HomeIndia Newsವಿದ್ಯಾರ್ಥಿಗಳ ಮೇಲಿನ ಪ್ರಕರಣ ಹಿಂಪಡೆದು ಪರಿಹಾರಕ್ಕೆ ಕೇಂದ್ರ ಒಪ್ಪಿಗೆ: ಪ್ರಧಾನ್ ರಾಜೀನಾಮೆ ಬೇಡಿಕೆಗೆ ಸಮಯ ಕೇಳಲಾಗಿದೆ...

ವಿದ್ಯಾರ್ಥಿಗಳ ಮೇಲಿನ ಪ್ರಕರಣ ಹಿಂಪಡೆದು ಪರಿಹಾರಕ್ಕೆ ಕೇಂದ್ರ ಒಪ್ಪಿಗೆ: ಪ್ರಧಾನ್ ರಾಜೀನಾಮೆ ಬೇಡಿಕೆಗೆ ಸಮಯ ಕೇಳಲಾಗಿದೆ ಎಂದ CJP

For Dai;y Updates Join Our whatsapp Group

ನವದೆಹಲಿ: ನೀಟ್ ಪರೀಕ್ಷಾ ಅಕ್ರಮ ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆಗೆ ಸಂಬಂಧಿಸಿದಂತೆ ತಮ್ಮ ಮೂರು ಪ್ರಮುಖ ಬೇಡಿಕೆಗಳ ಪೈಕಿ ಎರಡು ಬೇಡಿಕೆಗಳಿಗೆ ಕೇಂದ್ರ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಿದೆ ಎಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ತಿಳಿಸಿದೆ.

ದೆಹಲಿಯ ಕಾನ್ಸ್ಟಿಟ್ಯೂಷನ್ ಕ್ಲಬ್‌ನಲ್ಲಿ ಕೇಂದ್ರ ಸಚಿವರಾದ ಜೆ.ಪಿ. ನಡ್ಡಾ ಮತ್ತು ಜಿತೇಂದ್ರ ಸಿಂಗ್ ಅವರು ಸಿಜೆಪಿಯ ಮುಖ್ಯ ವಕ್ತಾರ ಸೌರವ್ ದಾಸ್ ಹಾಗೂ ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಅವರೊಂದಿಗೆ ಎರಡನೇ ಸುತ್ತಿನ ಸಭೆ ನಡೆಸಿದರು.

ಸಭೆಯಲ್ಲಿ ಸಿಜೆಪಿ ಮೂರು ಪ್ರಮುಖ ಬೇಡಿಕೆಗಳನ್ನು ಕೇಂದ್ರ ಸರ್ಕಾರದ ಮುಂದಿಟ್ಟಿತ್ತು. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರನ್ನು ಸಂಪುಟದಿಂದ ವಜಾಗೊಳಿಸಬೇಕು, ಪ್ರತಿಭಟನೆಯಲ್ಲಿ ಭಾಗಿಯಾಗಿರುವ ವಿದ್ಯಾರ್ಥಿಗಳ ವಿರುದ್ಧ ದಾಖಲಿಸಿರುವ ಪ್ರಕರಣಗಳನ್ನು ಹಿಂಪಡೆಯಬೇಕು ಹಾಗೂ ಆತ್ಮಹತ್ಯೆ ಮಾಡಿಕೊಂಡಿರುವ ನೀಟ್ ಆಕಾಂಕ್ಷಿಗಳ ಕುಟುಂಬಗಳಿಗೆ ಒಂದು ಕೋಟಿ ರೂಪಾಯಿ ಪರಿಹಾರ ನೀಡಬೇಕು ಎಂದು ಒತ್ತಾಯಿಸಿತ್ತು.

ಸಭೆಯ ಬಳಿಕ ಮಾತನಾಡಿದ ಸಿಜೆಪಿ ಮುಖಂಡರು, ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಹೊರತುಪಡಿಸಿ ಉಳಿದ ಎರಡು ಬೇಡಿಕೆಗಳ ಬಗ್ಗೆ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಿದೆ ಎಂದು ಹೇಳಿದರು. ಈ ಕುರಿತು ಮುಂದಿನ ಸುತ್ತಿನ ಸಭೆ ನಡೆಯಲಿದೆ ಎಂದು ತಿಳಿಸಿದರು.

ಸಿಜೆಪಿ ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಮಾತನಾಡಿ, ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಕುರಿತು ನಿರ್ಧಾರ ಕೈಗೊಳ್ಳಲು ಸರ್ಕಾರ ನಾಳೆ ಮಧ್ಯಾಹ್ನದವರೆಗೆ ಸಮಯ ಕೇಳಿದೆ. ಶೀಘ್ರದಲ್ಲೇ ಅವರನ್ನು ಸಂಪುಟದಿಂದ ತೆಗೆದುಹಾಕಲಾಗುತ್ತದೆ ಎಂಬ ವಿಶ್ವಾಸವಿದೆ ಎಂದು ಹೇಳಿದರು.

ಅಲ್ಲದೆ, ನೀಟ್ ಪರೀಕ್ಷೆಯಲ್ಲಿ ಅಕ್ರಮಗಳಿಂದಾಗಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಗಳ ಕುಟುಂಬಗಳಿಗೆ ಪರಿಹಾರ ನೀಡುವುದು ಹಾಗೂ ಪ್ರತಿಭಟನಾ ನಿರತ ವಿದ್ಯಾರ್ಥಿಗಳ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ಗಳು ಮತ್ತು ಕಾನೂನು ಪ್ರಕರಣಗಳನ್ನು ಹಿಂಪಡೆಯುವ ಬೇಡಿಕೆಗಳಿಗೆ ಸರ್ಕಾರ ತಾತ್ವಿಕ ಒಪ್ಪಿಗೆ ನೀಡಿದೆ ಎಂದು ಅವರು ತಿಳಿಸಿದರು.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img