HomeGadag Newsಅಹಿಂದ ಧ್ವನಿ ಅಡಗಿಸಲು ಇಡಿ ದಾಳಿ: ಸಂಗನಗೌಡ ಪಾಟೀಲ

ಅಹಿಂದ ಧ್ವನಿ ಅಡಗಿಸಲು ಇಡಿ ದಾಳಿ: ಸಂಗನಗೌಡ ಪಾಟೀಲ

For Dai;y Updates Join Our whatsapp Group

ವಿಜಯಸಾಕ್ಷಿ ಸುದ್ದಿ, ಡಂಬಳ: ಅಹಿಂದ ವರ್ಗಗಳ ಪ್ರಬಲ ಧ್ವನಿಯಾಗಿರುವ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹಾಗೂ ಅವರ ಕುಟುಂಬಸ್ಥರ ನಿವಾಸಗಳ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿರುವುದು ರಾಜಕೀಯ ಪ್ರೇರಿತ ಕ್ರಮವಾಗಿದೆ ಎಂದು ರೋಣ ಗ್ಯಾರಂಟಿ ಸಮಿತಿ ಅಧ್ಯಕ್ಷ ಸಂಗನಗೌಡ (ಮಿಥುನ) ಜಿ. ಪಾಟೀಲ ಆರೋಪಿಸಿದರು.

ಡಂಬಳ ಹೋಬಳಿಯ ಹಿರೇವಡ್ಡಟ್ಟಿ ಗ್ರಾಮದಲ್ಲಿ ಮಾತನಾಡಿದ ಅವರು, ಬಿಜೆಪಿಯಲ್ಲಿ ಭ್ರಷ್ಟಾಚಾರ ನಡೆಸಿದವರು ಯಾರೂ ಇಲ್ಲವೇ? ಅಹಿಂದ ವರ್ಗಗಳ ಧ್ವನಿಯಾಗಿರುವ ಸತೀಶ್ ಜಾರಕಿಹೊಳಿ ಅವರನ್ನು ಮಾತ್ರ ಏಕೆ ಟಾರ್ಗೆಟ್ ಮಾಡಲಾಗುತ್ತಿದೆ? ಎಂದು ಪ್ರಶ್ನಿಸಿದರು.

ಸತೀಶ್ ಜಾರಕಿಹೊಳಿ ಅವರ ರಾಜಕೀಯ ಬೆಳವಣಿಗೆಯನ್ನು ಸಹಿಸಲಾಗದೆ ಬಿಜೆಪಿ ಇಡಿ ಹಾಗೂ ಆದಾಯ ತೆರಿಗೆ (ಐಟಿ) ಸಂಸ್ಥೆಗಳನ್ನು ಬಳಸಿಕೊಂಡು ದಾಳಿ ನಡೆಸುತ್ತಿದೆ ಎಂದು ಆರೋಪಿಸಿದ ಅವರು, ಈ ಹಿಂದೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಮೇಲೂ ಇದೇ ರೀತಿಯ ದಾಳಿ ನಡೆಸಿ ಅವರ ರಾಜಕೀಯ ವರ್ಚಸ್ಸಿಗೆ ಧಕ್ಕೆ ತರುವ ಪ್ರಯತ್ನ ಮಾಡಲಾಗಿತ್ತು ಎಂದು ಹೇಳಿದರು.

ನಮ್ಮ ನಾಯಕರು ಕಾನೂನುಬದ್ಧವಾಗಿಯೇ ವ್ಯಾಪಾರ ವಹಿವಾಟು ನಡೆಸುತ್ತಿದ್ದಾರೆ. ತನಿಖೆಗೆ ಮುಂದಾಗಿರುವ ಇಡಿ ಹಾಗೂ ಐಟಿ ಅಧಿಕಾರಿಗಳಿಗೆ ಅಗತ್ಯ ದಾಖಲೆಗಳನ್ನು ನೀಡಿ ಕಾನೂನುಬದ್ಧವಾಗಿ ಉತ್ತರಿಸಲಿದ್ದಾರೆ. ತನಿಖೆ ಪೂರ್ಣಗೊಂಡ ಬಳಿಕ ಸತ್ಯಾಸತ್ಯತೆ ಹೊರಬರಲಿದೆ” ಎಂದು ಸಂಗನಗೌಡ ಪಾಟೀಲ ಹೇಳಿದರು.

ಸತೀಶ್ ಜಾರಕಿಹೊಳಿ ಅವರು ಪರಿಶಿಷ್ಟ ಪಂಗಡ (ಎಸ್‌ಟಿ) ಸಮುದಾಯದ ಪ್ರಭಾವಿ ನಾಯಕರಾಗಿದ್ದು, ಅಹಿಂದ ವರ್ಗಗಳ ಪರವಾಗಿ ಧ್ವನಿ ಎತ್ತುತ್ತಿದ್ದಾರೆ. ಅವರ ರಾಜಕೀಯ ಪ್ರಭಾವವನ್ನು ಕುಗ್ಗಿಸುವ ಉದ್ದೇಶದಿಂದಲೇ ದಾಳಿ ನಡೆಸಲಾಗಿದೆ ಎಂಬ ಅನುಮಾನ ಮೂಡುತ್ತಿದೆ ಎಂದು ಅವರು ಆರೋಪಿಸಿದರು.

ಕೇಂದ್ರ ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧ ಪಕ್ಷದ ನಾಯಕರನ್ನು ಗುರಿಯಾಗಿಸುವ ಪ್ರವೃತ್ತಿ ಪ್ರಜಾಪ್ರಭುತ್ವ ವ್ಯವಸ್ಥೆಗೆ ಆರೋಗ್ಯಕರವಲ್ಲ. ರಾಜಕೀಯ ವಿರೋಧಿಗಳನ್ನು ತನಿಖೆಯ ಹೆಸರಿನಲ್ಲಿ ಹತ್ತಿಕ್ಕುವ ಪ್ರಯತ್ನ ನಡೆಯಬಾರದು ಎಂದು ಅವರು ಹೇಳಿದರು.

ಸುಳ್ಳು ವದಂತಿಗಳಿಗೆ ಯಾರೂ ಕಿವಿಗೊಡಬಾರದು. ತನಿಖೆ ಬಳಿಕ ಸತ್ಯ ಹೊರಬರಲಿದೆ. ಮುಂದಿನ ದಿನಗಳಲ್ಲಿ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ರಾಜ್ಯದ ಜನತೆ ತಕ್ಕ ಉತ್ತರ ನೀಡಲಿದ್ದಾರೆ.

— ಸಂಗನಗೌಡ ಪಾಟೀಲ

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img