HomeGadag Newsಯುವಕರೇ ದೇಶದ ಸಂಪತ್ತು: ಚಂದ್ರು ಲಮಾಣಿ

ಯುವಕರೇ ದೇಶದ ಸಂಪತ್ತು: ಚಂದ್ರು ಲಮಾಣಿ

For Dai;y Updates Join Our whatsapp Group

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಯುವಕರು ದೇಶದ ಸಂಪತ್ತು. ವಿದ್ಯಾರ್ಥಿ ಜೀವನದಿಂದಲೇ ನಾಯಕತ್ವದ ಗುಣಗಳನ್ನು ಬೆಳೆಸಿಕೊಂಡು ದೇಶ, ನಾಡು, ನುಡಿ, ನೆಲ, ಭಾಷೆ ಹಾಗೂ ಸಂವಿಧಾನದ ಬಗ್ಗೆ ಅಭಿಮಾನ ಬೆಳೆಸಿಕೊಳ್ಳಬೇಕು ಎಂದು ಶಾಸಕ ಡಾ. ಚಂದ್ರು ಲಮಾಣಿ ಹೇಳಿದರು.

ಪಟ್ಟಣದ ಪುರಸಭೆ ಕಲಾ ಮಹಾವಿದ್ಯಾಲಯದಲ್ಲಿ ತಾಲೂಕು ಆಡಳಿತ, ಪುರಸಭೆ, ಶಿಕ್ಷಣ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಮಂಗಳವಾರ ಆಯೋಜಿಸಿದ್ದ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಹಾಗೂ ಯುವ ಸಂಸತ್ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಭಾರತದ ಸ್ವಾತಂತ್ರ್ಯ ಹಾಗೂ ಪ್ರಜಾಪ್ರಭುತ್ವ ವ್ಯವಸ್ಥೆ ವಿಶ್ವಮಾನ್ಯವಾಗಿದೆ. ದೇಶದ ಆಡಳಿತ ಸಂವಿಧಾನದ ಆಶಯದಂತೆ ನಡೆಯಬೇಕು. ಶಾಸಕಾಂಗ, ಕಾರ್ಯಾಂಗ ಹಾಗೂ ನ್ಯಾಯಾಂಗ ವ್ಯವಸ್ಥೆಗಳು ಸಂವಿಧಾನದ ಚೌಕಟ್ಟಿನಲ್ಲಿಯೇ ಕಾರ್ಯನಿರ್ವಹಿಸಬೇಕು. ಪ್ರತಿಯೊಬ್ಬರೂ ಸಂವಿಧಾನದ ತತ್ವಗಳು ಮತ್ತು ಮೌಲ್ಯಗಳನ್ನು ಅರಿತು, ಅದರ ಆಶಯದಂತೆ ಬದುಕಬೇಕು ಎಂದರು.

ಯುವ ಸಂಸತ್‌ನಂತಹ ಕಾರ್ಯಕ್ರಮಗಳು ವಿದ್ಯಾರ್ಥಿಗಳಲ್ಲಿ ಸಂಸದೀಯ ವ್ಯವಸ್ಥೆಯ ಕುರಿತು ಅರಿವು ಮೂಡಿಸುವುದರ ಜತೆಗೆ ಚರ್ಚೆ, ವಿಚಾರ ಮಂಡನೆ, ನಾಯಕತ್ವ ಹಾಗೂ ನಿರ್ಧಾರ ಕೈಗೊಳ್ಳುವ ಸಾಮರ್ಥ್ಯ ಬೆಳೆಸಲು ಸಹಕಾರಿಯಾಗುತ್ತವೆ ಎಂದು ಹೇಳಿದರು.

ತಹಸೀಲ್ದಾರ್ ಧನಂಜಯ ಎಂ. ಮಾತನಾಡಿ, ಯುವಕರು ದುಶ್ಚಟಗಳಿಂದ ದೂರವಿದ್ದು, ಶಿಸ್ತು, ಸಂಸ್ಕಾರ ಹಾಗೂ ಉತ್ತಮ ಚಿಂತನೆಗಳನ್ನು ಬೆಳೆಸಿಕೊಳ್ಳಬೇಕು. ಸಮಾಜದ ಒಳಿತಿಗಾಗಿ ಕಾರ್ಯನಿರ್ವಹಿಸುವ ಮೂಲಕ ಉತ್ತಮ ಸಮಾಜ ನಿರ್ಮಾಣಕ್ಕೆ ಬದ್ಧರಾಗಬೇಕು. ಭವಿಷ್ಯದಲ್ಲಿ ದೇಶದ ಜವಾಬ್ದಾರಿಯುತ ನಾಗರಿಕರಾಗಿ ರೂಪುಗೊಳ್ಳಲು ಇಂತಹ ಕಾರ್ಯಕ್ರಮಗಳು ಅಗತ್ಯ ಎಂದರು.

ವಕೀಲ ಬಿ.ಎಸ್. ಬಾಳೇಶ್ವರಮಠ ಅವರು ಪ್ರಜಾಪ್ರಭುತ್ವದ ಮೌಲ್ಯಗಳು ಹಾಗೂ ಯುವಕರ ಪಾತ್ರದ ಕುರಿತು ಉಪನ್ಯಾಸ ನೀಡಿದರು.

ಗ್ಯಾರಂಟಿ ಸಮಿತಿ ಅಧ್ಯಕ್ಷ ನಾಗರಾಜ ಮಡಿವಾಳರ, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಮಂಜುಳಾ ಹಕಾರಿ, ಸಿಪಿಐ ಬಿ.ವಿ. ನ್ಯಾಮಗೌಡ್ರ, ಪುರಸಭೆ ಮುಖ್ಯಾಧಿಕಾರಿ ಪರಶುರಾಮ ಗುಡದಾರಿ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಗೋಪಾಲ ನಾಯಕ, ಪಿಎಸ್‌ಐ ಟಿ.ಕೆ. ರಾಠೋಡ, ಇಸಿಒ ರಾಘವೇಂದ್ರ ಜೋಶಿ, ಪ್ರಾಚಾರ್ಯ ನಾಗರಾಜ ಕಳ್ಳಿಮನಿ ಸೇರಿದಂತೆ ಉಪನ್ಯಾಸಕರು, ಸಮಾಜ ಕಲ್ಯಾಣ ಇಲಾಖೆ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಎಫ್.ಸಿ. ಚಕಾರದ ನಿರೂಪಿಸಿದರು.

ವಿದ್ಯಾರ್ಥಿಗಳು ವಿದ್ಯಾರ್ಥಿ ಜೀವನದಿಂದಲೇ ನಾಯಕತ್ವದ ಗುಣಗಳನ್ನು ಬೆಳೆಸಿಕೊಂಡು ಸಂವಿಧಾನದ ಮೌಲ್ಯಗಳನ್ನು ಅರಿತು, ದೇಶದ ಜವಾಬ್ದಾರಿಯುತ ನಾಗರಿಕರಾಗಿ ರೂಪುಗೊಳ್ಳಬೇಕು.

— ಡಾ. ಚಂದ್ರು ಲಮಾಣಿ, ಶಾಸಕ

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img