ಇಂದಿನ ಬ್ಯುಸಿ ಜೀವನಶೈಲಿ, ತಡರಾತ್ರಿವರೆಗೆ ಮೊಬೈಲ್ ಬಳಕೆ, ಅನಿಯಮಿತ ಆಹಾರ ಪದ್ಧತಿ ಹಾಗೂ ಒತ್ತಡದ ಕಾರಣದಿಂದ ಅನೇಕರು ನಿದ್ರೆಯ ಸಮಸ್ಯೆಯಿಂದ ಬಳಲುತ್ತಿದ್ದಾರೆ.
ಉತ್ತಮ ನಿದ್ರೆ ಕೇವಲ ಆಯಾಸವನ್ನು ಕಡಿಮೆ ಮಾಡುವುದಷ್ಟೇ ಅಲ್ಲ, ಮನಸ್ಥಿತಿ, ಏಕಾಗ್ರತೆ ಹಾಗೂ ದೈನಂದಿನ ಕಾರ್ಯಕ್ಷಮತೆಯ ಮೇಲೂ ಉತ್ತಮ ಪರಿಣಾಮ ಬೀರುತ್ತದೆ. ಹೀಗಾಗಿ ಉತ್ತಮ ನಿದ್ರೆಗಾಗಿ ಈ 8 ಅಭ್ಯಾಸಗಳನ್ನು ರೂಢಿಸಿಕೊಳ್ಳುವುದು ಸಹಾಯಕವಾಗಬಹುದು.
ಉತ್ತಮ ನಿದ್ರೆಗಾಗಿ ಈ ಅಭ್ಯಾಸಗಳನ್ನು ಪಾಲಿಸಿ:
-
ಪ್ರತಿದಿನ ಒಂದೇ ಸಮಯಕ್ಕೆ ಮಲಗಿ, ಏಳಿ: ನಿಯಮಿತ ನಿದ್ರೆಯ ಸಮಯ ದೇಹದ ನೈಸರ್ಗಿಕ ಬಾಡಿ ಕ್ಲಾಕ್ ಸಮತೋಲನದಲ್ಲಿರಲು ಸಹಾಯ ಮಾಡುತ್ತದೆ.
-
ಮಲಗುವ ಮುನ್ನ ಮೊಬೈಲ್ ಬಳಕೆ ಕಡಿಮೆ ಮಾಡಿ: ಮಲಗುವ 30–60 ನಿಮಿಷಗಳ ಮೊದಲು ಮೊಬೈಲ್, ಟಿವಿ ಮತ್ತು ಲ್ಯಾಪ್‌ಟಾಪ್ ಬಳಕೆ ಕಡಿಮೆ ಮಾಡುವುದು ಉತ್ತಮ.
-
ರಾತ್ರಿ ಹಗುರವಾದ ಆಹಾರ ಸೇವಿಸಿ: ಮಲಗುವ ಮುನ್ನ ಅತಿಯಾಗಿ ಅಥವಾ ಭಾರವಾದ ಆಹಾರ ಸೇವಿಸುವುದನ್ನು ತಪ್ಪಿಸಿ.
-
ಸಂಜೆಯ ಬಳಿಕ ಚಹಾ-ಕಾಫಿ ಕಡಿಮೆ ಮಾಡಿ: ಕ್ಯಾಫೀನ್ ಕೆಲವರಲ್ಲಿ ನಿದ್ರೆಯನ್ನು ತಡಮಾಡಬಹುದು.
-
ಹಗಲಿನಲ್ಲಿ ವ್ಯಾಯಾಮ ಮಾಡಿ: ನಿಯಮಿತ ವಾಕಿಂಗ್ ಅಥವಾ ವ್ಯಾಯಾಮ ನಿದ್ರೆಯ ಗುಣಮಟ್ಟ ಸುಧಾರಿಸಲು ಸಹಾಯ ಮಾಡಬಹುದು.
-
ಮಲಗುವ ಕೋಣೆಯನ್ನು ಆರಾಮದಾಯಕವಾಗಿಡಿ: ಶಾಂತ, ಕತ್ತಲೆ ಮತ್ತು ತಂಪಾದ ವಾತಾವರಣ ಉತ್ತಮ ನಿದ್ರೆಗೆ ನೆರವಾಗುತ್ತದೆ.
-
ಮಲಗುವ ಮುನ್ನ ಮನಸ್ಸನ್ನು ಶಾಂತಗೊಳಿಸಿ: ಪುಸ್ತಕ ಓದುವುದು ಅಥವಾ ನಿಧಾನವಾದ ಸಂಗೀತ ಕೇಳುವುದು ಒತ್ತಡ ಕಡಿಮೆ ಮಾಡಲು ಸಹಾಯ ಮಾಡಬಹುದು.
-
ಹಗಲಿನಲ್ಲಿ ಹೆಚ್ಚು ಹೊತ್ತು ನಿದ್ರೆ ಮಾಡಬೇಡಿ: ದೀರ್ಘ ಹಗಲಿನ ನಿದ್ರೆ ರಾತ್ರಿ ನಿದ್ರೆಗೆ ಅಡ್ಡಿಯಾಗಬಹುದು.
ಯಾವಾಗ ವೈದ್ಯರನ್ನು ಸಂಪರ್ಕಿಸಬೇಕು?
ನಿರಂತರವಾಗಿ ನಿದ್ರೆ ಬರದಿರುವುದು, ರಾತ್ರಿ ಪದೇಪದೇ ಎಚ್ಚರವಾಗುವುದು, ಜೋರಾಗಿ ಗೊರಕೆ ಹೊಡೆಯುವುದು, ಉಸಿರಾಟದಲ್ಲಿ ತೊಂದರೆ ಉಂಟಾಗುವುದು ಅಥವಾ ಹಗಲಿನಲ್ಲಿ ಅತಿಯಾದ ನಿದ್ರೆ ಹಾಗೂ ಆಯಾಸ ಕಾಣಿಸಿಕೊಂಡರೆ ವೈದ್ಯರನ್ನು ಸಂಪರ್ಕಿಸುವುದು ಸೂಕ್ತ.



