ವಿಜಯಸಾಕ್ಷಿ ಸುದ್ದಿ, ಗದಗ: ನಿಸರ್ಗ ಯೋಗ ಸೆಂಟರ್, ಧಾರವಾಡ ಹಾಗೂ ಕಿಟಲ್ ಕಲಾ ಮಹಾವಿದ್ಯಾಲಯ, ಧಾರವಾಡ ಇವರ ಸಹಯೋಗದಲ್ಲಿ ಇತ್ತೀಚೆಗೆ ನಡೆದ ಜಿಲ್ಲಾ ಮಟ್ಟದ ಮುಕ್ತ ಯೋಗಾಸನ ಸ್ಪರ್ಧೆಯಲ್ಲಿ ಸಿದ್ಧಲಿಂಗನಗರದ ಬಸವೇಶ್ವರ ಹಿರಿಯ ಪ್ರಾಥಮಿಕ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಸಾಹಿತ್ಯ ಕೆ. ಜಾಧವ ಉತ್ತಮ ಸಾಧನೆ ಮಾಡಿದ್ದಾರೆ.
೮ರಿಂದ ೧೨ ವರ್ಷದೊಳಗಿನ ಬಾಲಕಿಯರ ವಿಭಾಗದಲ್ಲಿ ಸ್ಪರ್ಧಿಸಿದ ಸಾಹಿತ್ಯ ಜಾಧವ ಅವರು ಆರನೇ ಸ್ಥಾನ ಪಡೆದು ಗಮನಾರ್ಹ ಸಾಧನೆ ಮಾಡಿದ್ದಾರೆ.
ಯೋಗಾಸನ ಸ್ಪರ್ಧೆಯಲ್ಲಿ ಯಶಸ್ಸು ಸಾಧಿಸಿದ ಸಾಹಿತ್ಯ ಜಾಧವ ಅವರನ್ನು ಶಾಲೆಯ ಮುಖ್ಯೋಪಾಧ್ಯಾಯಿನಿ ಲತಾ ಕಾಲವಾಡ, ಶಿವಾನಂದ ಗಿಡ್ಡಕೆಂಚಣ್ಣವರ, ದೈಹಿಕ ಶಿಕ್ಷಣ ಶಿಕ್ಷಕ ಎಸ್.ಎಂ. ಬುರಡಿ, ಪಾಲಕರಾದ ಮಾಲಾಶ್ರೀ ಹಾಗೂ ಕೃಷ್ಣಾಜಿ ಜಾಧವ ಮತ್ತು ಯೋಗಾಸನ ಕ್ರೀಡಾಭಿಮಾನಿಗಳು ಅಭಿನಂದಿಸಿದ್ದಾರೆ.
ಮುಂದಿನ ದಿನಗಳಲ್ಲಿಯೂ ಇನ್ನಷ್ಟು ಉನ್ನತ ಸಾಧನೆ ಮಾಡುವಂತಾಗಲಿ ಎಂದು ಶುಭ ಹಾರೈಸಿದ್ದಾರೆ.



