HomeSports Newsಪೋಲಿಯೊವನ್ನು ಸೋಲಿಸಿ ದೇಶಕ್ಕೆ ಮೊದಲ ಪದಕ ತಂದ ಝಂದು; ಕಾಮನ್ ವೆಲ್ತ್ ಗೇಮ್ಸ್ʼನಲ್ಲಿ ಭಾರತದ ಖಾತೆ...

ಪೋಲಿಯೊವನ್ನು ಸೋಲಿಸಿ ದೇಶಕ್ಕೆ ಮೊದಲ ಪದಕ ತಂದ ಝಂದು; ಕಾಮನ್ ವೆಲ್ತ್ ಗೇಮ್ಸ್ʼನಲ್ಲಿ ಭಾರತದ ಖಾತೆ ಓಪನ್

For Dai;y Updates Join Our whatsapp Group

ಕಾಮನ್ವೆಲ್ತ್ ಗೇಮ್ಸ್‌ನ ಮೊದಲ ದಿನವೇ ಭಾರತ ಪದಕದ ಖಾತೆ ತೆರೆದಿದೆ. ಪುರುಷರ ಹೆವಿವೇಯ್ಟ್ ಪ್ಯಾರಾ ಪವರ್ಲಿಫ್ಟಿಂಗ್ ಸ್ಪರ್ಧೆಯಲ್ಲಿ ಭಾರತದ ಝಂದು ಕುಮಾರ್ ಕಂಚಿನ ಪದಕ ಗೆದ್ದು ದೇಶಕ್ಕೆ ಮೊದಲ ಪದಕ ತಂದುಕೊಟ್ಟಿದ್ದಾರೆ.

28 ವರ್ಷದ ಪೋಲಿಯೊ ಪೀಡಿತ ಝಂದು ಕುಮಾರ್ ತಮ್ಮ ಮೊದಲ ಪ್ರಯತ್ನದಲ್ಲಿ 181 ಕೆ.ಜಿ. ಹಾಗೂ ಎರಡನೇ ಪ್ರಯತ್ನದಲ್ಲಿ 190 ಕೆ.ಜಿ. ತೂಕವನ್ನು ಯಶಸ್ವಿಯಾಗಿ ಎತ್ತಿದರು. ಮೂರನೇ ಪ್ರಯತ್ನದಲ್ಲಿ 196 ಕೆ.ಜಿ. ತೂಕ ಎತ್ತಲು ವಿಫಲರಾದರೂ, ಒಟ್ಟು 130.9 ಪಾಯಿಂಟ್‌ಗಳೊಂದಿಗೆ ಮೂರನೇ ಸ್ಥಾನ ಪಡೆದು ಕಂಚಿನ ಪದಕ ತಮ್ಮದಾಗಿಸಿಕೊಂಡರು.

ಈ ಸ್ಪರ್ಧೆಯಲ್ಲಿ ನೈಜೀರಿಯಾದ ಇಡ್ರಿಸ್ ರಿಲುವಾನ್ 132.8 ಪಾಯಿಂಟ್‌ಗಳೊಂದಿಗೆ ಚಿನ್ನದ ಪದಕ ಗೆದ್ದರೆ, ಆತಿಥೇಯ ಬ್ರಿಟನ್‌ನ ಮ್ಯಾಥ್ಯ ಹಾರ್ಡಿಂಗ್ 131 ಪಾಯಿಂಟ್‌ಗಳೊಂದಿಗೆ ಬೆಳ್ಳಿ ಪದಕಕ್ಕೆ ತೃಪ್ತಿಪಟ್ಟರು.

ಇದೇ ವಿಭಾಗದಲ್ಲಿ ಸ್ಪರ್ಧಿಸಿದ್ದ ಭಾರತದ ಮತ್ತೋರ್ವ ಪ್ಯಾರಾ ಪವರ್ಲಿಫ್ಟರ್ ಸುಧೀರ್ 114.1 ಪಾಯಿಂಟ್‌ಗಳೊಂದಿಗೆ ಆರನೇ ಸ್ಥಾನ ಪಡೆದರು.

ಇದಕ್ಕೂ ಮುನ್ನ ನಡೆದ ಸ್ಪರ್ಧೆಯಲ್ಲಿ ಭಾರತದ ಅಶೋಕ್ ಮಲಿಕ್ ಪದಕದ ಸನಿಹಕ್ಕೆ ಬಂದರೂ, ನಾಲ್ಕನೇ ಸ್ಥಾನಕ್ಕೆ ತೃಪ್ತಿಪಟ್ಟು ಕಂಚಿನ ಪದಕದಿಂದ ವಂಚಿತರಾದರು.

ಕ್ರೀಡಾಕೂಟದ ಮೊದಲ ದಿನವೇ ಝಂದು ಕುಮಾರ್ ಕಂಚಿನ ಪದಕ ಗೆಲ್ಲುವ ಮೂಲಕ ಭಾರತದ ಪದಕದ ಖಾತೆ ತೆರೆದಿದ್ದು, ಮುಂದಿನ ದಿನಗಳಲ್ಲಿ ಭಾರತೀಯ ಕ್ರೀಡಾಪಟುಗಳಿಂದ ಇನ್ನಷ್ಟು ಪದಕಗಳ ನಿರೀಕ್ಷೆ ಮೂಡಿಸಿದೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img