HomeGadag Newsಶಿಕ್ಷಣವೇ ಸಮಾಜ ಪರಿವರ್ತನೆಯ ಶಕ್ತಿ: ಶಾಸಕ ಡಾ. ಚಂದ್ರು ಲಮಾಣಿ

ಶಿಕ್ಷಣವೇ ಸಮಾಜ ಪರಿವರ್ತನೆಯ ಶಕ್ತಿ: ಶಾಸಕ ಡಾ. ಚಂದ್ರು ಲಮಾಣಿ

For Dai;y Updates Join Our whatsapp Group

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಗ್ರಾಮೀಣ ಭಾಗದ ಬಡ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗದಂತೆ ಸರ್ಕಾರ ವಿವಿಧ ಸೌಲಭ್ಯಗಳನ್ನು ಕಲ್ಪಿಸಿದ್ದು, ವಿದ್ಯಾರ್ಥಿಗಳು ಅವುಗಳನ್ನು ಸದ್ಬಳಕೆ ಮಾಡಿಕೊಂಡು ಉನ್ನತ ಸಾಧನೆ ಮಾಡಬೇಕು ಎಂದು ಶಾಸಕ ಡಾ. ಚಂದ್ರು ಲಮಾಣಿ ಹೇಳಿದರು.

ಸೋಮವಾರ ಪಟ್ಟಣದಲ್ಲಿ ಸಮಾಜ ಕಲ್ಯಾಣ ಇಲಾಖೆಯಿಂದ ₹3 ಕೋಟಿ 58 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾದ ಡಾ. ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯದ ನೂತನ ಕಟ್ಟಡವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಶಿಕ್ಷಣವು ಕೇವಲ ಪದವಿ ಪಡೆಯುವ ಸಾಧನವಲ್ಲ; ಉತ್ತಮ ವ್ಯಕ್ತಿತ್ವ, ಸಂಸ್ಕಾರ ಮತ್ತು ಸಾಮಾಜಿಕ ಹೊಣೆಗಾರಿಕೆಯನ್ನು ಬೆಳೆಸುವ ಶಕ್ತಿಯಾಗಿದೆ. ವಿದ್ಯಾರ್ಥಿನಿಯರು ವಸತಿ ನಿಲಯದ ಸೌಲಭ್ಯಗಳನ್ನು ಸಮರ್ಪಕವಾಗಿ ಬಳಸಿಕೊಂಡು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಸಾಧನೆ ಮಾಡಿ ಕುಟುಂಬ ಹಾಗೂ ಸಮಾಜಕ್ಕೆ ಕೀರ್ತಿ ತರಬೇಕು ಎಂದು ಕರೆ ನೀಡಿದರು.

ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ನಂದಾ ಹಣಬರಟ್ಟಿ ಮಾತನಾಡಿ, ಸರ್ಕಾರವು ಹಿಂದುಳಿದ ಹಾಗೂ ಬಡ ವರ್ಗದ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ವಸತಿ ನಿಲಯಗಳ ಮೂಲಕ ಉತ್ತೇಜನ ನೀಡುತ್ತಿದೆ. 100 ವಿದ್ಯಾರ್ಥಿನಿಯರಿಗೆ ಊಟ, ವಸತಿ ಸೇರಿದಂತೆ ಅಗತ್ಯ ಸೌಲಭ್ಯಗಳೊಂದಿಗೆ ಈ ನಿಲಯವನ್ನು ಇಲಾಖೆಯ ನಿಯಮಾನುಸಾರ ಭರ್ತಿ ಮಾಡಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಇಲಾಖೆ ತಾಲೂಕು ಅಧಿಕಾರಿ ಗೋಪಾಲ ನಾಯಕ, ಬಿಜೆಪಿ ಮಂಡಲ ಅಧ್ಯಕ್ಷ ಸುನೀಲ ಮಹಾಂತಶೆಟ್ಟರ, ಗ್ಯಾರಂಟಿ ಯೋಜನೆಗಳ ತಾಲೂಕು ಸಮಿತಿ ಅಧ್ಯಕ್ಷ ನಾಗರಾಜ ಮಡಿವಾಳ, ಮುತ್ತಣ್ಣ ಸಂಕನೂರ, ಎಂ.ಆರ್. ಪಾಟೀಲ, ಪ್ರವೀಣ ಬಾಳಿಕಾಯಿ, ಜಗದೀಶ ಪುರಾಣಿಕಮಠ ಸೇರಿದಂತೆ ವಿವಿಧ ಗಣ್ಯರು, ವಿದ್ಯಾರ್ಥಿನಿಯರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img