ವಿಜಯಸಾಕ್ಷಿ ಸುದ್ದಿ, ಹುಬ್ಬಳ್ಳಿ: ಹುಬ್ಬಳ್ಳಿ ಗ್ರಾಮೀಣ ವಲಯದ ಉಣಕಲ್ ಕೆಪಿಎಸ್ ಶಾಲೆಯಲ್ಲಿ ಸಹ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಈಶ್ವರಗೌಡ ಶಂ. ಬಮ್ಮನಗೌಡ್ರ ಅವರಿಗೆ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಲಭಿಸಿದೆ.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸೆ. 5ರಂದು ಧಾರವಾಡದಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಮೂಲತಃ ಗದಗ ಜಿಲ್ಲೆ ರೋಣ ತಾಲೂಕಿನ ಗಾಡಗೋಳಿ ಗ್ರಾಮದವರಾದ ಈಶ್ವರಗೌಡ ಬಮ್ಮನಗೌಡ್ರ ಅವರು ಬೆಂಗಳೂರು ಹಾಗೂ ಧಾರವಾಡ ಜಿಲ್ಲೆಗಳ ವಿವಿಧ ಶಾಲೆಗಳಲ್ಲಿ ಸುಮಾರು 28 ವರ್ಷಗಳ ಸುದೀರ್ಘ ಸೇವೆ ಸಲ್ಲಿಸಿದ್ದಾರೆ.



