HomeKarnataka Newsನೀಟ್ ಅಕ್ರಮದ ಬಗ್ಗೆ ಪ್ರಧಾನಿ ಮೋದಿ ಕ್ರಮಗಳು ಸಮಾಧಾನ ತಂದಿವೆ; ಆರೋಪಿಗಳ ವಿರುದ್ಧ ಕಠಿಣ ಕ್ರಮ...

ನೀಟ್ ಅಕ್ರಮದ ಬಗ್ಗೆ ಪ್ರಧಾನಿ ಮೋದಿ ಕ್ರಮಗಳು ಸಮಾಧಾನ ತಂದಿವೆ; ಆರೋಪಿಗಳ ವಿರುದ್ಧ ಕಠಿಣ ಕ್ರಮ ಅಗತ್ಯ – ಸುನೀಲ್ ಕುಮಾರ್

For Dai;y Updates Join Our whatsapp Group

ಬೆಂಗಳೂರು: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ನೀಡಿರುವ ಭರವಸೆ ಸಮಾಧಾನ ತಂದಿದೆ ಎಂದು ಮಾಜಿ ಸಚಿವ ಸುನೀಲ್ ಕುಮಾರ್ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಮಾತನಾಡಿದ ಅವರು, ನೀಟ್ ಅಕ್ರಮದ ವಿರುದ್ಧ ವಿದ್ಯಾರ್ಥಿಗಳಲ್ಲಿ ಆಕ್ರೋಶ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಮತ್ತು ಪ್ರಧಾನಿ ಮೋದಿ ಅವರು ಸೂಕ್ತ ರೀತಿಯಲ್ಲಿ ಸ್ಪಂದಿಸಿದ್ದಾರೆ ಎಂದು ಹೇಳಿದರು.

ನೀಟ್ ಹಗರಣದ ತನಿಖೆಗೆ ಕೇಂದ್ರ ಸರ್ಕಾರ ತಕ್ಷಣ ಕ್ರಮ ಕೈಗೊಂಡಿದ್ದು, ಮರು ಪರೀಕ್ಷೆಯನ್ನೂ ನಡೆಸಿ ಯಶಸ್ವಿಯಾಗಿ ಫಲಿತಾಂಶ ಪ್ರಕಟಿಸಲಾಗಿದೆ. ಇದೀಗ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಲ್ಲಿ ಭಾಗಿಯಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಫಾಸ್ಟ್‌ಟ್ರ್ಯಾಕ್ ನ್ಯಾಯಾಲಯಗಳನ್ನು ಸ್ಥಾಪಿಸುವುದಾಗಿ ಪ್ರಧಾನಿ ಘೋಷಿಸಿರುವುದು ವಿದ್ಯಾರ್ಥಿಗಳಿಗೆ ಭರವಸೆ ನೀಡಿದೆ ಎಂದು ತಿಳಿಸಿದರು.

ಪ್ರಧಾನಿ ಮೋದಿ ಅವರ ಹೇಳಿಕೆ ವಿದ್ಯಾರ್ಥಿಗಳಿಗೆ ಸಮಾಧಾನ ತಂದಿದೆ. ವಿದ್ಯಾರ್ಥಿಗಳು ತಮ್ಮ ಹಕ್ಕಿಗಾಗಿ ಹೋರಾಟ ನಡೆಸುವುದು ಸರಿಯಾದ ಕ್ರಮ, ಆದರೆ ಅದರ ರಾಜಕೀಯ ಲಾಭ ಪಡೆಯಲು ವಿರೋಧ ಪಕ್ಷಗಳು ಪ್ರಯತ್ನಿಸುತ್ತಿವೆ ಎಂದು ಸುನೀಲ್ ಕುಮಾರ್ ಆರೋಪಿಸಿದರು.

ಈಗಾಗಲೇ ಕೇಂದ್ರ ಸರ್ಕಾರ ಪರೀಕ್ಷಾ ವ್ಯವಸ್ಥೆಯಲ್ಲಿ ಹಲವು ಸುಧಾರಣಾ ಕ್ರಮಗಳನ್ನು ಕೈಗೊಂಡಿದೆ. ಮುಂದಿನ ದಿನಗಳಲ್ಲಿ ಯಾವುದೇ ಪರೀಕ್ಷೆಗಳಲ್ಲೂ ಪ್ರಶ್ನೆಪತ್ರಿಕೆ ಸೋರಿಕೆ ನಡೆಯದಂತೆ ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಳ್ಳಬೇಕು. ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ ಶಾಶ್ವತ ಪರಿಹಾರ ಕಂಡುಕೊಳ್ಳುವ ಅಗತ್ಯವಿದೆ ಎಂದು ಹೇಳಿದರು.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img