ಮಂಡ್ಯ: ಹೆದ್ದಾರಿಯಲ್ಲಿ ಅಳವಡಿಸಿದ್ದ ಸೈನ್ಬೋರ್ಡ್ಗೆ ಖಾಸಗಿ ಬಸ್ ಡಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಬೆಳ್ಳೂರು ಟೋಲ್ ಬಳಿ ನಡೆದಿದೆ.
ಮಂಗಳೂರಿನಿಂದ ಬೆಂಗಳೂರಿನತ್ತ ತೆರಳುತ್ತಿದ್ದ ಖಾಸಗಿ ಬಸ್ ಬೆಳ್ಳೂರು ಟೋಲ್ ಸಮೀಪ ವೇಗವಾಗಿ ಸಂಚರಿಸುತ್ತಿತ್ತು. ಈ ವೇಳೆ ಹೆದ್ದಾರಿಯಲ್ಲಿ ಅಳವಡಿಸಿದ್ದ ಸೈನ್ಬೋರ್ಡ್ಗೆ ಬಸ್ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಚಾಲಕನ ನಿಯಂತ್ರಣ ತಪ್ಪಿ ಬಸ್ ರಸ್ತೆಯಲ್ಲಿ ಪಲ್ಟಿಯಾಗಿದೆ.
ಅಪಘಾತದಲ್ಲಿ ಬಸ್ನಲ್ಲಿದ್ದ ಬೆಂಗಳೂರಿನ ನಿವಾಸಿ ಕಸ್ತೂರಿ ಶಾನ್ಬಾಗ್ (64) ಹಾಗೂ ಬಸ್ ಕ್ಲೀನರ್ ಅಶೋಕ್ (25) ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಬಸ್ ಪಲ್ಟಿಯಾದ ಪರಿಣಾಮ 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಅಪಘಾತದ ಬಳಿಕ ಸ್ಥಳೀಯರು ಹಾಗೂ ಪೊಲೀಸರು ಗಾಯಾಳುಗಳನ್ನು ಬಸ್ನಿಂದ ಹೊರತೆಗೆದು ಆಸ್ಪತ್ರೆಗೆ ಕರೆದೊಯ್ಯಲು ನೆರವಾದರು. ಗಾಯಾಳುಗಳನ್ನು ಬೆಳ್ಳೂರು ಬಿಜಿಎಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.
ಘಟನೆ ಕುರಿತು ಮಾಹಿತಿ ತಿಳಿದ ಕೂಡಲೇ ಬೆಳ್ಳೂರು ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಅಪಘಾತದಿಂದ ಕೆಲಕಾಲ ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೂ ಅಡಚಣೆ ಉಂಟಾಯಿತು.
ಈ ಕುರಿತು ಬೆಳ್ಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಸ್ ಅತಿವೇಗವಾಗಿ ಚಲಿಸುತ್ತಿತ್ತೇ ಅಥವಾ ಅಪಘಾತಕ್ಕೆ ಬೇರೆ ಯಾವುದೇ ಕಾರಣವಿದೆಯೇ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.



