ವಿಜಯಸಾಕ್ಷಿ ಸುದ್ದಿ, ಗದಗ: 2025-26ನೇ ಸಾಲಿನ ಮುಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆ ಅಡಿಯಲ್ಲಿ ಗದಗ ಜಿಲ್ಲೆಯ ರೈತರಿಗೆ ₹78 ಕೋಟಿ ಬೆಳೆ ವಿಮೆ ಪರಿಹಾರ ಮಂಜೂರಾಗಿದೆ.
ಹತ್ತಿ, ಶೇಂಗಾ, ಮೆಕ್ಕೆಜೋಳ, ಈರುಳ್ಳಿ, ತೊಗರಿ, ಭತ್ತ ಹಾಗೂ ಸಜ್ಜೆ ಬೆಳೆಗಳಿಗೆ ಬೆಳೆ ಕಟಾವು ಆಧಾರಿತ ವಿಮೆ ಪರಿಹಾರವನ್ನು ಸರ್ಕಾರ ಬಿಡುಗಡೆ ಮಾಡಿದ್ದು, ಅರ್ಹ ರೈತರ ಬ್ಯಾಂಕ್ ಖಾತೆಗಳಿಗೆ ನೇರವಾಗಿ ಹಣ ಜಮೆಯಾಗಲಿದೆ ಎಂದು ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



