HomeBengaluru Newsಗಣೇಶ ಹಬ್ಬ ಆಚರಿಸುವವರಿಗೆ GBA ಹೊಸ ರೂಲ್ಸ್; ತಪ್ಪಿದ್ರೆ ಕ್ರಿಮಿನಲ್ ಕೇಸ್!

ಗಣೇಶ ಹಬ್ಬ ಆಚರಿಸುವವರಿಗೆ GBA ಹೊಸ ರೂಲ್ಸ್; ತಪ್ಪಿದ್ರೆ ಕ್ರಿಮಿನಲ್ ಕೇಸ್!

For Dai;y Updates Join Our whatsapp Group

ಬೆಂಗಳೂರು: ಗಣೇಶ ಹಬ್ಬಕ್ಕೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಹಲವು ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೆ ತಂದಿದೆ.

ಪರಿಸರ ಸಂರಕ್ಷಣೆ ಹಾಗೂ ಸಾರ್ವಜನಿಕರ ಸುರಕ್ಷತೆಯ ದೃಷ್ಟಿಯಿಂದ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮತ್ತು ವಿಸರ್ಜನೆಗೆ ಸಂಬಂಧಿಸಿದಂತೆ ಸುತ್ತೋಲೆ ಹೊರಡಿಸಲಾಗಿದೆ.

ಮುಖ್ಯವಾಗಿ ಪಿಓಪಿ ಗಣೇಶ ಮೂರ್ತಿಗಳ ತಯಾರಿಕೆ ಹಾಗೂ ಮಾರಾಟವನ್ನು ಸಂಪೂರ್ಣ ನಿಷೇಧಿಸಲಾಗಿದೆ. ನಿಯಮ ಉಲ್ಲಂಘಿಸಿ ಪಿಓಪಿ ಮೂರ್ತಿಗಳ ತಯಾರಿಕೆ ಅಥವಾ ಮಾರಾಟ ಮಾಡುವುದು ಕಂಡುಬಂದರೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದು GBA ಎಚ್ಚರಿಕೆ ನೀಡಿದೆ.

ಇನ್ನು ಸಾರ್ವಜನಿಕವಾಗಿ ಗಣೇಶ ಮೂರ್ತಿ ಪ್ರತಿಷ್ಠಾಪಿಸಲು ಆಯೋಜಕರು ಕಡ್ಡಾಯವಾಗಿ ಅನುಮತಿ ಪಡೆಯಬೇಕು. ಇದಕ್ಕಾಗಿ ವಾರ್ಡ್‌ವಾರು ನೋಡಲ್ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು, ಅರ್ಜಿ ಸಲ್ಲಿಸಿದ ಒಂದೇ ದಿನದಲ್ಲಿ ಪರಿಶೀಲನೆ ನಡೆಸಿ ಅನುಮತಿ ನೀಡುವ ವ್ಯವಸ್ಥೆ ಮಾಡಲಾಗಿದೆ. ಸಿಂಗಲ್ ವಿಂಡೋ ಮೂಲಕ ಅರ್ಜಿ ವಿಲೇವಾರಿಗೆ ಅವಕಾಶ ಕಲ್ಪಿಸಲಾಗಿದೆ.

ಮನೆಯಲ್ಲೇ ವಿಸರ್ಜನೆ ಮಾಡುವ ಮೂರ್ತಿಗಳ ಮಣ್ಣನ್ನು ಹೊರಗೆ ಎಸೆಯದೆ ಮನೆಯಲ್ಲೇ ವಿಲೇವಾರಿ ಮಾಡುವಂತೆ ಸೂಚಿಸಲಾಗಿದೆ. ಈ ಮಣ್ಣನ್ನು ಹೂಕುಂಡಗಳು ಹಾಗೂ ಕೈತೋಟಗಳಲ್ಲಿ ಮರುಬಳಕೆ ಮಾಡುವಂತೆ GBA ಮನವಿ ಮಾಡಿದೆ.

ಅದೇ ರೀತಿ, GBA ನಿಗದಿಪಡಿಸಿರುವ ಸ್ಥಳಗಳನ್ನು ಹೊರತುಪಡಿಸಿ ಬೇರೆಡೆ ಗಣೇಶ ಮೂರ್ತಿ ವಿಸರ್ಜನೆ ಮಾಡಿದರೆ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದು ಎಂದು ಖಡಕ್ ಎಚ್ಚರಿಕೆ ನೀಡಲಾಗಿದೆ.

ಇನ್ನು ಗಣೇಶ ಹಬ್ಬದ ಆಚರಣೆಯಲ್ಲಿ ಪ್ಲಾಸ್ಟಿಕ್ ಬಳಕೆಯನ್ನೂ ಸಂಪೂರ್ಣವಾಗಿ ನಿಷೇಧಿಸಲಾಗಿದೆ. ನಿಯಮ ಉಲ್ಲಂಘಿಸಿ ಪ್ಲಾಸ್ಟಿಕ್ ಬಳಕೆ ಮಾಡುವುದು ಕಂಡುಬಂದರೆ ಆಯೋಜಕರಿಗೆ ದಂಡ ವಿಧಿಸಲಾಗುವುದು ಎಂದು ತಿಳಿಸಲಾಗಿದೆ.

ಗಣೇಶೋತ್ಸವದ ವೇಳೆ ಪೆಂಡಾಲ್ ಅಳವಡಿಕೆ ಹಾಗೂ ಧ್ವನಿವರ್ಧಕ ಬಳಕೆಗೆ ಶುಲ್ಕ ಪಾವತಿಸುವುದು ಕಡ್ಡಾಯವಾಗಿದೆ. ಸ್ಥಳೀಯ ಪೊಲೀಸ್ ಠಾಣೆ ಅಥವಾ ಬೆಂಗಳೂರು ಒನ್ ಕೇಂದ್ರಗಳಲ್ಲಿ ಶುಲ್ಕ ಪಾವತಿಸಲು ಅವಕಾಶ ಕಲ್ಪಿಸಲಾಗಿದೆ.

ಶುಲ್ಕ ಪಾವತಿಯ ರಸೀದಿಯನ್ನು ಅರ್ಜಿಯೊಂದಿಗೆ ಸಲ್ಲಿಸಿದ ಬಳಿಕವಷ್ಟೇ ಸಾರ್ವಜನಿಕವಾಗಿ ಗಣೇಶ ಹಬ್ಬ ಆಚರಿಸಲು GBA ಅನುಮತಿ ನೀಡಲಿದೆ ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.

ಒಟ್ಟಾರೆ, ಗಣೇಶ ಹಬ್ಬದ ಆಚರಣೆಗೆ ಯಾವುದೇ ಅಡ್ಡಿಯಾಗದಂತೆ ನೋಡಿಕೊಳ್ಳುವುದರ ಜೊತೆಗೆ ಪರಿಸರ ಸಂರಕ್ಷಣೆ ಹಾಗೂ ನಿಯಮ ಪಾಲನೆಗೆ GBA ಈ ಬಾರಿ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img