HomeBengaluru NewsOnam 2026: ಬೆಂಗಳೂರಿನಿಂದ ಕೇರಳಕ್ಕೆ 90 ವಿಶೇಷ ಬಸ್‌; KSRTCಯಿಂದ ಭರ್ಜರಿ ವ್ಯವಸ್ಥೆ!

Onam 2026: ಬೆಂಗಳೂರಿನಿಂದ ಕೇರಳಕ್ಕೆ 90 ವಿಶೇಷ ಬಸ್‌; KSRTCಯಿಂದ ಭರ್ಜರಿ ವ್ಯವಸ್ಥೆ!

For Dai;y Updates Join Our whatsapp Group

ಬೆಂಗಳೂರು: ಮಲಯಾಳಿ ಬಾಂಧವರ ಪ್ರಮುಖ ಹಬ್ಬವಾದ ಓಣಂ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ ಕೇರಳದ ವಿವಿಧ ನಗರಗಳಿಗೆ ತೆರಳುವ ಪ್ರಯಾಣಿಕರಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಸಿಹಿಸುದ್ದಿ ನೀಡಿದೆ.

ಹಬ್ಬದ ಸಂದರ್ಭದಲ್ಲಿ ಹೆಚ್ಚಾಗುವ ಪ್ರಯಾಣಿಕರ ದಟ್ಟಣೆ ನಿಯಂತ್ರಿಸಲು ಬೆಂಗಳೂರಿನಿಂದ ಕೇರಳದ ಪ್ರಮುಖ ನಗರಗಳಿಗೆ 90 ಹೆಚ್ಚುವರಿ ವಿಶೇಷ ಬಸ್‌ಗಳನ್ನು ಕಾರ್ಯಾಚರಣೆಗೊಳಿಸಲು ಕೆಎಸ್‌ಆರ್‌ಟಿಸಿ ನಿರ್ಧರಿಸಿದೆ.

ಬೆಂಗಳೂರಿನ ಕೆಂಪೇಗೌಡ ಬಸ್ ನಿಲ್ದಾಣ, ಸ್ಯಾಟಲೈಟ್ ಬಸ್ ನಿಲ್ದಾಣ ಹಾಗೂ ಶಾಂತಿನಗರ ಬಸ್ ನಿಲ್ದಾಣಗಳಿಂದ ಕೇರಳದ ವಿವಿಧ ನಗರಗಳಿಗೆ ವಿಶೇಷ ಬಸ್‌ಗಳು ಸಂಚರಿಸಲಿವೆ.

ಕೇರಳದ ಪ್ರಮುಖ ನಗರಗಳಿಗೆ ವಿಶೇಷ ಬಸ್:

ಕಣ್ಣೂರು, ಕೊಚ್ಚಿನ್, ಎರ್ನಾಕುಲಂ, ಪಾಲಕ್ಕಾಡ್, ತ್ರಿಶೂರ್, ತಿರುವನಂತಪುರಂ ಸೇರಿದಂತೆ ಕೇರಳದ ಹಲವು ಪ್ರಮುಖ ನಗರಗಳಿಗೆ ಹೆಚ್ಚುವರಿ ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ.

ಪ್ರಯಾಣಿಕರ ಅನುಕೂಲಕ್ಕಾಗಿ ಮಲ್ಟಿ-ಆಕ್ಸಲ್ ವೋಲ್ವೋ, ಇವಿ ಪವರ್ ಪ್ಲಸ್, ಸ್ಲೀಪರ್ ಹಾಗೂ ರಾಜಹಂಸ ಸೇರಿದಂತೆ ವಿವಿಧ ಮಾದರಿಯ ಬಸ್‌ಗಳನ್ನು ವಿಶೇಷ ಕಾರ್ಯಾಚರಣೆಗೆ ನಿಯೋಜಿಸಲಾಗುತ್ತಿದೆ.

ಮುಂಗಡ ಟಿಕೆಟ್ ಬುಕ್ಕಿಂಗ್‌ಗೆ ಅವಕಾಶ:

ಓಣಂ ಹಬ್ಬದ ಹಿನ್ನೆಲೆಯಲ್ಲಿ ಕೊನೆಯ ಕ್ಷಣದಲ್ಲಿ ಉಂಟಾಗುವ ಪ್ರಯಾಣದ ಗಡಿಬಿಡಿ ತಪ್ಪಿಸಲು ಪ್ರಯಾಣಿಕರು ಮುಂಗಡವಾಗಿ ಟಿಕೆಟ್ ಕಾಯ್ದಿರಿಸಿಕೊಳ್ಳುವಂತೆ ಕೆಎಸ್‌ಆರ್‌ಟಿಸಿ ಮನವಿ ಮಾಡಿದೆ.

ನಿಯಮಿತ ಬಸ್‌ಗಳ ಟಿಕೆಟ್‌ಗಳು ಈಗಾಗಲೇ ಭರ್ತಿಯಾಗುತ್ತಿರುವ ಹಿನ್ನೆಲೆಯಲ್ಲಿ, ಪ್ರಯಾಣಿಕರು ವಿಶೇಷ ಬಸ್‌ಗಳ ವೇಳಾಪಟ್ಟಿ, ಮಾರ್ಗ ಹಾಗೂ ಲಭ್ಯವಿರುವ ಟಿಕೆಟ್‌ಗಳ ಮಾಹಿತಿಯನ್ನು ಕೆಎಸ್‌ಆರ್‌ಟಿಸಿಯ ಅಧಿಕೃತ ವೆಬ್‌ಸೈಟ್‌ನಲ್ಲಿ ಪರಿಶೀಲಿಸಿ ಮುಂಗಡ ಬುಕ್ಕಿಂಗ್ ಮಾಡಿಕೊಳ್ಳಬಹುದು.

ಓಣಂ ಹಬ್ಬದ ಸಂದರ್ಭದಲ್ಲಿ ಬೆಂಗಳೂರಿನಿಂದ ಕೇರಳಕ್ಕೆ ತೆರಳುವ ಪ್ರಯಾಣಿಕರಿಗೆ ಯಾವುದೇ ತೊಂದರೆಯಾಗದಂತೆ ಹೆಚ್ಚುವರಿ ಸಾರಿಗೆ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಕೆಎಸ್‌ಆರ್‌ಟಿಸಿ ತಿಳಿಸಿದೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img