HomeIndia NewsCJP ಪ್ರತಿಭಟನೆ ಅಂತ್ಯ; ಜಂತರ್ ಮಂತರ್ ಸ್ವಚ್ಛತೆಗೆ ಇಳಿದ NDMC, 500 ಕಾರ್ಮಿಕರ ನಿಯೋಜನೆ!

CJP ಪ್ರತಿಭಟನೆ ಅಂತ್ಯ; ಜಂತರ್ ಮಂತರ್ ಸ್ವಚ್ಛತೆಗೆ ಇಳಿದ NDMC, 500 ಕಾರ್ಮಿಕರ ನಿಯೋಜನೆ!

For Dai;y Updates Join Our whatsapp Group

ನವದೆಹಲಿ: ಕಳೆದ ಒಂದು ವಾರದಿಂದ ನಡೆಯುತ್ತಿದ್ದ ಕಾಕ್ರೋಚ್‌ ಜನತಾ ಪಾರ್ಟಿ ಪ್ರತಿಭಟನೆ ಅಂತ್ಯಗೊಂಡ ಬೆನ್ನಲ್ಲೇ ನವದೆಹಲಿ ಮುನ್ಸಿಪಲ್ ಕಾರ್ಪೊರೇಷನ್‌ ಜಂತರ್ ಮಂತರ್ ಪ್ರತಿಭಟನಾ ಸ್ಥಳದಲ್ಲಿ ಸ್ವಚ್ಛತಾ ಕಾರ್ಯ ಆರಂಭಿಸಿದೆ.

ಕೇಂದ್ರ ಸರ್ಕಾರವು ಪ್ರತಿಭಟನಾಕಾರರ ಮೂರು ಬೇಡಿಕೆಗಳಿಗೆ ಒಪ್ಪಿಗೆ ನೀಡಿದ ಹಿನ್ನೆಲೆಯಲ್ಲಿ CJP ಹೋರಾಟವನ್ನು ಅಂತ್ಯಗೊಳಿಸಿತ್ತು. ಶನಿವಾರ ಸಂಜೆ ಪ್ರತಿಭಟನಾಕಾರರು ಸ್ಥಳ ಖಾಲಿ ಮಾಡುತ್ತಿದ್ದಂತೆ NDMC ಸಿಬ್ಬಂದಿ ಸ್ವಚ್ಛತಾ ಕಾರ್ಯಕ್ಕೆ ಮುಂದಾಗಿದ್ದಾರೆ.

ಪ್ರತಿಭಟನಾ ಸ್ಥಳದಲ್ಲಿ ಉಳಿದಿದ್ದ ತ್ಯಾಜ್ಯ, ಮುರಿದ ಅವಶೇಷಗಳು, ತಾತ್ಕಾಲಿಕ ಡೇರೆಗಳು, ಆಹಾರ ಸಾಮಗ್ರಿಗಳಿಂದ ಸಂಗ್ರಹವಾಗಿದ್ದ ಕಸ ಸೇರಿದಂತೆ ವಿವಿಧ ವಸ್ತುಗಳನ್ನು ತೆರವುಗೊಳಿಸಲಾಗುತ್ತಿದೆ.

500ಕ್ಕೂ ಹೆಚ್ಚು ಕಾರ್ಮಿಕರ ನಿಯೋಜನೆ:

NDMC ಅಧಿಕಾರಿಗಳ ಪ್ರಕಾರ, ಜಂತರ್ ಮಂತರ್ ಮತ್ತು ಸುತ್ತಮುತ್ತಲಿನ ಪ್ರದೇಶಗಳ ಸ್ವಚ್ಛತೆಗಾಗಿ 500ಕ್ಕೂ ಹೆಚ್ಚು ಕಾರ್ಮಿಕರನ್ನು ವಿವಿಧ ಪಾಳಿಗಳಲ್ಲಿ ನಿಯೋಜಿಸಲಾಗಿದೆ. ಬ್ಯಾನರ್‌ಗಳು, ಡೇರೆಗಳು, ನಿರ್ಮಾಣ ಅವಶೇಷಗಳು ಹಾಗೂ ಇತರೆ ತ್ಯಾಜ್ಯಗಳನ್ನು ತೆರವು ಮಾಡುವ ಕಾರ್ಯ ನಡೆಯುತ್ತಿದೆ.

ಸ್ಥಳವನ್ನು 24 ಗಂಟೆಗಳೊಳಗೆ ಸಂಪೂರ್ಣ ಸ್ವಚ್ಛಗೊಳಿಸಿ ಹಿಂದಿನ ಸ್ಥಿತಿಗೆ ತರಲು ಗುರಿ ಹೊಂದಲಾಗಿದೆ. ಇದಕ್ಕಾಗಿ ಟ್ರಕ್‌ಗಳು, ಆಟೋ ಟಿಪ್ಪರ್‌ಗಳು ಹಾಗೂ ಸ್ವಚ್ಛತಾ ಯಂತ್ರೋಪಕರಣಗಳನ್ನು ಬಳಸಲಾಗುತ್ತಿದೆ.

ಹಲವು ಪ್ರಮುಖ ರಸ್ತೆಗಳಲ್ಲಿ ಸ್ವಚ್ಛತೆ:

ಜಂತರ್ ಮಂತರ್ ರಸ್ತೆ, ಟಾಲ್‌ಸ್ಟಾಯ್ ಮಾರ್ಗ, ಜೈ ಸಿಂಗ್ ರಸ್ತೆ, ಸಂಸದ್ ಮಾರ್ಗ ಹಾಗೂ ಕನ್ನಾಟ್ ಪ್ಲೇಸ್‌ನ ಕೆಲವು ಭಾಗಗಳಲ್ಲಿ ಸ್ವಚ್ಛತಾ ಕಾರ್ಯ ಕೈಗೊಳ್ಳಲಾಗಿದೆ.

ಕಳೆದ ಎರಡು ದಿನಗಳಲ್ಲಿ ಪ್ರತಿಭಟನಾ ಸ್ಥಳ ಹಾಗೂ ಸುತ್ತಮುತ್ತಲಿನ ಪ್ರದೇಶಗಳಿಂದ ಹತ್ತಾರು ಟನ್ ಮಿಶ್ರ ತ್ಯಾಜ್ಯವನ್ನು ತೆರವುಗೊಳಿಸಲಾಗಿದೆ ಎಂದು NDMC ತಿಳಿಸಿದೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img