ವಿಜಯಸಾಕ್ಷಿ ಸುದ್ದಿ, ಗದಗ: ನಗರದ ಗ್ರಾಮದೇವತೆಗಳಾದ ಶ್ರೀ ದ್ಯಾಮವ್ವ ಹಾಗೂ ಶ್ರೀ ದುರ್ಗಮ್ಮ ದೇವಿಯರ 12 ವರ್ಷಕ್ಕೊಮ್ಮೆ ನಡೆಯುವ ಹರಿಜಾತ್ರಾ ಮಹೋತ್ಸವದ ಅಂಗವಾಗಿ ಆಗಸ್ಟ್ 19ರಂದು ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.
ಸಂಜೆ 7 ಗಂಟೆಗೆ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಅಂತೂರ-ಬೆಂತೂರಿನ ಬೂದೀಶ್ವರ ಸಂಸ್ಥಾನಮಠದ ಪೂಜ್ಯ ಶ್ರೀ ಡಾ. ರಾಚೋಟೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳು ದಿವ್ಯ ಸಾನ್ನಿಧ್ಯ ವಹಿಸುವರು. ಟ್ರಸ್ಟ್ ಕಮಿಟಿ ಅಧ್ಯಕ್ಷ ಕೊಟ್ರಪ್ಪ ಕಮತರ ಅಧ್ಯಕ್ಷತೆ ವಹಿಸುವರು. ಜಾತ್ರಾ ಕಮಿಟಿ ಕಾರ್ಯಾಧ್ಯಕ್ಷ ಫಕ್ಕೀರಪ್ಪ ಹೆಬಸೂರ ಉಪಸ್ಥಿತರಿರುವರು.
ಮುಖ್ಯ ಅತಿಥಿಗಳಾಗಿ ಬಣಜಿಗ ಸಮಾಜದ ಅಧ್ಯಕ್ಷ ಈಶಣ್ಣ ಮುನವಳ್ಳಿ, ಮರಾಠಾ ಸಮಾಜದ ಜಿಲ್ಲಾಧ್ಯಕ್ಷ ಅರುಣಕುಮಾರ ಚವ್ಹಾಣ, ವಿಶ್ವಕರ್ಮ ಸಮಾಜದ ಆರ್.ಡಿ. ಕಡ್ಲಿಕೊಪ್ಪ, ವಾಲ್ಮೀಕಿ ಸಮಾಜದ ಜಿಲ್ಲಾಧ್ಯಕ್ಷ ಬಸವರಾಜ ಬೆಳದಡಿ ಹಾಗೂ ಉದ್ಯಮಿ ಪ್ರಕಾಶ ಕರಿ ಭಾಗವಹಿಸುವರು.
ಅತಿಥಿಗಳಾಗಿ ನಗರಸಭೆ ಸದಸ್ಯರಾದ ಲಕ್ಷ್ಮವ್ವ ಭಜಂತ್ರಿ, ರಾಘವೇಂದ್ರ ಯಳವತ್ತಿ, ಪೂರ್ಣಿಮಾ ಭರದ್ವಾಡ, ಚಂದ್ರಶೇಖರ ಗೌಡ ಕರಿಸೋಮನಗೌಡ್ರ ಹಾಗೂ ಇಮ್ತಿಯಾಜ್ ಶಿರಹಟ್ಟಿ ಉಪಸ್ಥಿತರಿರುವರು.
ನಂತರ ರಾತ್ರಿ 8.30ಕ್ಕೆ ಕಾಮಿಡಿ ಕಿಲಾಡಿ ಖ್ಯಾತಿಯ ಸಂಜು ಬಸಯ್ಯ ಹಾಗೂ ಗದುಗಿನ ನಟರಂಗ ಕಲಾ ಸಂಸ್ಥೆ ವತಿಯಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದು ದ್ಯಾಮವ್ವ ಹಾಗೂ ದುರ್ಗಮ್ಮ ದೇವಿಯರ ಹರಿಜಾತ್ರೋತ್ಸವ ಕಮಿಟಿ ಪ್ರಕಟಣೆಯಲ್ಲಿ ತಿಳಿಸಿದೆ.



