನೀಡುವ ಸಾಧ್ಯತೆ ಇದೆ.

ವಿಚಾರಣೆ ವೇಳೆ ಸಿಬಿಐ ಪರ ವಾದಗಳನ್ನು ಪ್ರಶ್ನಿಸಿದ ನ್ಯಾಯಪೀಠ, “ಕೆಳ ನ್ಯಾಯಾಲಯದಲ್ಲಿ ಇನ್ನೂ ಕೆಲವರ ವಿರುದ್ಧ ತನಿಖೆ ನಡೆಸಬೇಕೆಂದು ಹೇಳಿದ್ದೀರಿ. ಈಗ ಸಿಬ್ಬಂದಿ ಕೊರತೆ ಮತ್ತು ಹಣಕಾಸಿನ ಸಮಸ್ಯೆಗಳನ್ನು ನೆಪವಾಗಿ ಹೇಳುವುದು ಸಮಂಜಸವಲ್ಲ” ಎಂದು ಅಸಮಾಧಾನ ವ್ಯಕ್ತಪಡಿಸಿತು.

14 ವರ್ಷಗಳಿಂದ ಪ್ರಕರಣದಲ್ಲಿ ಸಮರ್ಪಕ ತನಿಖೆ ನಡೆದಿಲ್ಲ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ಸಿಐಡಿ ವರದಿ ಸೇರಿದಂತೆ ದಾಖಲೆಗಳನ್ನು ಪರಿಶೀಲಿಸಿರುವುದಾಗಿ ತಿಳಿಸಿ, ಅಂತಿಮ ಆದೇಶದ ಮೂಲಕ ಮರು ತನಿಖೆಯ ಕುರಿತು ಸ್ಪಷ್ಟ ನಿರ್ದೇಶನ ನೀಡುವುದಾಗಿ ಹೇಳಿದೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img