HomeKarnataka Newsಹಾವೇರಿಯಲ್ಲಿ ಮಹಿಳೆ ಅನುಮಾನಾಸ್ಪದ ಸಾವು; ಗಂಡನ ಮನೆಯ ಮುಂದೆ ಶವವಿಟ್ಟು ಕುಟುಂಬಸ್ಥರ ಪ್ರತಿಭಟನೆ

ಹಾವೇರಿಯಲ್ಲಿ ಮಹಿಳೆ ಅನುಮಾನಾಸ್ಪದ ಸಾವು; ಗಂಡನ ಮನೆಯ ಮುಂದೆ ಶವವಿಟ್ಟು ಕುಟುಂಬಸ್ಥರ ಪ್ರತಿಭಟನೆ

For Dai;y Updates Join Our whatsapp Group

ಹಾವೇರಿ: ಮಹಿಳೆಯೊಬ್ಬರು ಅನುಮಾನಾಸ್ಪದವಾಗಿ ನೇಣು ಬಿಗಿದುಕೊಂಡು ಮೃತಪಟ್ಟಿದ್ದು, ಗಂಡನ ಮನೆಯವರೇ ಕೊಲೆ ಮಾಡಿದ್ದಾರೆ ಎಂದು ಆರೋಪಿಸಿ ಮೃತದೇಹವನ್ನು ಗಂಡನ ಮನೆಯ ಮುಂದೆ ಇಟ್ಟು ಕುಟುಂಬಸ್ಥರು ಪ್ರತಿಭಟನೆ ನಡೆಸಿರುವ ಘಟನೆ ಹಾನಗಲ್ ತಾಲೂಕಿನ ಕಾಲ್ವೇಕಲ್ಲಾಪೂರ ಗ್ರಾಮದಲ್ಲಿ ನಡೆದಿದೆ.

ಮೃತರನ್ನು 24 ವರ್ಷದ ನೀಲಮ್ಮ ನೀರಲಗಿ ಎಂದು ಗುರುತಿಸಲಾಗಿದೆ. ಕಳೆದ ಮೂರು ತಿಂಗಳ ಹಿಂದೆ ನೀಲಮ್ಮ ಅವರ ಪತಿ ಶಿವಾನಂದ ಮೃತಪಟ್ಟಿದ್ದರು. ಇದೀಗ ನೀಲಮ್ಮ ಕೂಡ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.

ಆಸ್ತಿ ವಿಚಾರವಾಗಿ ಗಂಡನ ಮನೆಯವರು ನೀಲಮ್ಮ ಅವರನ್ನು ಕೊಲೆ ಮಾಡಿದ್ದಾರೆ ಎಂದು ಅವರ ಕುಟುಂಬಸ್ಥರು ಆರೋಪಿಸಿದ್ದಾರೆ. 5 ಎಕರೆ ಜಮೀನು ನೀಡಬೇಕಾಗುತ್ತದೆ ಎಂಬ ದುರಾಸೆಯಿಂದಲೇ ನೀಲಮ್ಮ ಅವರನ್ನು ಕೊಲೆ ಮಾಡಲಾಗಿದೆ ಎಂದು ಆರೋಪಿಸಿ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮೃತದೇಹವನ್ನು ಗಂಡನ ಮನೆಯ ಮುಂದೆ ಇಟ್ಟು ಪ್ರತಿಭಟನೆ ನಡೆಸಿದ ಕುಟುಂಬಸ್ಥರು, ಇಬ್ಬರು ಮಕ್ಕಳನ್ನು ಕರೆತಂದು ಕೊಡಬೇಕು ಹಾಗೂ ಪ್ರಕರಣದಲ್ಲಿ ತಪ್ಪಿತಸ್ಥರನ್ನು ಬಂಧಿಸಬೇಕು. ಅಲ್ಲಿಯವರೆಗೆ ಮೃತದೇಹವನ್ನು ಇಲ್ಲಿಂದ ತೆಗೆದುಕೊಂಡು ಹೋಗುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ.

ಘಟನೆಯ ಮಾಹಿತಿ ತಿಳಿದು ಸ್ಥಳಕ್ಕೆ ಆಡೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಹಿಳೆಯ ಸಾವಿನ ನಿಖರ ಕಾರಣ ಹಾಗೂ ಕುಟುಂಬಸ್ಥರು ಮಾಡಿರುವ ಆರೋಪಗಳ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img