ಬೆಂಗಳೂರು: ಬೆಂಗಳೂರಿನ ರಾಮಮೂರ್ತಿ ನಗರದಲ್ಲಿ ಕ್ಯಾಬ್ಗಾಗಿ ಕಾಯುತ್ತಿದ್ದ ಯುವತಿಗೆ ವ್ಯಕ್ತಿಯೊಬ್ಬ ಅಸಭ್ಯವಾಗಿ ವರ್ತಿಸಿ ಕಿರುಕುಳ ನೀಡಿರುವ ಘಟನೆ ಸೋಮವಾರ ರಾತ್ರಿ ನಡೆದಿದೆ ಎಂದು ಆರೋಪಿಸಲಾಗಿದೆ.
ಸ್ಕೂಟಿಯಲ್ಲಿ ಬಂದ ವ್ಯಕ್ತಿಯೊಬ್ಬ ಯುವತಿಯ ಬಳಿ ತೆರಳಿ, “ನಿನ್ನ ರೇಟ್ ಎಷ್ಟು? ₹10 ಸಾವಿರ ಕೊಡುತ್ತೇನೆ, ಬರುತ್ತೀಯಾ?” ಎಂದು ಕೇಳಿದ್ದಾನೆ ಎನ್ನಲಾಗಿದೆ. ಇದಕ್ಕೆ ಯುವತಿ ತೀವ್ರ ಆಕ್ಷೇಪ ವ್ಯಕ್ತಪಡಿಸಿ, ಪೊಲೀಸರಿಗೆ ದೂರು ನೀಡುವುದಾಗಿ ಎಚ್ಚರಿಕೆ ನೀಡಿದಾಗ, ಆತ ಅವಾಚ್ಯ ಶಬ್ದಗಳಿಂದ ನಿಂದಿಸಿ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ಆರೋಪಿಸಲಾಗಿದೆ.
ಘಟನೆಯ ಸಂಪೂರ್ಣ ದೃಶ್ಯವನ್ನು ಯುವತಿ ತನ್ನ ಮೊಬೈಲ್ನಲ್ಲಿ ಚಿತ್ರೀಕರಿಸಿದ್ದು, ಬಳಿಕ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಆರೋಪಿಯ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಅವರು ಆಗ್ರಹಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಸೂಕ್ತ ತನಿಖೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳುವ ನಿರೀಕ್ಷೆಯಿದೆ.



