HomeKarnataka Newsಕಾಂಗ್ರೆಸ್ ಭ್ರಷ್ಟಾಚಾರ ಖಂಡಿಸಿ ಬಿಜೆಪಿಯಿಂದ 20 ದಿನಗಳ ಪಾದಯಾತ್ರೆ, ಶ್ರೀರಾಮುಲುಗೆ ಸಂಘಟನಾ ಹೊಣೆ

ಕಾಂಗ್ರೆಸ್ ಭ್ರಷ್ಟಾಚಾರ ಖಂಡಿಸಿ ಬಿಜೆಪಿಯಿಂದ 20 ದಿನಗಳ ಪಾದಯಾತ್ರೆ, ಶ್ರೀರಾಮುಲುಗೆ ಸಂಘಟನಾ ಹೊಣೆ

For Dai;y Updates Join Our whatsapp Group

ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಬಹುಕೋಟಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ, ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರವನ್ನು ಖಂಡಿಸಿ ರಾಜ್ಯ ಬಿಜೆಪಿ ಬೃಹತ್ ಪಾದಯಾತ್ರೆ ನಡೆಸಲು ಸಜ್ಜಾಗಿದೆ.

ಬಿಜೆಪಿ ಕಚೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಬಿಜೆಪಿ ನಾಯಕ ಬಿ. ಶ್ರೀರಾಮುಲು, ಪಾದಯಾತ್ರೆಯ ರೂಪುರೇಷೆಗಳ ಬಗ್ಗೆ ಪಕ್ಷದ ಮಟ್ಟದಲ್ಲಿ ತೀವ್ರ ಚರ್ಚೆಗಳು ನಡೆಯುತ್ತಿವೆ ಎಂದು ತಿಳಿಸಿದರು. ಇನ್ನೆರಡು ದಿನಗಳಲ್ಲಿ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಅಧಿಕೃತ ದಿನಾಂಕ ಮತ್ತು ಸಂಪೂರ್ಣ ವಿವರಗಳನ್ನು ಪ್ರಕಟಿಸಲಿದ್ದಾರೆ ಎಂದು ಅವರು ಹೇಳಿದರು.

ದಾವಣಗೆರೆ ಜಿಲ್ಲೆಯ ಜಗಳೂರು ವಿಧಾನಸಭಾ ಕ್ಷೇತ್ರದಿಂದ ಆರಂಭವಾಗಲಿರುವ ಈ ಪಾದಯಾತ್ರೆ ಬಳ್ಳಾರಿಯವರೆಗೆ ಸಾಗಲಿದ್ದು, ಸುಮಾರು 170 ಕಿಲೋಮೀಟರ್ ವ್ಯಾಪ್ತಿಯನ್ನು ಒಳಗೊಂಡಿರಲಿದೆ. ಒಟ್ಟು 20 ದಿನಗಳ ಕಾಲ ನಡೆಯಲಿರುವ ಈ ಯಾತ್ರೆಗೆ ಮುಂದಿನ ವಾರಾಂತ್ಯದಲ್ಲಿ ಚಾಲನೆ ನೀಡಲು ಸಿದ್ಧತೆಗಳು ನಡೆದಿವೆ.

ಜಗಳೂರಿನಲ್ಲಿ ನಡೆಯಲಿರುವ ಉದ್ಘಾಟನಾ ಸಮಾರಂಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಪಕ್ಷ ನಾಯಕರು ಸೇರಿದಂತೆ ರಾಜ್ಯದ ಪ್ರಮುಖ ಮುಖಂಡರು ಭಾಗವಹಿಸಲಿದ್ದಾರೆ. ಸಹಸ್ರಾರು ಸಂಖ್ಯೆಯಲ್ಲಿ ಜನರನ್ನು ಸೇರಿಸುವ ಗುರಿಯನ್ನು ಪಕ್ಷ ಹೊಂದಿದೆ.

ಇಡೀ 170 ಕಿ.ಮೀ ಉದ್ದದ ಪಾದಯಾತ್ರೆಯ ಸಂಪೂರ್ಣ ಸಂಘಟನೆ ಮತ್ತು ಉಸ್ತುವಾರಿಯ ಹೊಣೆಯನ್ನು ಮಾಜಿ ಸಚಿವ ಶ್ರೀರಾಮುಲು ಅವರೇ ವಹಿಸಿಕೊಳ್ಳಲಿದ್ದಾರೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img