ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ: ಮಾಜಿ ಸಚಿವ ಹಾಗೂ ಗದಗ ಶಾಸಕ ಎಚ್.ಕೆ. ಪಾಟೀಲ ಅವರಿಗೆ ಸಚಿವ ಸ್ಥಾನ ಕೈತಪ್ಪಿರುವುದನ್ನು ಖಂಡಿಸಿ ಶಿರಹಟ್ಟಿ ತಾಲೂಕಿನ ತಂಗೋಡ ಗ್ರಾಮದಲ್ಲಿ ಗುರುವಾರ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ರಾಜ್ಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು.
ಪ್ರತಿಭಟನೆಯಲ್ಲಿ ಮಾತನಾಡಿದ ಕಾಂಗ್ರೆಸ್ ಮುಖಂಡ ಡಿ.ಕೆ. ಹೊನ್ನಪ್ಪನವರ, ವಿದ್ಯಾರ್ಥಿ ದಶೆಯಿಂದಲೇ ಪಕ್ಷಕ್ಕಾಗಿ ದುಡಿದಿರುವ ಎಚ್.ಕೆ. ಪಾಟೀಲ ಅವರು ಕೃಷಿ, ಗ್ರಾಮೀಣಾಭಿವೃದ್ಧಿ ಹಾಗೂ ಬೃಹತ್ ನೀರಾವರಿ ಸಚಿವರಾಗಿ ರಾಜ್ಯಕ್ಕೆ ಮಹತ್ವದ ಕೊಡುಗೆ ನೀಡಿದ್ದಾರೆ.
ಗ್ರಾಮೀಣಾಭಿವೃದ್ಧಿ ವಿಶ್ವವಿದ್ಯಾಲಯ ಸ್ಥಾಪನೆ ಸೇರಿದಂತೆ ಉತ್ತರ ಕರ್ನಾಟಕದ ಅಭಿವೃದ್ಧಿಗೆ ವಿಶೇಷ ಶ್ರಮ ವಹಿಸಿದ್ದಾರೆ ಎಂದು ಹೇಳಿದರು.
ಇಂತಹ ಅನುಭವಿ, ಪ್ರಾಮಾಣಿಕ ಹಾಗೂ ಪಕ್ಷನಿಷ್ಠ ನಾಯಕರಿಗೆ ಮೊದಲ ಹಂತದಲ್ಲೇ ಸಚಿವ ಸ್ಥಾನ ನೀಡಬೇಕಾಗಿತ್ತು. ಅವರಿಗೆ ಸಚಿವ ಸ್ಥಾನ ನೀಡದಿರುವುದು ವೈಯಕ್ತಿಕ ಅನ್ಯಾಯ ಮಾತ್ರವಲ್ಲ, ಕಾಂಗ್ರೆಸ್ ಪಕ್ಷಕ್ಕೂ ಹಿನ್ನಡೆಯಾಗಿದೆ. ಈ ಅನ್ಯಾಯದ ವಿರುದ್ಧ ಯಾವುದೇ ತ್ಯಾಗಕ್ಕೂ ಸಿದ್ಧರಿದ್ದೇವೆ ಎಂದು ಎಚ್ಚರಿಸಿದರು.
ಪ್ರತಿಭಟನೆಯಲ್ಲಿ ಫಕ್ಕೀರೇಶ ಮ್ಯಾಟಣ್ಣವರ, ಫಕ್ಕೀರೇಶ ನಡುವಿನಕೇರಿ, ಮುತ್ತು ಮುಂಡವಾಡ, ಶಿವು ಮಠದ, ರುದ್ರಗೌಡ ಪಾಟೀಲ, ಕಲವೀರಪ್ಪ ಚೌಢಾಳ, ಸುರೇಶ ತಳ್ಳಳ್ಳಿ, ಗುಡ್ಡಪ್ಪ ಬ್ಯಾಲಹುಣಸಿ, ಮಾರ್ತಂಡಪ್ಪ ಪೆದ್ದರ, ಸಂಜೀವರಡ್ಡಿ ವೆಂಕರಡ್ಡಿ, ನೇಮಣ್ಣ ನಾಯಕ, ಶರಣಪ್ಪ ಬೆಳ್ಳಟ್ಟಿ, ಮುದಕನಗೌಡ ಪಾಟೀಲ, ರಾಜು ಹತ್ತಿಕಾಳ, ಬಸವರಾಜ ಗುಳ್ಳಣ್ಣವರ, ಸಂಗಪ್ಪ ಹುರಕಣ್ಣವರ ಸೇರಿದಂತೆ ಹಲವರು ಭಾಗವಹಿಸಿದ್ದರು.



