ಬೆಂಗಳೂರು: ನೈಸ್ ಯೋಜನೆಯನ್ನು ರಾಜ್ಯ ಸರ್ಕಾರ ಕೂಡಲೇ ವಶಕ್ಕೆ ಪಡೆದು, ಟೋಲ್ ಸಂಗ್ರಹವನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿ ಜೆಡಿಎಸ್ ನಿಯೋಗವು ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಮನವಿ ಸಲ್ಲಿಸಿದೆ. ಜೆಡಿಎಸ್ ಶಾಸಕಾಂಗ ನಾಯಕ ಸುರೇಶ್ ಬಾಬು ನೇತೃತ್ವದ ಶಾಸಕರ ನಿಯೋಗ ಮುಖ್ಯ ಕಾರ್ಯದರ್ಶಿಗಳನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು.
ಮನವಿ ಸಲ್ಲಿಸಿದ ಬಳಿಕ ಮಾತನಾಡಿದ ಸುರೇಶ್ ಬಾಬು, ನೈಸ್ ಯೋಜನೆಯಲ್ಲಿ ಹಗಲು ದರೋಡೆ ನಡೆಯುತ್ತಿದೆ ಎಂದು ಆರೋಪಿಸಿದರು. “ಯಾರು ಇವರನ್ನು ರಕ್ಷಣೆ ಮಾಡುತ್ತಿದ್ದಾರೆ?” ಎಂದು ಪ್ರಶ್ನಿಸಿದ ಅವರು, ಹೈಕೋರ್ಟ್ ಕೂಡ ಟೋಲ್ ಸಂಗ್ರಹ ಮಾಡಬಾರದು ಎಂದು ಹೇಳಿದ್ದರೂ ಇನ್ನೂ ಟೋಲ್ ಸಂಗ್ರಹ ಮುಂದುವರಿದಿದೆ ಎಂದು ದೂರಿದರು.
ಕೋರ್ಟ್ ಆದೇಶವನ್ನು ಸರ್ಕಾರವೇ ಉಲ್ಲಂಘಿಸುತ್ತಿದೆ ಎಂದು ಆರೋಪಿಸಿದ ಸುರೇಶ್ ಬಾಬು, ಈ ಹಿನ್ನೆಲೆಯಲ್ಲಿ ಮುಖ್ಯ ಕಾರ್ಯದರ್ಶಿಗಳಿಗೆ ಮನವಿ ಸಲ್ಲಿಸಲಾಗಿದೆ. ಸಮಸ್ಯೆ ಬಗೆಹರಿಯದಿದ್ದರೆ ರಾಜ್ಯಪಾಲರಿಗೂ ದೂರು ನೀಡುವುದಾಗಿ ತಿಳಿಸಿದರು.
ರಾಜ್ಯ ಸರ್ಕಾರ ತಮ್ಮ ಮನವಿಗೆ ಸ್ಪಂದಿಸದಿದ್ದರೆ ಕೇಂದ್ರ ಸರ್ಕಾರದ ಮೊರೆ ಹೋಗುವುದಾಗಿ ಹೇಳಿದ ಅವರು, ಅಗತ್ಯವಿದ್ದರೆ ರಾಷ್ಟ್ರಪತಿಗಳಿಗೂ ದೂರು ನೀಡುವುದಾಗಿ ಎಚ್ಚರಿಸಿದರು. ಕೋರ್ಟ್ ಆದೇಶವನ್ನು ಸರ್ಕಾರ ಪಾಲಿಸಬೇಕು ಹಾಗೂ ನೈಸ್ ಯೋಜನೆಗಾಗಿ ಭೂಮಿ ಕಳೆದುಕೊಂಡಿರುವ ರೈತರಿಗೆ ಬಾಕಿ ಹಣ ಪಾವತಿಸಬೇಕು ಎಂದು ಆಗ್ರಹಿಸಿದರು.
ಇದೇ ವೇಳೆ ವಿಧಾನ ಪರಿಷತ್ ಜೆಡಿಎಸ್ ನಾಯಕ ಭೋಜೇಗೌಡ ಮಾತನಾಡಿ, ನೈಸ್ ಯೋಜನೆಗೆ ಸಂಬಂಧಿಸಿದಂತೆ ನ್ಯಾಯಾಲಯ ಮಹತ್ವದ ಆದೇಶಗಳನ್ನು ನೀಡಿದೆ. ಈ ಯೋಜನೆಯಲ್ಲಿ ದೊಡ್ಡ ಅಕ್ರಮ ನಡೆದಿದೆ ಎಂದು ಕೋರ್ಟ್ ಹೇಳಿದೆ. ಕೂಡಲೇ ಟೋಲ್ ಸಂಗ್ರಹ ನಿಲ್ಲಿಸಿ, ರೈತರಿಗೆ ಬಾಕಿ ಹಣ ಪಾವತಿಸುವಂತೆ ಸರ್ಕಾರವನ್ನು ಒತ್ತಾಯಿಸಿದ



