HomeEntertainmentತಮಿಳುನಾಡು ಸಿಎಂ ಧ್ವಜಾರೋಹಣ: ಮುಂದಿನ ಸಾಲಿನಲ್ಲಿ ವಿಜಯ್ ಪೋಷಕರ ಪಕ್ಕದಲ್ಲೇ ಕುಳಿತ ತ್ರಿಶಾ

ತಮಿಳುನಾಡು ಸಿಎಂ ಧ್ವಜಾರೋಹಣ: ಮುಂದಿನ ಸಾಲಿನಲ್ಲಿ ವಿಜಯ್ ಪೋಷಕರ ಪಕ್ಕದಲ್ಲೇ ಕುಳಿತ ತ್ರಿಶಾ

For Dai;y Updates Join Our whatsapp Group

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರು ಚೆನ್ನೈನ ಫೋರ್ಟ್ ಸೇಂಟ್ ಜಾರ್ಜ್‌ನಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದರು. ಕಾರ್ಯಕ್ರಮದಲ್ಲಿ ನಟಿ ತ್ರಿಷಾ ಕೃಷ್ಣನ್ ಅವರ ಉಪಸ್ಥಿತಿ ವಿಶೇಷ ಗಮನ ಸೆಳೆಯಿತು.

ಹಳದಿ ಸೀರೆ ಧರಿಸಿ, ಮಲ್ಲಿಗೆ ಹೂ ಮುಡಿದು ಕಾರ್ಯಕ್ರಮಕ್ಕೆ ಆಗಮಿಸಿದ್ದ ನಟಿ ತ್ರಿಷಾ, ವೇದಿಕೆಯ ಮುಂಭಾಗದ ಸಾಲಿನಲ್ಲಿ ಕುಳಿತು ಮುಖ್ಯಮಂತ್ರಿ ವಿಜಯ್ ಅವರ ಆಗಮನಕ್ಕಾಗಿ ಕಾಯುತ್ತಿದ್ದರು. ಈ ವೇಳೆ ತ್ರಿಷಾ ಅವರ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

ಕಾರ್ಯಕ್ರಮದಲ್ಲಿ ತ್ರಿಷಾ ಅವರ ತಾಯಿ ಉಮಾ ಕೃಷ್ಣನ್ ಕೂಡ ಭಾಗವಹಿಸಿದ್ದರು. ಇದೇ ವೇಳೆ ಮುಖ್ಯಮಂತ್ರಿ ವಿಜಯ್ ಅವರ ತಾಯಿ ಶೋಭಾ ಚಂದ್ರಶೇಖರ್ ಅವರನ್ನು ತ್ರಿಷಾ ಆತ್ಮೀಯವಾಗಿ ಅಪ್ಪಿಕೊಂಡಿದ್ದಾರೆ. ಈ ಕ್ಷಣದ ವಿಡಿಯೋ ಕೂಡ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಗಮನ ಸೆಳೆದಿದೆ.

ಮುಖ್ಯಮಂತ್ರಿ ವಿಜಯ್ ಅವರ ಪೋಷಕರ ಪಕ್ಕದಲ್ಲೇ ತ್ರಿಷಾ ಕುಳಿತಿದ್ದರು. ಸ್ವಾತಂತ್ರ್ಯೋತ್ಸವದ ಪರೇಡ್ ಸಂದರ್ಭದಲ್ಲಿ ಮುಖ್ಯಮಂತ್ರಿ ವಿಜಯ್ ಅವರಿಗೆ ತ್ರಿಷಾ ವಂದನೆ ಸಲ್ಲಿಸಿದ ದೃಶ್ಯವೂ ಕಾರ್ಯಕ್ರಮದ ಪ್ರಮುಖ ಕ್ಷಣಗಳಲ್ಲಿ ಒಂದಾಗಿತ್ತು.

ಇನ್ನು ಕಾರ್ಯಕ್ರಮದಲ್ಲಿ ರಾಜ್ಯದ ಜನತೆಯನ್ನು ಉದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿ ವಿಜಯ್, ತಮಿಳುನಾಡಿನ ಹಕ್ಕುಗಳಿಗಾಗಿ ನಡೆಸುತ್ತಿರುವ ಹೋರಾಟವನ್ನು ಎಂದಿಗೂ ಕೈಬಿಡುವುದಿಲ್ಲ ಎಂದು ಹೇಳಿದರು.

ಸಾರ್ವಜನಿಕ ಹಿತಾಸಕ್ತಿಯೇ ಸರ್ಕಾರದ ಮೊದಲ ಆದ್ಯತೆಯಾಗಿದ್ದು, ರಾಜ್ಯದ ಅಭಿವೃದ್ಧಿಗೆ ಎಲ್ಲರೂ ಒಗ್ಗಟ್ಟಾಗಿ ಶ್ರಮಿಸಬೇಕು ಎಂದು ಕರೆ ನೀಡಿದರು. 2036ರ ವೇಳೆಗೆ ತಮಿಳುನಾಡಿನ ಆರ್ಥಿಕತೆಯನ್ನು 1.5 ಟ್ರಿಲಿಯನ್ ಡಾಲರ್‌ಗೆ ಏರಿಸುವ ಗುರಿಯನ್ನು ಹೊಂದಿದ್ದೇವೆ ಎಂದು ಮುಖ್ಯಮಂತ್ರಿ ವಿಜಯ್ ಹೇಳಿದರು.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img