ಮೈಸೂರು: ಇಟ್ಟಿಗೆ ಗೂಡು ಕುಸಿದು ಮೂವರು ಕಾರ್ಮಿಕರು ಮೃತಪಟ್ಟಿರುವ ದಾರುಣ ಘಟನೆ ಮೈಸೂರು ಜಿಲ್ಲೆಯ ಟಿ.ನರಸೀಪುರ ತಾಲೂಕಿನ ಬೂದಳ್ಳಿ ಗ್ರಾಮದಲ್ಲಿ ನಡೆದಿದೆ.
ಮೃತರನ್ನು ಬೂದಳ್ಳಿ ಗ್ರಾಮದ ರಾಜೇಶ್ (32), ನಾಗರಾಜು (35) ಹಾಗೂ ನಾರಾಯಣ್ (40) ಎಂದು ಗುರುತಿಸಲಾಗಿದೆ.
ಇಟ್ಟಿಗೆ ಗೂಡಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಏಕಾಏಕಿ ಗೂಡು ಕುಸಿದಿದೆ. ಈ ವೇಳೆ ಅವಶೇಷಗಳಡಿ ಸಿಲುಕಿದ ಮೂವರು ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಘಟನೆ ಮಾಹಿತಿ ತಿಳಿಯುತ್ತಿದ್ದಂತೆ ಟಿ.ನರಸೀಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಟಿ.ನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.



